Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಭಾರತ ಇರುವವರೆಗೂ ಡಾ.ಅಂಬೇಡ್ಕರ್ ಅವರ...

ಭಾರತ ಇರುವವರೆಗೂ ಡಾ.ಅಂಬೇಡ್ಕರ್ ಅವರ ಹೆಸರು ಅಜರಾಮರ: ಶಾಸಕ ಎಂವೈ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ6 Dec 2025 11:20 PM IST
share
ಭಾರತ ಇರುವವರೆಗೂ ಡಾ.ಅಂಬೇಡ್ಕರ್ ಅವರ ಹೆಸರು ಅಜರಾಮರ: ಶಾಸಕ ಎಂವೈ ಪಾಟೀಲ್

ಕಲಬುರಗಿ: ಸಂವಿಧಾನ ರಚನೆ ಮಾಡಲು ಡಾ.ಬಿ.ಆರ್ ಅಂಬೇಡ್ಕರ್ ಅವರು ಪಟ್ಟ ಶ್ರಮ ಅಸಾಧಾರಣವಾಗಿದೆ. ಭಾರತ ಇರುವವರೆಗೆ ಬಾಬಾಸಾಹೇಬರ ಹೆಸರು ಅಜರಾಮರವಾಗಿರುತ್ತದೆ ಎಂದು ಅಫಜಲಪುರ ಶಾಸಕ ಎಂ.ವೈ ಪಾಟೀಲ್ ಹೇಳಿದ್ದಾರೆ.

ಅಫಜಲಪುರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಉದ್ಯಾನವನದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನದ ನಿಮಿತ್ತ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಸಕ ಎಂ.ವೈ ಪಾಟೀಲ್, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಲವು ದೇಶಗಳನ್ನು ಸುತ್ತಿ ಆಯಾ ದೇಶದ ಸಂವಿಧಾನಗಳನ್ನು ಹಗಲು ರಾತ್ರಿಯೆನ್ನದೆ ಅಧ್ಯಯನ ಮಾಡಿ ತಮ್ಮ ಅನಾರೋಗ್ಯದ ನಡುವೆಯೂ ಮಹಾನ್ ಸಂವಿಧಾನ ಕೊಟ್ಟ ದೇಶಭಕ್ತ. ಇತ್ತೀಚೆಗೆ ಕೆಲವು ವ್ಯಕ್ತಿಗಳು ತಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನವನ್ನು ಬದಲಾಯಿಸುವುದಕ್ಕಾಗಿ ಎಂದು ಹೇಳುತ್ತಿದ್ದಾರೆ. ಇಂಥ ಮಾತುಗಳು ಅಂಬೇಡ್ಕರರಿಗೆ ಬಗೆದ ದ್ರೋಹವಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ್ ಮಾತನಾಡಿ, ಅಂಬೇಡ್ಕರ್ ಅವರ ದಿವ್ಯ ಬದುಕನ್ನು ನೆನಪಿಸುವ ಸ್ಮಾರಕ ಸದರಿ ಉದ್ಯಾನವನದಲ್ಲಿ ನಿರ್ಮಾಣವಾಗಬೇಕು. ಈ ಬಗ್ಗೆ ಶಾಸಕರು ಮುತುವರ್ಜಿ ವಹಿಸಿ ಅಂಬೇಡ್ಕರ್ ಅವರ ಸ್ಮರಣೆಯನ್ನು ಶಾಶ್ವತವಾಗಿ ಇರುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಅಫಜಲ್ಪುರ ತಾಲೂಕು ದಂಡಾಧಿಕಾರಿಗಳಾದ ಸಂಜೀವ್ ಕುಮಾರ್ ದಾಸರ್ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಮ್ಮ ಉಸಿರಿರುವ ತನಕ ನಿರಂತರ ಅಧ್ಯಯನದಲ್ಲಿ ತೊಡಗಿದ್ದರು. ಇಂಥ ಜ್ಞಾನ ಸೂರ್ಯ ನನ್ನು ಪಡೆದ ನಾವೆಲ್ಲರೂ ಧನ್ಯರು ಎಂದು ಹೇಳಿದರು.

ಅಫಜಲಪುರ ಪಟ್ಟಣದ ವಿವಿಧ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ವೀರಣ್ಣ, ಅಶೋಕ್ ನಾಯಕ, ಮಹಾನಾಯಕ ಅಂಬೇಡ್ಕರ್ ಸಂಘದ ಜಿಲ್ಲಾ ಅಧ್ಯಕ್ಷ ನಾಗೇಶ ಕೊಳ್ಳಿ, ತಾಲೂಕಿನ ದಲಿತ ಮುಖಂಡ ಭೀಮರಾಯ ಗೌರ್, ದಲಿತ ಸಂಘರ್ಷ ಸಮಿತಿಯ ಮುಖಂಡ ಮಹಾಂತೇಶ್ ಬಳಗುಂಡಿ , ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮಳೆಂದ್ರ ಡಾಂಗೆ, ತಾಲೂಕು ಕಾಂಗ್ರೆಸ್ ಕಮಿಟಿ ಅಧ್ಯಕ್ಷ ರಮೇಶ್‌ ಪೂಜಾರಿ, ಆಶಾ ಕಿರಣ ಸ್ವಯಂ ಸೇವಾ ಸಮಿತಿಯ ಅಧ್ಯಕ್ಷೆ ಪ್ರಭಾವತಿ ಮೇತ್ರಿ, ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಸವರಾಜ್ ಚಂದಕೋಟೆ, ಪಂಚ ಗ್ಯಾರಂಟಿಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪ್ರಕಾಶ್ ಜಮಾದಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸಿದ್ಧಾರ್ಥ ಬಸರಿಗಿಡ, ಪುರಸಭೆ ಮುಖ್ಯ ಅಧಿಕಾರಿ ಫಕ್ರುದ್ದೀನ್, ಅರವಿಂದ ದೊಡ್ಡಮನಿ, ರಾಜು ಬಬಲಾದ, ಸಂತೋಷ ಚಲವಾದಿ, ಪ್ರಕಾಶ್‌ ಬನ್ನಟ್ಟಿ ಮತ್ತು ಧಾನು ಪತಾಟೆ ರಾಜು ಅರೆಕರ್ ಉಪಸ್ಥಿತರಿದ್ದರು.

ರವಿ ಗೌರ ಕಾರ್ಯಕ್ರಮ ನಿರೂಪಣೆ ಮಾಡಿದರು. ಇದಕ್ಕೂ ಮೊದಲು ಶಾಸಕರಾದ ಎಂ.ವೈ. ಪಾಟೀಲ್ ಮತ್ತು ಇತರ ಅಂಬೇಡ್ಕರ್ ಅನುಯಾಯಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X