Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕರ್ನಾಟಕ ಅಲ್ಪಸಂಖ್ಯಾತರ ಶಿಕ್ಷಣ...

ಕರ್ನಾಟಕ ಅಲ್ಪಸಂಖ್ಯಾತರ ಶಿಕ್ಷಣ ದೃಷ್ಟಿಕೋನ ಸಮಿತಿಗೆ ಡಾ.ಸೈಯದ್ ಮುಸ್ತಫಾ ಅಲ್ ಹುಸೈನಿ ನಾಮನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ12 Oct 2026 10:05 PM IST
share
ಕರ್ನಾಟಕ ಅಲ್ಪಸಂಖ್ಯಾತರ ಶಿಕ್ಷಣ ದೃಷ್ಟಿಕೋನ ಸಮಿತಿಗೆ ಡಾ.ಸೈಯದ್ ಮುಸ್ತಫಾ ಅಲ್ ಹುಸೈನಿ ನಾಮನಿರ್ದೇಶನ

ಕಲಬುರಗಿ: ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಶಿಕ್ಷಣದ ಉತ್ತೇಜನ, ಶೈಕ್ಷಣಿಕ ಗುಣಮಟ್ಟದ ಸುಧಾರಣೆ ಹಾಗೂ ಭವಿಷ್ಯದ ಶೈಕ್ಷಣಿಕ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿ ಖಾನ್ ಅವರ ನೇತೃತ್ವದಲ್ಲಿ ರಚಿಸಲಾಗಿರುವ ‘ಕರ್ನಾಟಕ ಅಲ್ಪಸಂಖ್ಯಾತರ ಶಿಕ್ಷಣ ದೃಷ್ಟಿಕೋನ ಸಮಿತಿ’ಯ ಸದಸ್ಯರಾಗಿ ಪ್ರಸಿದ್ಧ ಶಿಕ್ಷಣ ತಜ್ಞ ಹಾಗೂ ವೈದ್ಯ ಡಾ.ಸೈಯದ್ ಮುಸ್ತಫಾ ಅಲ್-ಹುಸೈನಿ ಸಾಹಿಬ್ ಕಿಬ್ಲಾ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಡಾ. ಸೈಯದ್ ಮುಸ್ತಫಾ ಅಲ್-ಹುಸೈನಿ ಅವರು ಖ್ವಾಜಾ ಬಂದೇ ನವಾಝ್ ದರ್ಗಾದ ಸಜ್ಜಾದಾ ನಶೀನ್ ಸಾಹಿಬ್ ಕಿಬ್ಲಾ ಅವರ ಸಹೋದರರಾಗಿದ್ದಾರೆ. ಪ್ರಸ್ತುತ ಅವರು ಖ್ವಾಜಾ ಬಂದೇನವಾಝ್ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ದೇಶಕರಾಗಿ ಹಾಗೂ ಖ್ವಾಜಾ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವೃತ್ತಿಯಿಂದ ಎಂಬಿಬಿಎಸ್ (MBBS) ವೈದ್ಯರಾಗಿರುವ ಅವರು, ಕಳೆದ 15 ವರ್ಷಗಳಿಗೂ ಹೆಚ್ಚು ಕಾಲದಿಂದ ಶಿಕ್ಷಣ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಉನ್ನತ ಶಿಕ್ಷಣ ಸಂಸ್ಥೆಗಳ ಆಡಳಿತಾತ್ಮಕ ಹಾಗೂ ಶೈಕ್ಷಣಿಕ ಅನುಭವ ಹೊಂದಿರುವ ಅವರ ಸೇವೆಯು ರಾಜ್ಯಮಟ್ಟದ ಶೈಕ್ಷಣಿಕ ಸುಧಾರಣೆಗೆ ಮತ್ತಷ್ಟು ಬಲ ನೀಡುವ ನಿರೀಕ್ಷೆಯಿದೆ.

ಅಲ್ಪಸಂಖ್ಯಾತ ಸಮುದಾಯಗಳ ಶೈಕ್ಷಣಿಕ ಪ್ರಗತಿಗೆ ಎದುರಾಗಿರುವ ಸಮಸ್ಯೆಗಳನ್ನು ಪರಿಶೀಲಿಸುವುದು, ಭವಿಷ್ಯದ ಶೈಕ್ಷಣಿಕ ನೀತಿಗಳ ಕುರಿತು ಸರ್ಕಾರಕ್ಕೆ ಸೂಕ್ತ ಸಲಹೆಗಳನ್ನು ನೀಡುವುದು ಹಾಗೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಉನ್ನತ ಶಿಕ್ಷಣದ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವುದು ಸಮಿತಿಯ ಪ್ರಮುಖ ಉದ್ದೇಶಗಳಾಗಿವೆ.

ಈ ಉನ್ನತ ಮಟ್ಟದ ಸಮಿತಿಯಲ್ಲಿ ಆಡಳಿತಾಧಿಕಾರಿಗಳು, ಶಿಕ್ಷಣ ತಜ್ಞರು ಹಾಗೂ ವಿವಿಧ ಕ್ಷೇತ್ರಗಳ ಅನುಭವಿಗಳನ್ನೂ ಸದಸ್ಯರಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ.ಅತೀಕ್, ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಿ.ಸಿ. ಜಾಫರ್, ಡಾ. ಅಬ್ದುಲ್ ಖಾದೀರ್ (ಶಾಹೀನ್ ಗ್ರೂಪ್), ಫಾದರ್ ಫ್ರಾನ್ಸಿಸ್, ಖಾಲಿದ್ ಬೇಗ್ ನದ್ವಿ, ಬೆಲ್ಲಾ ಶೆಟ್ಟಿ, ರುಕ್ಸಾನಾ ನಜ್ನೀನ್, ರುದ್ರೇಶ್, ಪ್ರೊ. ಶೌಕತ್ ಅಜೀಂ, ಶ್ರೀನಿವಾಸನ್ ತಿಮ್ಮರಾಯನ್, ಅಬ್ದುಲ್ ಸುಭಾನ್, ಆಯಿಷಾ ಫರ್ಜಾನಾ ಯು.ಟಿ. ಹಾಗೂ ರುಕ್ಸಾನಾ ಹಸನ್ ಅವರು ಸಮಿತಿಯ ಇತರ ಸದಸ್ಯರಾಗಿದ್ದಾರೆ.

Tags

EducationminoritiesKarnatakaDr.Syed Mustafa Al-Husaini
share
ವಾರ್ತಾಭಾರತಿ
ವಾರ್ತಾಭಾರತಿ
Next Story
X