ಜುಲೈ 4ರಂದು ಡಾ.ಫ.ಗು. ಹಳಕಟ್ಟಿ ಪ್ರಶಸ್ತಿ ಪ್ರದಾನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ: ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಅವರ ಜಯಂತಿ ಅಂಗವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ಜುಲೈ 4ರಂದು ಸಂಜೆ 4.15ಕ್ಕೆ ನಗರದ ಕನ್ನಡ ಭವನದಲ್ಲಿ ಜಿಲ್ಲಾ ಮಟ್ಟದ 2026ನೇ ಸಾಲಿನ ಡಾ. ಫ.ಗು. ಹಳಕಟ್ಟಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಹಳಕಟ್ಟಿ ಅವರ ಬದುಕು-ಸಾಧನೆ ಕುರಿತ ವಿಚಾರಗೋಷ್ಠಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಸಮಾರಂಭವನ್ನು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣ ಕಮಕನೂರ ಉದ್ಘಾಟಿಸಲಿದ್ದು, ಎಪಿಎಂಸಿ ಅಧ್ಯಕ್ಷ ಮಂಜುನಾಥ ಅಂಜುಟಗಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ವಡ್ಡನಕೇರಿ, ಶರಣ ಚಿಂತಕಿ ಜಯಶ್ರೀ ಚಟ್ನಳ್ಳಿ, ಅಫಜಲಪುರದ ಭಾರತೀಯ ಬಸವ ಬಳಗದ ಮಹೇಶ ಆಲೇಗಾಂವ ಹಾಗೂ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎಂ. ಪಾಟೀಲ ಕಲ್ಲೂರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಶಸ್ತಿಗೆ ಆಯ್ಕೆಯಾದವರು:
ಚಿದಂಬರರಾವ ಪಾಟೀಲ ಮರಗುತ್ತಿ, ಬೈಲಪ್ಪ ನೇದಲಗಿ (ನೆಲೋಗಿ), ಪ್ರೊ. ಶಿವರಾಜ ಪಾಟೀಲ, ಡಾ. ಗಳಂಗಳಪ್ಪ ಪಾಟೀಲ, ಬಂಡಪ್ಪ ಕೇಸೂರ, ಜಗನ್ನಾಥ ರಾಚೊಟ್ಟೆ, ಕಮಲಾ ಬಿ. ಪಾಟೀಲ ಹೇರೂರ, ಅಶೋಕ ಘೂಳಿ, ಡಾ. ಶ್ರೀಮಂತ ಹೋಳಕರ್ ಹಾಗೂ ಡಾ. ಆನಂದ ಸಿದ್ದಾಮಣಿ ಅವರನ್ನು 2026ನೇ ಸಾಲಿನ ಡಾ. ಫ.ಗು. ಹಳಕಟ್ಟಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.




