Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಎಂದು...

ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ: ಬಿಎಸ್‌ಪಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ31 Aug 2026 9:02 PM IST
share
ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ: ಬಿಎಸ್‌ಪಿ ಆಗ್ರಹ

ಕಲಬುರಗಿ: ಮಳೆಯ ಕೊರತೆಯಿಂದ ಜಿಲ್ಲೆಯ ವಿವಿಧೆಡೆ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆಗಳು ಒಣಗಿ ನಾಶವಾಗಿದ್ದು, ಸಮಗ್ರ ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆಯೆಂದು ಘೋಷಿಸಿ ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಬರ ಪರಿಹಾರ ನೀಡಬೇಕು ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಕಲಬುರಗಿ ಜಿಲ್ಲಾ ಘಟಕ ಆಗ್ರಹಿಸಿದೆ.

ಈ ಕುರಿತು ಬಿಎಸ್‌ಪಿ ಜಿಲ್ಲಾಧ್ಯಕ್ಷ ಶಿವಯೋಗಿ ಡಿ. ಹಡಗಿಲಕರ್ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಸೋಮವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಅಲ್ಪ ಪ್ರಮಾಣದ ಮಳೆಯಾದ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಕೈಗೊಂಡಿದ್ದರು. ಆದರೆ ನಂತರ ಮಳೆ ಕೈಕೊಟ್ಟ ಪರಿಣಾಮ ಬೆಳೆಗಳಿಗೆ ಅಗತ್ಯ ತೇವಾಂಶ ದೊರೆಯದೆ, ಹಲವು ಪ್ರದೇಶಗಳಲ್ಲಿ ಬೆಳೆಗಳು ಒಣಗಿ ನಾಶವಾಗಿವೆ. ಇದರಿಂದ ಬಿತ್ತನೆ, ಬೀಜ, ರಸಗೊಬ್ಬರ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಮಾಡಿದ ಖರ್ಚು ರೈತರಿಗೆ ಹೊರೆಯಾಗಿ ಪರಿಣಮಿಸಿದೆ ಎಂದು ತಿಳಿಸಿದ್ದಾರೆ.

ಮಳೆಯ ಅಭಾವದಿಂದ ಬಾವಿ, ಕೆರೆ ಹಾಗೂ ಕೊಳವೆ ಬಾವಿಗಳು ಬತ್ತುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಬರ ಪರಿಸ್ಥಿತಿಯಿಂದ ರೈತರು ಹಾಗೂ ಗ್ರಾಮೀಣ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.

ರಾಜ್ಯ ಸರ್ಕಾರ 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದರೂ, ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿರುವ ಕಲಬುರಗಿ ಜಿಲ್ಲೆಯ ತಾಲೂಕುಗಳನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಜಿಲ್ಲೆಯ ರೈತರಿಗೆ ಮಾಡಿರುವ ಅನ್ಯಾಯವಾಗಿದೆ ಎಂದು ಬಿಎಸ್‌ಪಿ ಆರೋಪ ಮಾಡಿದರು.

ಕಲಬುರಗಿ ಜಿಲ್ಲೆಯ ಎಲ್ಲ ತಾಲೂಕುಗಳನ್ನು ತಕ್ಷಣ ಬರಪೀಡಿತವೆಂದು ಘೋಷಿಸಿ, ರೈತರಿಗೆ ಬೆಳೆವಿಮೆ ಹಾಗೂ ಬೆಳೆ ಪರಿಹಾರವನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು. ಬೆಳೆ ನಷ್ಟದ ಪ್ರಮಾಣವನ್ನು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ, ಪ್ರತಿ ಎಕರೆಗೆ ₹30 ಸಾವಿರದಿಂದ ₹50 ಸಾವಿರದವರೆಗೆ ಪರಿಹಾರ ನೀಡಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.

ಜಾನುವಾರುಗಳಿಗೆ ಸಮರ್ಪಕ ಕುಡಿಯುವ ನೀರು ಹಾಗೂ ಮೇವಿನ ವ್ಯವಸ್ಥೆ ಕಲ್ಪಿಸಬೇಕು. ಗ್ರಾಮೀಣ ಪ್ರದೇಶದ ಜನರಿಗೆ ವಿಬಿಜಿ ರಾಮ್‌ಜಿ ಯೋಜನೆಯಡಿ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಒದಗಿಸಿ, ಬರದಿಂದ ಉಂಟಾಗಿರುವ ಆರ್ಥಿಕ ಸಂಕಷ್ಟವನ್ನು ತಗ್ಗಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಯೋಜಕ ಹಾಗೂ ಕಲಬುರಗಿ ವಲಯ ಉಸ್ತುವಾರಿ ಎಲ್.ಆರ್. ಭೋಸಲೆ, ರಾಜ್ಯ ಕಾರ್ಯದರ್ಶಿಗಳಾದ ಡಾ. ಅನೀಲ ಟಂಗಳಿ, ಶಿಪ್ಪಣ್ಣ ಎಂ. ಕಿನ್ನೂರ, ರಾಜ್ಯ ಸಮಿತಿ ಸದಸ್ಯ ಮೈಲಾರಿ ಶೇಳಗಿ, ವಿವಿಧ ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳು ಹಾಗೂ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು.

Tags

KalaburagiBSP
share
ವಾರ್ತಾಭಾರತಿ
ವಾರ್ತಾಭಾರತಿ
Next Story
X