Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸಹಕಾರ ಸಂಸ್ಥೆಗಳು ಸಮಾಜಮುಖಿ ಸೇವೆಗೆ...

ಸಹಕಾರ ಸಂಸ್ಥೆಗಳು ಸಮಾಜಮುಖಿ ಸೇವೆಗೆ ಆದ್ಯತೆ ನೀಡಲಿ: ಬಾಬುರಾವ ಯಡ್ರಾಮಿ

ವಾರ್ತಾಭಾರತಿವಾರ್ತಾಭಾರತಿ30 Aug 2026 7:37 PM IST
share
ಸಹಕಾರ ಸಂಸ್ಥೆಗಳು ಸಮಾಜಮುಖಿ ಸೇವೆಗೆ ಆದ್ಯತೆ ನೀಡಲಿ: ಬಾಬುರಾವ ಯಡ್ರಾಮಿ

ಕಲಬುರಗಿ: ಸಹಕಾರ ಸಂಸ್ಥೆಗಳು ಕೇವಲ ಆರ್ಥಿಕ ವ್ಯವಹಾರಗಳಿಗೆ ಸೀಮಿತವಾಗದೆ, ಸದಸ್ಯರು ಹಾಗೂ ಸಾರ್ವಜನಿಕರ ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣಕ್ಕೂ ಆದ್ಯತೆ ನೀಡಬೇಕು ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ ಹೇಳಿದರು.

ನಗರದ ಭವಾನಿ ನಗರ ರಿಂಗ್‌ರೋಡ್‌ನ ಬಬಲಾದ ಮಠದ ಸಮೀಪದ ಓಂ ಶ್ರೀ ವೀರಭದ್ರೇಶ್ವರ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ವತಿಯಿಂದ ಆಯೋಜಿಸಿದ್ದ 2025–26ನೇ ಸಾಲಿನ 14ನೇ ವಾರ್ಷಿಕ ಸರ್ವಸಾಮಾನ್ಯ ಸಭೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಕ್ಷೇತ್ರವು ಜನರ ಆರ್ಥಿಕ ಪ್ರಗತಿಯ ಜೊತೆಗೆ ಆರೋಗ್ಯ, ಶಿಕ್ಷಣ ಸೇರಿದಂತೆ ಸಮಾಜಮುಖಿ ಚಟುವಟಿಕೆಗಳಲ್ಲಿಯೂ ತನ್ನ ಪಾತ್ರ ವಿಸ್ತರಿಸಬೇಕು. ಇಂತಹ ಉಚಿತ ಆರೋಗ್ಯ ಶಿಬಿರಗಳು ಬಡವರು ಹಾಗೂ ಮಧ್ಯಮ ವರ್ಗದವರಿಗೆ ತಜ್ಞ ವೈದ್ಯರ ಸಲಹೆ ಪಡೆಯಲು ಸಹಕಾರಿಯಾಗುತ್ತವೆ ಎಂದರು.

ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಎಸ್. ಪರಸರಡ್ಡಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸಿದ್ರಾಮಪ್ಪ ಎಚ್. ಬಿರಬಿಟ್ಟೆ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಕಲಬುರಗಿ ಪ್ರಾಂತ್ಯದ ವ್ಯವಸ್ಥಾಪಕ ಸಂಜೀವ ಕೊರಟ್ಟರ್, ಉದ್ಯಮಿ ಹಣಮಂತ ಎಸ್. ಪೂಜಾರಿ, ಪ್ರತಾಪರಾವ ಜಿ. ಕಾಕಡೆ, ಆಡಳಿತ ಮಂಡಳಿ ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು. ಶ್ರೀ ಆರೈಕೆ ಆಸ್ಪತ್ರೆ, ಗ್ಯಾಸ್ಟ್ರೋ ಲಿವರ್ ಮಲ್ಟಿಸ್ಪೆಷಾಲಿಟಿ ಸೆಂಟರ್ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ಗ್ಯಾಸ್ಟ್ರೋಎಂಟರಾಲಜಿಸ್ಟ್, ಹೆಪಟಾಲಜಿಸ್ಟ್ ಹಾಗೂ ಥೆರಪ್ಯೂಟಿಕ್ ಎಂಡೋಸ್ಕೋಪಿಸ್ಟ್ ಡಾ. ಶ್ರೀನಿತ್ ಬಿ. ಪಾಟೀಲ್ ಮತ್ತು ಫಿಸಿಷಿಯನ್ ಹಾಗೂ ಡಯಾಬಿಟಾಲಜಿಸ್ಟ್ ಡಾ. ಶ್ರೀಗೌರಿ ರೆಡ್ಡಿ ಪಾಟೀಲ್ ಆರೋಗ್ಯ ತಪಾಸಣೆ ನಡೆಸಿದರು. ರಕ್ತದೊತ್ತಡ, ರಕ್ತದಲ್ಲಿನ ಸಕ್ಕರೆ, ಥೈರಾಯ್ಡ್ ಸೇರಿದಂತೆ ಗ್ಯಾಸ್ಟ್ರೋ, ಲಿವರ್, ಪ್ಯಾಂಕ್ರಿಯಾಸ್, ಪಿತ್ತಕೋಶ ಹಾಗೂ ಕರುಳಿನ ಸಮಸ್ಯೆಗಳ ಕುರಿತು ಉಚಿತ ವೈದ್ಯಕೀಯ ಸಲಹೆ ನೀಡಲಾಯಿತು. ಶಿಬಿರದಲ್ಲಿ 500ಕ್ಕೂ ಹೆಚ್ಚು ಮಂದಿ ಭಾಗವಹಿಸಿ ಆರೋಗ್ಯ ಸೇವೆಯ ಪ್ರಯೋಜನ ಪಡೆದರು.

Tags

Cooperative societiesBaburao Yadrami
share
ವಾರ್ತಾಭಾರತಿ
ವಾರ್ತಾಭಾರತಿ
Next Story
X