Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಜಿಲ್ಲೆಯನ್ನು ಬರಪೀಡಿತ...

ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸಿಪಿಐ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 July 2026 6:45 PM IST
share
ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸಿಪಿಐ ಆಗ್ರಹ

ಕಲಬುರಗಿ : ಜಿಲ್ಲೆಯಾದ್ಯಂತ ಸಮರ್ಪಕ ಮಳೆಯಾಗದೆ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕಲಬುರಗಿಯನ್ನು ತಕ್ಷಣವೇ ಬರಪೀಡಿತ ಜಿಲ್ಲೆಯೆಂದು ಘೋಷಿಸಿ, ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಸೋಮವಾರ ಸಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಮಳೆಗಾಲ ಆರಂಭವಾಗಿ ಎರಡು ತಿಂಗಳು ಕಳೆದರೂ ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಇದರಿಂದ ರೈತರು ಬಿತ್ತಿದ ಬೀಜಗಳು ಮೊಳಕೆಯೊಡೆಯದೆ ನಾಶವಾಗುತ್ತಿದ್ದು, ಈಗಾಗಲೇ ಬೆಳೆದಿರುವ ಬೆಳೆಗಳೂ ಒಣಗಿ ಹೋಗುತ್ತಿವೆ. ಪರಿಣಾಮ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮುಖಂಡರು ಆರೋಪಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಕೃಷಿ ಕೆಲಸಗಳಿಲ್ಲದೆ ಕೂಲಿಕಾರರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಇಂತಹ ಸಂದರ್ಭದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸಮರ್ಪಕವಾಗಿ ಕಾಮಗಾರಿಗಳನ್ನು ಆರಂಭಿಸದಿರುವುದು ಗ್ರಾಮೀಣ ಜನರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅವರು ಹೇಳಿದರು.

ರೈತರು ಸಾರ್ವಜನಿಕ ಹಾಗೂ ಖಾಸಗಿ ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು ಮತ್ತು ಖಾಸಗಿ ಸಾಲದಾತರಿಂದ ಪಡೆದಿರುವ ಸಾಲವನ್ನು ಮರುಪಾವತಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬರದಿಂದ ಸಾವಿರಾರು ರೈತ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ತಕ್ಷಣ ಕೆಲಸಗಳನ್ನು ಆರಂಭಿಸಿ ಉದ್ಯೋಗ ಕಲ್ಪಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಕೃಷಿ ಅಭಿವೃದ್ಧಿಗೆ ಪೂರಕವಾದ ಸಮಗ್ರ ಸಾಲ ನೀತಿಯನ್ನು ಜಾರಿಗೊಳಿಸಬೇಕು. ಹತ್ತಿ, ಕಬ್ಬು ಸೇರಿದಂತೆ ಎಲ್ಲಾ ಬೆಳೆಗಳನ್ನು ಬೆಳೆ ವಿಮೆ ವ್ಯಾಪ್ತಿಗೆ ಒಳಪಡಿಸಿ, ರೈತರಿಗೆ ಸಮರ್ಪಕ ವಿಮೆ ಪರಿಹಾರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಪಿಐ ಮನವಿ ಮಾಡಿದೆ.

ಪ್ರತಿಭಟನೆಯಲ್ಲಿ ಸಿಪಿಐ ಜಿಲ್ಲಾ ಕಾರ್ಯದರ್ಶಿ ಮಹೇಶಕುಮಾರ್ ರಾಠೋಡ್, ಸಿದ್ಧಪ್ಪ ಫಾಲ್ಕಿ, ಭೀಮಾಶಂಕರ ಮಾಡಿಯಾಳ, ಎಚ್.ಎಸ್. ಪತಕಿ, ಪ್ರಭುದೇವ ಯಳಸಂಗಿ, ಸಾಜಿದ್ ಅಹ್ಮದ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Tags

drought-hitKalaburagiCPI
share
ವಾರ್ತಾಭಾರತಿ
ವಾರ್ತಾಭಾರತಿ
Next Story
X