ಕೆ.ರಾಮಚಂದ್ರರಾವ್ ವಿರುದ್ಧ ಸೂಕ್ತ ತನಿಖೆಗೆ ಆಗ್ರಹ

ಕೆ.ರಾಮಚಂದ್ರರಾವ್
ಕಲಬುರಗಿ: ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಆರೋಪದಡಿ ಡಿಜಿಪಿ ಕೆ.ರಾಮಚಂದ್ರರಾವ್ ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಲಬುರಗಿ ಜಿಲ್ಲಾ ಜನವಾದಿ ಮಹಿಳಾ ಸಂಘಟನೆ ಆಗ್ರಹಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ಜಿಲ್ಲಾಧ್ಯಕ್ಷೆ ಪದ್ಮಿನಿ ಕಿರಣಗಿ ಹಾಗೂ ಪ್ರಧಾನ ಕಾರ್ಯದರ್ಶಿ ಶಾಂತಾ ಸರಡಗಿ, ಕೆ.ರಾಮಚಂದ್ರರಾವ್ ಅವರು ತಮ್ಮ ಹುದ್ದೆಯ ಪ್ರಭಾವವನ್ನು ದುರುಪಯೋಗಪಡಿಸಿಕೊಂಡು ಸಂವಿಧಾನಾತ್ಮಕ ಮೌಲ್ಯಗಳನ್ನು ಧಿಕ್ಕರಿಸಿದ್ದು, ಪೊಲೀಸ್ ಇಲಾಖೆಗೆ ಕಳಂಕ ತಂದಿದ್ದಾರೆ ಎಂದು ಆರೋಪಿಸಿದ್ದಾರೆ.
ಮಹಿಳೆಯರು ಹಾಗೂ ನಾಗರಿಕರಿಗೆ ರಕ್ಷಣೆ ನೀಡಿ ಸಾರ್ವಜನಿಕರಲ್ಲಿ ಭರವಸೆ ಮೂಡಿಸಬೇಕಾದ ಉನ್ನತ ಸ್ಥಾನದಲ್ಲಿರುವ ಅಧಿಕಾರಿಯೇ ಇಂತಹ ವರ್ತನೆ ತೋರಿರುವುದು ಅತ್ಯಂತ ಖಂಡನೀಯ ಎಂದು ಅವರು ಹೇಳಿದ್ದಾರೆ.
Next Story





