ಆಳಂದ | ಜವಳಗಾ(ಜೆ)ದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ

ಕಲಬುರಗಿ : ಕರ್ನಾಟಕ-ಮಹಾರಾಷ್ಟ್ರ ಗಡಿಯ ಆಳಂದ ತಾಲೂಕಿನ ಜವಳಗ (ಜೆ) ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಆಚರಿಸಲಾಯಿತು.
1963ರಿಂದ ಈ ಗ್ರಾಮದಲ್ಲಿ ಪ್ರತಿವರ್ಷ ಡಾ.ಅಂಬೇಡ್ಕರ್ ಜಯಂತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ, ಇದು ಸಮುದಾಯದ ಸ್ವಾಭಿಮಾನ ಮತ್ತು ಒಗ್ಗಟ್ಟಿನ ಸಂಕೇತವಾಗಿದೆ ಎಂದು ಮುಖಂಡರು ತಿಳಿಸಿದರು.
ಕಾರ್ಯಕ್ರಮವನ್ನು ಕೆಎಂಎಫ್ ಅಧ್ಯಕ್ಷ ಆರ್.ಕೆ.ಪಾಟೀಲ್ ಉದ್ಘಾಟಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆ ಶ್ರೀಧರ್ ಕಾಂಬ್ಳೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಎಪಿಎಂಸಿ ಮಾಜಿ ಉಪಾಧ್ಯಕ್ಷ ತುಕಾರಾಮ್ ವಗ್ಗೆ, ಡಿಎಸ್‌ಎಸ್ ಮುಖಂಡ ಭೀಮಶಂಕರ್ ತಳ್ಕೇರಿ, ದಲಿತ ಸೇನೆಯ ಧರ್ಮಾ ಜಿ. ಬಂಗರಗಿ, ಗ್ರಾಪಂ ಮಾಜಿ ಅಧ್ಯಕ್ಷ ವೀರಭದ್ರಪ್ಪ, ಆಳಂಗಾ ಗ್ರಾಮದ ಪ್ರತಾಪ್ ಕುಲಕರ್ಣಿ, ಸಮಾಜ ಕಲ್ಯಾಣ ಕಲಬುರಗಿ ಇಲಾಖೆ ವಸತಿ ಮೇಲ್ವಿಚಾರಕ ವಿದ್ಯಾಧರ್ ಕಾಂಬಳೆ, ದಿಲೀಪ್ ಸೂರ್ಯವಂಶಿ ಸೇರಿ ಅನೇಕ ಗಣ್ಯಮಾನ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Next Story





