ಕಲಬುರಗಿ: ಕೋರಿಸಿದ್ದೇಶ್ವರ ಸಂಸ್ಥಾನ ಮಠದಲ್ಲಿ ಭಕ್ತ ಆತ್ಮಹತ್ಯೆ

ಮಲ್ಲಿಕಾರ್ಜುನ ವೀರಯ್ಯಸ್ವಾಮಿ ಹಿರೇಮಠ
ಕಲಬುರಗಿ: ಚಿತ್ತಾಪುರ ತಾಲೂಕಿನ ನಾಲವಾರ ಶ್ರೀ ಕೋರಿಸಿದ್ದೇಶ್ವರ ಸಂಸ್ಥಾನ ಮಠದಲ್ಲಿ ಭಕ್ತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಕೋರಿಸಿದ್ದೇಶ್ವರ ಶ್ರೀಗಳ ಸಂಬಂಧಿ ಎನ್ನಲಾಗಿರುವ ಮಲ್ಲಿಕಾರ್ಜುನ ವೀರಯ್ಯಸ್ವಾಮಿ ಹಿರೇಮಠ (35) ಆತ್ಮಹತ್ಯೆ ಮಾಡಿಕೊಂಡವರು.
ಮಠದಲ್ಲಿರುವ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ತಿಳಿದುಬಂದಿದೆ.
ಮೃತ ಮಲ್ಲಿಕಾರ್ಜುನ ಮಠದ ಪೀಠಾಧಿಪತಿ ತೋಟೇಂದ್ರ ಶಿವಾಚಾರ್ಯ ಅವರ ತಂಗಿಯ ಪುತ್ರ ಎನ್ನಲಾಗಿದ್ದು, ಒಂದು ವರ್ಷದ ಹಿಂದೆ ಅವರಿಗೆ ಮದುವೆಯಾಗಿತ್ತು. ಪೂಜ್ಯರ ಸೇವೆ ಮಾಡುತ್ತ ಮಠದಲ್ಲೇ ವಾಸವಿದ್ದರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಚಿತ್ತಾಪೂರ ಸಿಪಿಐ ಚಂದ್ರಶೇಖರ್ ತಿಗಡಿ, ಪಿಎಸ್ಐ ತಿರುಮಲೇಶ್ ಭೇಟಿ ನೀಡಿದ್ದಾರೆ
Next Story