Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಭ್ರಷ್ಟಾಚಾರ ಆರೋಪ: ಎಸಿಪಿ...

ಕಲಬುರಗಿ | ಭ್ರಷ್ಟಾಚಾರ ಆರೋಪ: ಎಸಿಪಿ ಶರಣಬಸಪ್ಪ ಅಮಾನತಿಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ3 Oct 2026 10:44 AM IST
share
ಕಲಬುರಗಿ | ಭ್ರಷ್ಟಾಚಾರ ಆರೋಪ: ಎಸಿಪಿ ಶರಣಬಸಪ್ಪ ಅಮಾನತಿಗೆ ಆಗ್ರಹ

ಕಲಬುರಗಿ: ಪ್ರಕರಣವೊಂದರ ತನಿಖೆ ಪೂರ್ಣಗೊಳಿಸಿ ‘ಬಿ’ರಿಪೋರ್ಟ್ ಸಲ್ಲಿಸುವುದಾಗಿ ಹೇಳಿ ರೂ.40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿರುವ ಆರೋಪದ ಹಿನ್ನೆಲೆಯಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ದಕ್ಷಿಣ ಉಪವಿಭಾಗದ ಎಸಿಪಿ ಶರಣಬಸಪ್ಪ ಎಚ್. ಸುಬೇದಾರ್ ಸೇರಿದಂತೆ ಸಂಬಂಧಿತ ಪೊಲೀಸ್ ಸಿಬ್ಬಂದಿಯನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ರಮೇಶ್ ಬಿ. ಚೌಹಾಣ್ ಆಗ್ರಹಿಸಿದ್ದಾರೆ.

ಈ ಕುರಿತು ಡಿಜಿ & ಐಜಿಪಿ ಎಂ.ಎ.ಸಲೀಂ, ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್, ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬಿಕರ್, ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ. ಅವರಿಗೆ ಮನವಿ ಸಲ್ಲಿಸಿದ್ದಾರೆ.

ಪ್ರಕರಣದ ಎಫ್ಐಆರ್ನಲ್ಲಿ ಎಸಿಪಿ ಶರಣಬಸಪ್ಪ ಎಚ್. ಸುಬೇದಾರ್, ಪೊಲೀಸ್ ಬರಹಗಾರ ಚಂದ್ರಕಾಂತ್ ಹಾಗೂ ಕಾನ್ಸ್ಟೆಬಲ್ ರಾಘವೇಂದ್ರ ಸೇರಿದಂತೆ ಪೊಲೀಸ್ ಸಿಬ್ಬಂದಿ, ಪ್ರಕರಣವೊಂದರ ತನಿಖೆಯನ್ನು ಮುಕ್ತಾಯಗೊಳಿಸಿ ಬಿ ರಿಪೋರ್ಟ್ ಸಲ್ಲಿಸುವುದಾಗಿ ಹೇಳಿ ದೂರುದಾರರಿಂದ ರೂ.40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪಗಳಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕ್ರಿಮಿನಲ್ ವಿವಿಧ ಅರ್ಜಿ ಸಂಖ್ಯೆ 1446/2025 ಸಲ್ಲಿಸಿದ್ದರು. ನ್ಯಾಯಾಲಯವು 2025ರ ಸೆಪ್ಟೆಂಬರ್ 8ರಂದು ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣದ ಆರೋಪಿಯಾಗಿರುವ ಖಾಸಗಿ ವ್ಯಕ್ತಿಯೋರ್ವನಿಗೆ ಮಾತ್ರ ಜಾಮೀನು ಕೊಡಲಾಗಿದೆ ಎಂದು ರಮೇಶ್ ಬಿ. ಚೌಹಾಣ್ ತಿಳಿಸಿದ್ದಾರೆ.

“ಗಂಭೀರ ಆರೋಪಗಳಿರುವ ಪ್ರಕರಣದಲ್ಲಿ ಆರೋಪಿಗಳು ಪೊಲೀಸ್ ಇಲಾಖೆಯಲ್ಲಿ ಸೇವೆ ಮುಂದುವರಿಸುವುದು ತನಿಖೆಯ ಮೇಲೆಯೂ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಪ್ರಕರಣದ ಅಂತಿಮ ತೀರ್ಪು ಬರುವವರೆಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯಮಾನುಸಾರ ಅಮಾನತುಗೊಳಿಸಿ, ನಿಷ್ಪಕ್ಷಪಾತ ತನಿಖೆಗೆ ಅವಕಾಶ ಕಲ್ಪಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಲೋಕಾಯುಕ್ತ ಠಾಣೆಯ ಅಪರಾಧ ಸಂಖ್ಯೆ 13/2025 ಮತ್ತು ನ್ಯಾಯಾಲಯದ ಕ್ರಿಮಿನಲ್ ವಿವಿಧ ಅರ್ಜಿ ಸಂಖ್ಯೆ 1446/2025ಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಗಣಿಸಿ, ಆರೋಪ ಎದುರಿಸುತ್ತಿರುವ ಎಸಿಪಿ ಸೇರಿದಂತೆ ಸಂಬಂಧಿತ ಸಿಬ್ಬಂದಿ ವಿರುದ್ಧ ಇಲಾಖಾ ಮಟ್ಟದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

Tags

Demands Rise for Suspensionkalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X