Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಬಿ.ಸಿ.ಜಿ ಲಸಿಕೆ...

ಕಲಬುರಗಿ | ಬಿ.ಸಿ.ಜಿ ಲಸಿಕೆ ಹಾಕಿಸಿಕೊಳ್ಳುವಂತೆ ವಯಸ್ಕರಿಗೆ ಡಿ.ಸಿ. ಫೌಝಿಯಾ ತರನ್ನುಮ್ ಮನವಿ

ವಾರ್ತಾಭಾರತಿವಾರ್ತಾಭಾರತಿ22 May 2025 11:17 PM IST
share
ಕಲಬುರಗಿ | ಬಿ.ಸಿ.ಜಿ ಲಸಿಕೆ ಹಾಕಿಸಿಕೊಳ್ಳುವಂತೆ ವಯಸ್ಕರಿಗೆ ಡಿ.ಸಿ. ಫೌಝಿಯಾ ತರನ್ನುಮ್ ಮನವಿ

ಕಲಬುರಗಿ: ಕ್ಷಯರೋಗ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ 18 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಕರಿಗೆ ವಯಸ್ಕರ ಬಿ.ಸಿ.ಜಿ ಲಸಿಕೆ ನೀಡಲಾಗುತ್ತಿದೆ. ಇದು ಸುರಕ್ಷಿತವಾಗಿದ್ದು, ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಅನಗತ್ಯ ಭಯಪಡದೆ ಲಸಿಕೆ ಹಾಕಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದರು.

ಜಿಲ್ಲೆಯಾದ್ಯಂತ ಮನೆ ಮನೆ ಸಮೀಕ್ಷೆ ಮಾಡಿ ಅಪಾಯದಂಚಿನಲ್ಲಿರುವ 4,11,460 ಜನರನ್ನು ಈಗಾಗಲೆ ಗುರುತಿಸಲಾಗಿದೆ. ಇದರಲ್ಲಿ 55,056 ಜನ ಲಸಿಕೆ ಪಡೆಯಲು ಮೌಖಿಕ ಒಪ್ಪಿಗೆ ಸೂಚಿಸಿದ್ದು, ಈ ಪೈಕಿ ಇದುವರೆಗೆ 19,970 ವಯಸ್ಕರಿಗೆ ಬಿ.ಸಿ.ಜಿ ಲಸಿಕೆ ನೀಡಲಾಗಿದೆ. ಇನ್ನು ಒಪ್ಪಿಗೆ ಸೂಚಿಸದವರು ಹಿಂದೇಟು ಹಾಕದೆ ಕೂಡಲೆ ಒಪ್ಪಿಗೆ ಸೂಚಿಸಿ ಲಸಿಕೆ ಹಾಕಿಸಿಕೊಳ್ಳುಬೇಕೆಂದು ಅವರು ಆಗ್ರಹಿಸಿದರು.

ದೇಶದ 23 ರಾಜ್ಯಗಳ 274 ಜಿಲ್ಲೆಗಳಲ್ಲಿ ಕೇಂದ್ರ ಸರಕಾರ ಪ್ರಾಯೋಗಿಕವಾಗಿ ಒಂದು ಲಸಿಕಾ ಅಭಿಯಾನ ಹಮ್ಮಿಕೊಂಡಿದೆ. ಇದರಲ್ಲಿ ಕಲಬುರಗಿ ಸೇರಿ ರಾಜ್ಯದ 16 ಜಿಲ್ಲೆಗಳಲ್ಲಿ ಅಭಿಯಾನ ನಡೆಯುತ್ತಿದೆ. ಜಿಲ್ಲೆಯಲ್ಲಿ ಕಾರ್ಯಕ್ರಮ ಯಶಸ್ವಿಗೆ ವಯಸ್ಕರು ಸಹಕರಿಸಬೇಕೆಂದು ಅವರು ಕೋರಿದರು.

ಕ್ಷಯರೋಗದಿಂದ ಬಳಲುತ್ತಿರುವವರು ಚಿಕಿತ್ಸೆ ಮುಗಿದ 4 ವಾರಗಳ ನಂತರ ವಯಸ್ಕರ ಬಿಸಿಜಿ ಲಸಿಕೆಯನ್ನು ಪಡೆಯಬಹುದಾಗಿದೆ. ಅನಾರೋಗ್ಯದಿಂದ ಬಳಲಿ ಗುಣಮುಖರಾದವರಿಗೆ ವೈದ್ಯಕೀಯ ಸಲಹೆ ಮೇರೆಗೆ ಹಾಗೂ ರಕ್ತ ವರ್ಗಾವಣೆ ಮಾಡಿಕೊಂಡು 3 ತಿಂಗಳ ಅವಧಿ ಪೂರೈಸಿದವರಿಗೆ ವಯಸ್ಕರ ಬಿಸಿಜಿ ಲಸಿಕೆ ನೀಡಲು ವಿಶೇಷವಾಗಿ ಪರಿಗಣಿಸಲಾಗುತ್ತಿದೆ.

ಇವರಿಗೆ ಲಸಿಕೆ ಇಲ್ಲ:

18 ವರ್ಷಕ್ಕಿಂತ ಕೆಳ ವಯಸ್ಸಿನವರಿಗೆ, ಒಪ್ಪಿಗೆ ನೀಡದವರಿಗೆ, ಹೆಚ್.ಐ.ವಿ ರೋಗದಿಂದ ಬಳಲುತ್ತಿರುವವರಿಗೆ, ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರಿಗೆ, ರೋಗ ನಿರೋಧಕ ಶಕ್ತಿ ಕಡಿಮೆಯಿರುವವರಿಗೆ ಹಾಗೂ ಅಂಗಾಂಗಗಳನ್ನು ಕಸಿ ಮಾಡಿಕೊಂಡಿರುವವರಿಗೆ, ಗರ್ಭಿಣಿ ಹಾಗೂ ಹಾಲುಣಿಸುವ ಮಹಿಳೆಯರಿಗೆ, ಕಳೆದ 3 ತಿಂಗಳುಗಳಲ್ಲಿ ರಕ್ತ ವರ್ಗಾವಣೆ ಇತಿಹಾಸ ಹೊಂದಿರುವವರಿಗೆ, ಹೆಚ್.ಐ.ವಿ ಸೋಂಕಿಗೆ ಒಳಗಾಗುವ ಹೆಚ್ಚಿನ ಅಪಾಯಕ್ಕೆ ಕಾರಣವಾಗುವ ಇತಿಹಾಸ ಹೊಂದಿರುವವರಿಗೆ ಹಾಗೂ ಯಾವುದೇ ಕಾರಣದಿಂದ ಪ್ರಸುತ್ತ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಬಿ.ಸಿ.ಜಿ ಲಸಿಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X