Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಸ್ಪೋರ್ಟ್ಸ್ ಹಬ್ಬ-2026ಕ್ಕೆ...

ಕಲಬುರಗಿ ಸ್ಪೋರ್ಟ್ಸ್ ಹಬ್ಬ-2026ಕ್ಕೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಚಾಲನೆ

1,400 ಕ್ರೀಡಾಪಟುಗಳು ಭಾಗಿ, ನಾಲ್ಕು ದಿನಗಳ ಕ್ರೀಡಾಪಟುಗಳ ಸಮಾಗಮ

ವಾರ್ತಾಭಾರತಿವಾರ್ತಾಭಾರತಿ24 Sept 2026 7:24 PM IST
share
ಕಲಬುರಗಿ ಸ್ಪೋರ್ಟ್ಸ್ ಹಬ್ಬ-2026ಕ್ಕೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಚಾಲನೆ

ಕಲಬುರಗಿ: ಕ್ರೀಡಾ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಹಾಗೂ ಸ್ಥಳೀಯ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಆಯೋಜಿಸಿರುವ ಕಲಬುರಗಿ ಸ್ಪೋರ್ಟ್ಸ್ ಹಬ್ಬ-2026 ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಗುರುವಾರ ಚಾಲನೆ ನೀಡಿದರು.

ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕಲಬುರಗಿ ನೆಕ್ಸ್ಟ್ ಫೌಂಡೇಷನ್ ಸಹಯೋಗದಲ್ಲಿ ನಡೆದ ಸಮಾರಂಭದಲ್ಲಿ ಸುಮಾರು 12.50 ಲಕ್ಷ ರೂ. ಪ್ರಾಯೋಜಕತ್ವದ ಕ್ರೀಡಾಕೂಟದ ಜೆರ್ಸಿಯನ್ನು ಅನಾವರಣಗೊಳಿಸಿ, ಆರಂಭಿಕ ವಾಲಿಬಾಲ್ ಪಂದ್ಯಕ್ಕೆ ಸರ್ವಿಸ್ ಮಾಡುವ ಮೂಲಕ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಸ್ಥಳೀಯ ಕ್ರೀಡಾಪಟುಗಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತಮ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಕ್ರೀಡಾಕೂಟ ಆಯೋಜಿಸಲಾಗಿದೆ. ನಾಲ್ಕು ದಿನಗಳ ಕಾಲ ಏಳು ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿದ್ದು, ಕ್ರೀಡಾಪಟುಗಳು ಕ್ರೀಡಾ ಮನೋಭಾವನೆಯಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಕರೆ ನೀಡಿದರು. ಮುಂದಿನ ವರ್ಷ ಇನ್ನಷ್ಟು ಕ್ರೀಡೆಗಳನ್ನು ಸೇರಿಸುವ ಪ್ರಯತ್ನ ಮಾಡಲಾಗುವುದು ಎಂದರು.

ನಗರ ಪೊಲೀಸ್ ಆಯುಕ್ತ ಡಾ. ಎಸ್.ಡಿ. ಶರಣಪ್ಪ ಮಾತನಾಡಿ, ಕಲಬುರಗಿ ಸ್ಪೋರ್ಟ್ಸ್ ಹಬ್ಬ ಸ್ಥಳೀಯ ಕ್ರೀಡಾಪಟುಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ಅವಕಾಶವಾಗಿದೆ. ಯುವಕರು ಈ ಕ್ರೀಡಾಕೂಟವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಬೆಂಗಳೂರಿನ ಸ್ಪ್ರೆಂಜೋ ಸಂಸ್ಥೆ ಹಾಗೂ ಸ್ಥಳೀಯ ಕ್ರೀಡಾ ಸಂಘಗಳ ಸಹಯೋಗದಲ್ಲಿ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ವಾಲಿಬಾಲ್, ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಪಂದ್ಯಗಳು ನಡೆಯಲಿವೆ. ಸರ್ಕಾರಿ ಪದವಿ ಕಾಲೇಜು ಆವರಣದಲ್ಲಿ ಕ್ರಿಕೆಟ್, ಎಂ.ಎಸ್.ಐ. ಪದವಿ ಪೂರ್ವ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಚೆಸ್ ಹಾಗೂ ವೀರೇಂದ್ರ ಪಾಟೀಲ ಬಡಾವಣೆಯಲ್ಲಿ ಫುಟ್‌ಬಾಲ್ ಪಂದ್ಯಗಳು ಆಯೋಜಿಸಲಾಗಿದೆ.

ಕ್ರೀಡಾ ಹಬ್ಬದ ಅಂಗವಾಗಿ ಸೆಪ್ಟೆಂಬರ್ 27ರಂದು ಬೆಳಿಗ್ಗೆ 6 ಗಂಟೆಗೆ ಶ್ರೀ ಶರಣಬಸವೇಶ್ವರ ದೇವಸ್ಥಾನದಿಂದ ಸೈಕ್ಲೋಥಾನ್‌ಗೆ ಚಾಲನೆ ನೀಡಲಾಗುತ್ತದೆ. ಜಗತ್ ವೃತ್ತ, ಸರ್ಕಾರಿ ವಸ್ತು ಸಂಗ್ರಹಾಲಯ, ಖರ್ಗೆ ಪೆಟ್ರೋಲ್ ಪಂಪ್ ವೃತ್ತ, ಬುದ್ಧ ವಿಹಾರ, ಜಯದೇವ ಹೃದ್ರೋಗ ಆಸ್ಪತ್ರೆ ಹಾಗೂ ಮಿನಿ ವಿಧಾನಸೌಧ ಮಾರ್ಗವಾಗಿ ಚಂಪಾ ಕ್ರೀಡಾಂಗಣದಲ್ಲಿ ಸೈಕ್ಲೋಥಾನ್ ಸಮಾರೋಪಗೊಳ್ಳಲಿದೆ.

ಕಾರ್ಯಕ್ರಮದಲ್ಲಿ ಎಸ್‌ಪಿ ಅಡ್ಡೂರು ಶ್ರೀನಿವಾಸುಲು, ಗುಪ್ತಚರ ವಿಭಾಗದ ಎಸ್‌ಪಿ ಸ್ವಪ್ನಿಲ್ ಮಾನೆ, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಸಂಕನೂರ್, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಡಿಸಿಪಿ ಶಾಲು, ಸಹಾಯಕ ಆಯುಕ್ತೆ ರಿತಿಕಾ ವರ್ಮಾ, ಸ್ಪ್ರೆಂಜೋ ಸಂಸ್ಥೆಯ ಪ್ರವೃತ್, ವಿವಿಧ ಕ್ರೀಡಾ ಸಂಘಗಳ ಪದಾಧಿಕಾರಿಗಳು ಹಾಗೂ ಕ್ರೀಡಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಸ್ಪೋರ್ಟ್ಸ್ ಹಬ್ಬದ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಸಂಗಮೇಶ ಅವರು ಕಾರ್ಯಕ್ರಮಕ್ಕೆ ಸ್ವಾಗತ ಕೋರಿದರು.

Tags

Sports FestivalKalaburagiIkram Sharif
share
ವಾರ್ತಾಭಾರತಿ
ವಾರ್ತಾಭಾರತಿ
Next Story
X