Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯನ್ನು ಪ್ರಾದೇಶಿಕ ಉಪರಾಜಧಾನಿ,...

ಕಲಬುರಗಿಯನ್ನು ಪ್ರಾದೇಶಿಕ ಉಪರಾಜಧಾನಿ, ದ್ವಿತೀಯ ಆಡಳಿತ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಿ: ದೀಪಕನಾಗ್ ಪುಣ್ಯಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ7 Sept 2026 1:34 PM IST
share
ಕಲಬುರಗಿಯನ್ನು ಪ್ರಾದೇಶಿಕ ಉಪರಾಜಧಾನಿ, ದ್ವಿತೀಯ ಆಡಳಿತ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಿ: ದೀಪಕನಾಗ್ ಪುಣ್ಯಶೆಟ್ಟಿ

ಕಲಬುರಗಿ : ಬೆಂಗಳೂರಿನ ಮೇಲಿನ ಜನಸಂಖ್ಯೆ ಮತ್ತು ಆಡಳಿತಾತ್ಮಕ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ‘ಎರಡನೇ ಬೆಂಗಳೂರು’ ಪರಿಕಲ್ಪನೆಯನ್ನು ಜಾರಿಗೆ ತರಬೇಕು. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರವಾದ ಕಲಬುರಗಿಯನ್ನು ಪ್ರಾದೇಶಿಕ ಉಪರಾಜಧಾನಿ ಅಥವಾ ದ್ವಿತೀಯ ಆಡಳಿತ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ದೀಪಕನಾಗ್ ಪುಣ್ಯಶೆಟ್ಟಿ ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀತಿ ಆಯೋಗದ ಉಪಾಧ್ಯಕ್ಷ ಡಾ. ಅಶೋಕ್ ಕುಮಾರ್ ಲಹರಿ ಅವರು ಬೆಂಗಳೂರಿನ ಮೇಲಿನ ಒತ್ತಡ ತಗ್ಗಿಸಲು ‘ಎರಡನೇ ಬೆಂಗಳೂರು’ ನಿರ್ಮಿಸುವ ಸಲಹೆ ನೀಡಿರುವುದನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವಾಗತಿಸಿರುವುದು ದೂರದೃಷ್ಟಿಯ ಹೆಜ್ಜೆಯಾಗಿದೆ ಎಂದು ಹೇಳಿದರು.

ಕಲಬುರಗಿ ಈಗಾಗಲೇ ಕಲ್ಯಾಣ ಕರ್ನಾಟಕದ ಪ್ರಮುಖ ಆಡಳಿತ, ಶಿಕ್ಷಣ, ಆರೋಗ್ಯ, ವಾಣಿಜ್ಯ ಹಾಗೂ ಸಾರಿಗೆ ಕೇಂದ್ರವಾಗಿ ಬೆಳೆಯುತ್ತಿದೆ. ಹೈಕೋರ್ಟ್ ಸಂಚಾರಿ ಪೀಠ, ವಿಮಾನ ನಿಲ್ದಾಣ, ಪ್ರಮುಖ ರೈಲ್ವೆ ಜಂಕ್ಷನ್, ಉತ್ತಮ ರಸ್ತೆ-ರೈಲು ಸಂಪರ್ಕ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಪ್ರಾದೇಶಿಕ ಕಚೇರಿಗಳು ಇಲ್ಲಿವೆ. ಹೀಗಾಗಿ ಮತ್ತಷ್ಟು ಆಡಳಿತಾತ್ಮಕ ಕಚೇರಿಗಳನ್ನು ಇಲ್ಲಿಗೆ ಸ್ಥಳಾಂತರಿಸಲು ಅಗತ್ಯ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿದರು.

ಬೆಂಗಳೂರಿನಿಂದ ಸುಮಾರು 600 ಕಿಲೋಮೀಟರ್ ದೂರದಲ್ಲಿರುವ ಕಲ್ಯಾಣ ಕರ್ನಾಟಕದ ಜನರು ಸರ್ಕಾರಿ ಕೆಲಸಗಳಿಗಾಗಿ ರಾಜಧಾನಿಗೆ ತೆರಳಬೇಕಾದ ಪರಿಸ್ಥಿತಿ ಇನ್ನೂ ಇದೆ. ಕಲಬುರಗಿಯನ್ನು ದ್ವಿತೀಯ ಆಡಳಿತ ಕೇಂದ್ರವನ್ನಾಗಿ ರೂಪಿಸಿದರೆ ಜನರಿಗೆ ಆಡಳಿತಾತ್ಮಕ ಸೇವೆಗಳು ಹತ್ತಿರವಾಗುವುದರ ಜೊತೆಗೆ ಬೆಂಗಳೂರಿನ ಮೇಲಿನ ಒತ್ತಡವೂ ಕಡಿಮೆಯಾಗಲಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕಕ್ಕೆ ದೊರೆತಿರುವ 371(ಜೆ) ವಿಶೇಷ ಸ್ಥಾನಮಾನ ಈ ಭಾಗದ ಜನರ ದೀರ್ಘ ಹೋರಾಟದ ಫಲವಾಗಿದೆ. ಇದೀಗ ಕಲಬುರಗಿಯನ್ನು ಪ್ರಾದೇಶಿಕ ಉಪರಾಜಧಾನಿ ಅಥವಾ ದ್ವಿತೀಯ ಆಡಳಿತ ಕೇಂದ್ರವನ್ನಾಗಿ ಘೋಷಿಸುವುದು ಈ ಭಾಗದ ಅಭಿವೃದ್ಧಿಗೆ ಮತ್ತೊಂದು ಐತಿಹಾಸಿಕ ಹೆಜ್ಜೆಯಾಗಲಿದೆ ಎಂದು ಪುಣ್ಯಶೆಟ್ಟಿ ಅಭಿಪ್ರಾಯಪಟ್ಟರು.

ಈ ನಿರ್ಧಾರದಿಂದ ಉದ್ಯೋಗ, ಕೈಗಾರಿಕೆ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಮತ್ತು ಹೂಡಿಕೆ ಅವಕಾಶಗಳು ಹೆಚ್ಚಲಿದ್ದು, ಆಡಳಿತಾತ್ಮಕ ಸೇವೆಗಳು ಜನರಿಗೆ ಸುಲಭವಾಗಿ ಲಭ್ಯವಾಗಲಿವೆ ಎಂದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಹೋರಾಡುತ್ತಿರುವ ಸಂಘಟನೆಗಳು, ಜನಪ್ರತಿನಿಧಿಗಳು, ಬುದ್ಧಿಜೀವಿಗಳು, ಯುವಕರು ಹಾಗೂ ಸಾರ್ವಜನಿಕರು ಪಕ್ಷಾತೀತವಾಗಿ ಒಗ್ಗೂಡಿ ಈ ಬೇಡಿಕೆಗೆ ಬೆಂಬಲ ನೀಡಬೇಕು ಎಂದು ಅವರು ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಅಲ್ಲಾವುದ್ದೀನ್ ಅನ್ಸಾರಿ, ಮಲ್ಲರೆಡ್ಡಿ, ಶರಣು ಪಪ್ಪಾ, ಶಿವಕುಮಾರ್ ಮೂಲಗೆ, ಹಣಮಂತರಾಯ ಹಂಗರಗಿ ಮತ್ತಿತರರು ಉಪಸ್ಥಿತರಿದ್ದರು.

Tags

administrative centresub capitalKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X