Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯಲ್ಲಿ ವಚನ ಮಂಟಪ ನಿರ್ಮಾಣ :...

ಕಲಬುರಗಿಯಲ್ಲಿ ವಚನ ಮಂಟಪ ನಿರ್ಮಾಣ : ಡಾ.ಶರಣಪ್ರಕಾಶ್‌ ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ30 April 2025 5:02 PM IST
share
ಕಲಬುರಗಿಯಲ್ಲಿ ವಚನ ಮಂಟಪ ನಿರ್ಮಾಣ : ಡಾ.ಶರಣಪ್ರಕಾಶ್‌ ಪಾಟೀಲ್‌

ಕಲಬುರಗಿ : ಹನ್ನೆರಡನೇ ಶತಮಾನದಲ್ಲಿ ಜಾತಿ ರಹಿತ ಸಮ-ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಬದುಕಿನುದ್ದಕ್ಕೂ ಸರ್ವ ಜೀವಿಗೂ ಲೇಸನ್ನೆ ಬಯಸಿದ್ದ ಬಸವಣ್ಣ ಮತ್ತು ಬಸವಾದಿ ಶರಣರ ವಚನಗಳು ಇಡೀ ವಿಶ್ವಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಕಲಬುರಗಿಯಲ್ಲಿ ವಚನ ಮಂಟಪ ನಿರ್ಮಾಣ ಮಾಡಲಾಗುವುದು ಎಂದು ರಾಜ್ಯ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೋವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ.

ಕಲಬುರಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಯಂತ್ಯೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಜಗತ್ ವೃತ್ತದಲ್ಲಿರುವ ಸಾಂಸ್ಕೃತಿಕ ನಾಯಕ ಬಸವೇಶ್ವರರ ಅಶ್ವಾರೋಹಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ವೇದಿಕೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಕಳೆದ 2024-25ನೇ ಸಾಲಿನ ರಾಜ್ಯ ಸರಕಾರದ ಆಯವ್ಯಯದಲ್ಲಿ ಇದನ್ನು ಘೋಷಿಸಿದ್ದು, ಕೂಡಲೇ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಹೀಗಾಗಿ ಜಿಲ್ಲಾಡಳಿತದಿಂದ ನೀಲಿ ನಕ್ಷೆ ತಯಾರಿಸುವ ಕೆಲಸ ನಡೆದಿದೆ ಎಂದು ಅವರು ತಿಳಿಸಿದರು.

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ, ಅಫಜಲಪೂರ ಶಾಸಕರು ಮತ್ತು ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಎಂ.ವೈ.ಪಾಟೀಲ ಮಾತನಾಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಾಪಕ ಡಾ.ದುರ್ಗಾದಾಸ್ ಉಪನ್ಯಾಸ ನೀಡಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀಶೈಲಂ ಸಾರಂಮಠದ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು.

ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಗೆ ಸನ್ಮಾನ :

ಇದೇ ಸಂದರ್ಭದಲ್ಲಿ 2024ನೇ ಸಾಲಿನ ಉತ್ತಮ ಜಿಲ್ಲಾ ಚುನಾವಣಾಧಿಕಾರಿಗಳೆಂದು ಭಾರತ ಚುನಾವಣಾ ಆಯೋಗದಿಂದ ಪ್ರಶಸ್ತಿ ಪಡೆದಿರುವ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಗೆ ವೇದಿಕೆಯಲ್ಲಿ ಸಚಿವರಾದಿಯಾಗಿ ಗಣ್ಯರು ಸನ್ಮಾನಿಸಿದರು. ಇದಲ್ಲದೆ ಇತ್ತೀಚೆಗೆ ಯು.ಪಿ.ಎಸ್.ಸಿ. ಪರೀಕ್ಷೆಯಲ್ಲಿ 982ನೇ ರ್ಯಾಂಕ್ ಗಳಿಸಿದ ಡೋರ ಜಂಬಗಾ ಗ್ರಾಮದ ಯುವಕ ಮೋಹನಕುಮಾರ ಸಾಧನೆ ಗುರುತಿಸಿ ಅವರ ಪೋಷಕರನ್ನು ಸತ್ಕರಿಸಲಾಯಿತು.

ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಶಶೀಲ ಜಿ. ನಮೋಶಿ, ಕರ್ನಾಟಕ ಪರಿಸರ ಮಾಲಿನ ನಿಯಂತ್ರಣ ಮಂಡಳಿ ಸದಸ್ಯರು ಮತ್ತು ವೀರಶೈವ ಮಹಾಸಭೆ ಜಿಲ್ಲಾಧ್ಯಕ್ಷ ಶರಣು ಮೋದಿ, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್‌ಪಿ ಅಡ್ಡೂರು ಶ್ರೀನಿವಾಸಲು, ಜಿಪಂ ಸಿಇಒ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಸಹಾಯಕ ಆಯುಕ್ತೆ ಸಾಹಿತ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಅರುಣಕುಮಾರ, ನೀಲಕಂಠ ಮೂಲಗೆ ಸೇರಿದಂತೆ ಇತರ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರು, ಸಾರ್ವಜನಿಕರು ಇದ್ದರು. ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸ್ವಾಗತಿಸಿದರು. ಸೋಮಶೇಖರ್ ಹಿರೇಮಠ ವಂದಿಸಿದರು. ಶ್ರೀಶೈಲ್ ಗೂಳಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X