Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯನ್ನು ಬರಪೀಡಿತ ಜಿಲ್ಲೆ ಘೋಷಣೆಗೆ...

ಕಲಬುರಗಿಯನ್ನು ಬರಪೀಡಿತ ಜಿಲ್ಲೆ ಘೋಷಣೆಗೆ ಆಗ್ರಹ; ಸಿಪಿಐ(ಎಂ) ಜು.6ರಂದು ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ5 July 2026 10:57 PM IST
share
ಕಲಬುರಗಿಯನ್ನು ಬರಪೀಡಿತ ಜಿಲ್ಲೆ ಘೋಷಣೆಗೆ ಆಗ್ರಹ; ಸಿಪಿಐ(ಎಂ) ಜು.6ರಂದು ಬೃಹತ್ ಪ್ರತಿಭಟನೆ

ಕಲಬುರಗಿ: ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರು ಹಾಗೂ ಕಾರ್ಮಿಕರಿಗೆ ಅಗತ್ಯ ನೆರವು ಒದಗಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಜಿಲ್ಲಾ ಸಮಿತಿ ಜುಲೈ 6ರಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಈ ಕುರಿತು ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ ಪ್ರಕಟಣೆ ನೀಡಿ, ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ಮುಖ್ಯಮಂತ್ರಿಗಳೇ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಪರಿಹಾರ ಕ್ರಮಗಳನ್ನು ತ್ವರಿತಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಕಲಬುರಗಿಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವುದು, ತಕ್ಷಣ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸುವುದು, ರೈತರಿಗೆ ಉಚಿತ ಬೀಜ ಮತ್ತು ರಸಗೊಬ್ಬರ ವಿತರಿಸುವುದು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಎನ್‌ಆರ್‌ಇಜಿಎಸ್) ಅಡಿಯಲ್ಲಿ ಉದ್ಯೋಗದ ದಿನಗಳನ್ನು 100ರಿಂದ 200 ದಿನಗಳಿಗೆ ಹೆಚ್ಚಿಸುವುದು ಹಾಗೂ ಬಾಕಿ ಇರುವ ಕೂಲಿಯನ್ನು ತಕ್ಷಣ ಪಾವತಿಸುವಂತೆ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ.

ನಗರ ಪ್ರದೇಶಗಳಲ್ಲಿಯೂ ಉದ್ಯೋಗ ಸೃಷ್ಟಿಸುವುದು, ಬಡಜನರ ಜೀವನೋಪಾಯ ರಕ್ಷಣೆಗಾಗಿ “ಕೂಲಿಗಾಗಿ ಕಾಳು” ಯೋಜನೆ ಜಾರಿಗೊಳಿಸುವುದು ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ಅಗತ್ಯ ವಸ್ತುಗಳ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಪ್ರತಿಭಟನೆಯಲ್ಲಿ ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ವಿಪತ್ತು ನಿರ್ವಹಣಾ ಸಮಿತಿಯು ತುರ್ತು ಕ್ರಮ ಕೈಗೊಂಡು ಜನರ ನೆರವಿಗೆ ಧಾವಿಸಬೇಕು ಎಂಬ ಬೇಡಿಕೆಯನ್ನೂ ಸರ್ಕಾರದ ಮುಂದಿಡಲಾಗುವುದು ಎಂದು ತಿಳಿಸಿದ್ದಾರೆ.

ಜುಲೈ 6ರಂದು ಬೆಳಿಗ್ಗೆ ನಗರದ ಜಗತ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ತೆರಳಿ ಸರ್ಕಾರಕ್ಕೆ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

CPI(M)Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X