Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ದಂಡ ಪಾವತಿಸಿ ಇಬ್ಬರು...

Kalaburagi | ದಂಡ ಪಾವತಿಸಿ ಇಬ್ಬರು ಕೈದಿಗಳ ಬಿಡುಗಡೆಗೆ ನೆರವಾದ ಕಾರ್ಮೆಲ್ ಜ್ಯೋತಿ ಟ್ರಸ್ಟ್

ವಾರ್ತಾಭಾರತಿವಾರ್ತಾಭಾರತಿ4 July 2026 10:00 PM IST
share
Kalaburagi | ದಂಡ ಪಾವತಿಸಿ ಇಬ್ಬರು ಕೈದಿಗಳ ಬಿಡುಗಡೆಗೆ ನೆರವಾದ ಕಾರ್ಮೆಲ್ ಜ್ಯೋತಿ ಟ್ರಸ್ಟ್

ಕಲಬುರಗಿ: ಆರ್ಥಿಕ ಸಂಕಷ್ಟದಿಂದ ನ್ಯಾಯಾಲಯ ವಿಧಿಸಿದ್ದ ದಂಡದ ಮೊತ್ತ ಪಾವತಿಸಲು ಸಾಧ್ಯವಾಗದೆ ಕೇಂದ್ರ ಕಾರಾಗೃಹದಲ್ಲೇ ಉಳಿದಿದ್ದ ಇಬ್ಬರು ಶಿಕ್ಷಿತ ಕೈದಿಗಳ ಬಿಡುಗಡೆಗೆ ಕಡಗಂಚಿಯ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಮಾನವೀಯ ನೆರವು ನೀಡಿದೆ.

ಶನಿವಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟ್ ವತಿಯಿಂದ ಇಬ್ಬರು ಕೈದಿಗಳ ದಂಡದ ಮೊತ್ತವನ್ನು ಪಾವತಿಸಿ ಅವರ ಬಿಡುಗಡೆಗೆ ಸಹಕಾರ ನೀಡಲಾಯಿತು.

ಬಿಡುಗಡೆಯಾದವರಲ್ಲಿ ಶಿಕ್ಷಾ ಬಂದಿ ಸಂಖ್ಯೆ 1233ರ ದಿಗಂಬರ ಸುಭಾಷ್ ನಾಟೀಕರ್ ಹಾಗೂ ಶಿಕ್ಷಾ ಬಂದಿ ಸಂಖ್ಯೆ 286ರ ಶಿವಕುಮಾರ ತಂದೆ ಅರ್ಜುನ ಪ್ರಸಾದ್ ಸೇರಿದ್ದಾರೆ. ದಿಗಂಬರ ಅವರ 13 ಸಾವಿರ ರೂ. ಹಾಗೂ ಶಿವಕುಮಾರ ಅವರ 15 ಸಾವಿರ ರೂ. ಸೇರಿದಂತೆ ಒಟ್ಟು 28 ಸಾವಿರ ರೂ. ದಂಡದ ಮೊತ್ತವನ್ನು ಟ್ರಸ್ಟ್ ವತಿಯಿಂದ ಭರಿಸಲಾಯಿತು.

ಆರ್ಥಿಕವಾಗಿ ದುರ್ಬಲರಾಗಿದ್ದ ಕಾರಣ ಈ ಇಬ್ಬರು ಕೈದಿಗಳಿಗೆ ದಂಡ ಪಾವತಿಸಲು ಸಾಧ್ಯವಾಗದೆ, ಶಿಕ್ಷೆಯ ಅವಧಿ ಪೂರ್ಣಗೊಂಡಿದ್ದರೂ ಬಿಡುಗಡೆ ದೊರಕಿರಲಿಲ್ಲ. ಈ ವಿಷಯವನ್ನು ಗಮನಿಸಿದ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ರಾಕೇಶ್ ಕಾಂಬಳೆ ಅವರು ಸ್ಥಳೀಯ ಸಾಮಾಜಿಕ ಸಂಸ್ಥೆಗಳ ನೆರವು ಕೋರಿದ್ದರು.

ಇದರ ಬೆನ್ನಲ್ಲೇ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್‌ನ ಫಾದರ್ ವಿಲಿಯಂ ಮಿರಿಂದಾ ಹಾಗೂ ಫಾದರ್ ಮ್ಯಾಕ್ಸಿಮ್ ದಂಡದ ಮೊತ್ತವನ್ನು ಪಾವತಿಸಿ ಕೈದಿಗಳ ಬಿಡುಗಡೆಗೆ ನೆರವಾದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಅಧೀಕ್ಷಕ ರಾಕೇಶ್ ಕಾಂಬಳೆ, ಆರ್ಥಿಕವಾಗಿ ಹಿಂದುಳಿದ ಕೈದಿಗಳ ಬದುಕಿನಲ್ಲಿ ಹೊಸ ಆಶಾಕಿರಣ ಮೂಡಿಸಿರುವ ಟ್ರಸ್ಟ್‌ನ ಸಮಾಜಮುಖಿ ಸೇವೆ ಶ್ಲಾಘನೀಯವಾಗಿದೆ. ಇಂತಹ ಮಾನವೀಯ ಕಾರ್ಯಗಳು ಇತರ ಸಾಮಾಜಿಕ ಸಂಸ್ಥೆಗಳಿಗೂ ಮಾದರಿಯಾಗಲಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕರಾದ ಬಿ. ಸುರೇಶ್, ಚನ್ನಪ್ಪ ಯಟಗಾರ್, ಸಹಾಯಕ ಆಡಳಿತಾಧಿಕಾರಿ ಭೀಮಾಶಂಕರ ಡಾಂಗೆ, ಶಿಕ್ಷಕ ನಾಗರಾಜ ಮೂಲಗೆ ಸೇರಿದಂತೆ ಕಾರಾಗೃಹದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X