Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ನ.17ರಂದು ಕಲಬುರಗಿಯಲ್ಲಿ ಜಿಲ್ಲಾ ಮಟ್ಟದ...

ನ.17ರಂದು ಕಲಬುರಗಿಯಲ್ಲಿ ಜಿಲ್ಲಾ ಮಟ್ಟದ ಯುವ ಸಂಸ್ಕೃತಿ ಪುನಶ್ಚೇತನ ಶಿಬಿರ : ಡಾ.ಮೀನಾಕ್ಷಿ ಬಾಳಿ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ15 Nov 2026 4:39 PM IST
share
ನ.17ರಂದು ಕಲಬುರಗಿಯಲ್ಲಿ ಜಿಲ್ಲಾ ಮಟ್ಟದ ಯುವ ಸಂಸ್ಕೃತಿ ಪುನಶ್ಚೇತನ ಶಿಬಿರ : ಡಾ.ಮೀನಾಕ್ಷಿ ಬಾಳಿ

ಕಲಬುರಗಿ: ಯುವಪೀಳಿಗೆಯಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಸಂತಕವಿ ಕನಕದಾಸ ಮತ್ತು ತತ್ವಪದ ಅಧ್ಯಯನ ಕೇಂದ್ರ, ಬೆಂಗಳೂರು ವತಿಯಿಂದ ನವೆಂಬರ್ 17ರಂದು ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಮಹಿಳಾ ಮಹಾವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಯುವ ಸಂಸ್ಕೃತಿ ಪುನಶ್ಚೇತನ ಶಿಬಿರ ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಶಿಬಿರದ ಜಿಲ್ಲಾ ಸಂಚಾಲಕಿ ಡಾ.ಮೀನಾಕ್ಷಿ ಬಾಳಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಲ್ಲಿ ಶರಣ ಸಾಹಿತ್ಯ, ತತ್ವಪದ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯದ ಬಗ್ಗೆ ಆಸಕ್ತಿ ಬೆಳೆಸುವುದು ಶಿಬಿರದ ಮುಖ್ಯ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಸಾಹಿತ್ಯವನ್ನು ಓದಿ, ಗ್ರಹಿಸಿ ಅಭಿವ್ಯಕ್ತಿಸುವುದರ ಜತೆಗೆ ಕನ್ನಡ ಸಾಂಸ್ಕೃತಿಕ ಪರಂಪರೆ ಮತ್ತು ವರ್ತಮಾನದ ಬದುಕಿನ ಬಗ್ಗೆ ವೈಚಾರಿಕ ಸಂವೇದನೆ ಬೆಳೆಸಿಕೊಳ್ಳಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು.

ರಾಜ್ಯವ್ಯಾಪಿ ಜಿಲ್ಲಾ ಮಟ್ಟದಲ್ಲಿ ಪ್ರಬಂಧ ರಚನೆ, ಓದು-ವ್ಯಾಖ್ಯಾನ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಇದರ ಭಾಗವಾಗಿ ನವೆಂಬರ್ 17ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ಈಗಾಗಲೇ ಜಿಲ್ಲೆಯ ವಿವಿಧ ತಾಲೂಕುಗಳಿಂದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಪೂಜ್ಯ ಡಾ. ದಾಕ್ಷಾಯಿಣಿ ಎಸ್. ಅಪ್ಪ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಸಂತಕವಿ ಕನಕದಾಸ ಮತ್ತು ತತ್ವಪದ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ.ತ. ಚಿಕ್ಕಣ್ಣ ಉದ್ಘಾಟಿಸಲಿದ್ದಾರೆ. ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಕಾಲೇಜಿನ ಪ್ರಾಂಶುಪಾಲೆ ಡಾ. ಸೀಮಾ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರತಿ ಸ್ಪರ್ಧೆಯಲ್ಲೂ ಉತ್ತಮ ಸಾಧನೆ ಮಾಡಿದ ತಲಾ 15 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರಬಂಧ ಸ್ಪರ್ಧೆಯ 15 ವಿಜೇತರಿಗೆ ತಲಾ 2,000 ರೂ. ಹಾಗೂ ಓದು-ವ್ಯಾಖ್ಯಾನ ಮತ್ತು ಭಾಷಣ ಸ್ಪರ್ಧೆಗಳ ತಲಾ 15 ವಿಜೇತರಿಗೆ ತಲಾ 1,000 ರೂ. ಪ್ರೋತ್ಸಾಹಧನ ನೀಡಲಾಗುವುದು. ಆಯ್ಕೆಯಾದ ಪ್ರಬಂಧಗಳ ಪೈಕಿ ಒಂದನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು ಎಂದು ವಿವರಿಸಿದರು.

ಡಾ. ನೀಲಾಂಬಿಕಾ ಪೊಲೀಸ್ ಪಾಟೀಲ ಅವರು ಕಾಲೇಜಿನ ವತಿಯಿಂದ ಸ್ಪರ್ಧೆಗಳ ಉಸ್ತುವಾರಿ ವಹಿಸಲಿದ್ದಾರೆ. ಡಾ. ಮೀನಾಕ್ಷಿ ಬಾಳಿ ಜಿಲ್ಲಾ ಸಂಚಾಲಕಿಯಾಗಿ, ಡಾ. ರೊಲೇಕರ ನಾರಾಯಣ, ಡಾ. ಸುರೇಶ ಜಾಧವ ಹಾಗೂ ಡಾ. ಪುಟ್ಟಮಣಿ ದೇವಿದಾಸ ಸಹ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಡಾ. ನೀಲಾಂಬಿಕಾ ಶೇರಿಕಾರ, ಡಾ. ರೊಲೇಕರ ನಾರಾಯಣ, ಡಾ. ಸುರೇಶ ಜಾಧವ ಹಾಗೂ ಡಾ. ಪುಟ್ಟಮಣಿ ದೇವಿದಾಸ ಉಪಸ್ಥಿತರಿದ್ದರು.

Tags

Kalaburagi
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X