ಕನ್ನಡ ಜಾನಪದ ಪರಿಷತ್ ಜೇವರ್ಗಿ ತಾಲೂಕು ಘಟಕದ ಅಧ್ಯಕ್ಷರಾಗಿ ಡಾ.ಖಾಜಾವಲಿ ಈಚನಾಳ ನೇಮಕ

ಕಲಬುರಗಿ: ಕನ್ನಡ ಜಾನಪದ ಪರಿಷತ್ ಜೇವರ್ಗಿ ತಾಲೂಕು ಘಟಕದ ಅಧ್ಯಕ್ಷರಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಖಾಜಾವಲಿ ಈಚನಾಳ ಅವರನ್ನು ನೇಮಕ ಮಾಡಲಾಗಿದೆ.
ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಎಸ್. ಬಾಲಾಜಿಯವರ ಆದೇಶದ ಮೇರೆಗೆ ಈ ನೇಮಕಾತಿ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಎಂ.ಬಿ. ನಿಂಗಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ತು ರಾಜ್ಯಾದ್ಯಂತ ಜಾನಪದ ಸಾಹಿತ್ಯದ ಸಂಗ್ರಹ, ಜಾನಪದ ಕಲೆಗಳ ತರಬೇತಿ ಹಾಗೂ ಹಿರಿಯ ಜಾನಪದ ಕಲಾವಿದರಿಗೆ ಗೌರವ ಸತ್ಕಾರ ಮಾಡುವ ಮೂಲಕ ಜಾನಪದ ಸಂಸ್ಕೃತಿ, ಸಾಹಿತ್ಯ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತದೆ.
Next Story





