Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯ ಎಲ್ಲೆಡೆ ಶಾಂತಿ- ಸಹಬಾಳ್ವೆಯ...

ಕಲಬುರಗಿಯ ಎಲ್ಲೆಡೆ ಶಾಂತಿ- ಸಹಬಾಳ್ವೆಯ 'ಈದುಲ್ ಫಿತ್ರ್' ಆಚರಣೆ

ವಾರ್ತಾಭಾರತಿವಾರ್ತಾಭಾರತಿ21 March 2026 5:48 PM IST
share
ಕಲಬುರಗಿಯ ಎಲ್ಲೆಡೆ ಶಾಂತಿ- ಸಹಬಾಳ್ವೆಯ ಈದುಲ್ ಫಿತ್ರ್ ಆಚರಣೆ

ಕಲಬುರಗಿ: ಮುಸ್ಲಿಂ ಭಾಂದವರು ಶಾಂತಿ ಸಹಬಾಳ್ವೆಯ ಸಂಕೇತವಾದ 'ಈದುಲ್ ಫಿತ್ರ್' (ರಂಝಾನ್) ಹಬ್ಬವನ್ನು ಶನಿವಾರ ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಿದರು.

ತಿಂಗಳ ಪೂರ್ತಿ ಉಪವಾಸ ವೃತ ಆಚರಿಸಿದ ಮುಸಲ್ಮಾನರು ಶನಿವಾರ ಸಮೀಪದ ಈದ್ಗಾ ಮೈದಾನಗಳಲ್ಲಿ ಸೇರಿಕೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಿಶ್ವಶಾಂತಿ, ಭಾತೃತ್ವ, ಸಹಬಾಳ್ವೆ ಹಾಗೂ ಯುದ್ಧ ವಿನಾಶಕ್ಕೆ ದಾರಿ ಮಾಡಿಕೊಡುತ್ತದೆ, ಮಾನವೀಯತೆ ಕೊಲ್ಲುವ ಯುದ್ಧವನ್ನು ಕೊನೆಗಾಣಿಸಬೇಕು ಎಂದು ವಿಶೇಷವಾಗಿ ಪ್ರಾರ್ಥಿಸಿದರು.

ನಮಾಝ್ ನೆರವೇರಿಸಿದ ಬಳಿಕ ಬಡವ-ನಿರ್ಗತಿಕರಿಗೆ ದಿನಸಿ ವಿತರಣೆ ಮಾಡಿ ಗಮನ ಸೆಳೆದರೆ, ಝಕಾತ್ (ದಾನ) ಮಾಡಿದರು. ಪುರುಷರು, ಮಹಿಳೆಯರು ವಿಶೇಷ ಉಡುಗೆಗಳಲ್ಲಿ ಗಮನ ಸೆಳೆದರು. ಮಕ್ಕಳು ಸಹ ಆಕರ್ಷಕ ಉಡುಗೆ ತೊಡುಗೆಗಳಿಂದ ಆಕರ್ಷಿಸಿದರು.

ಪ್ರಾರ್ಥನೆ ಬಳಿಕ ಪರಸ್ಪರ ಅಪ್ಪಿಕೊಂಡು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಸೇಡಂನಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಆಳಂದದಲ್ಲಿ ಶಾಸಕ ಬಿ.ಆರ್ ಪಾಟೀಲ್, ಜೇವರ್ಗಿಯಲ್ಲಿ ಕೆಕೆಆರ್ ಡಿಬಿ ಅಧ್ಯಕ್ಷ, ಶಾಸಕ ಡಾ.ಅಜಯ್ ಸಿಂಗ್, ಅಫಜಲಪುರದಲ್ಲಿ ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ್ ಪಾಟೀಲ್, ಕಲಬುರಗಿ ನಗರದಲ್ಲಿ ಕಾಂಗ್ರೆಸ್ ಮುಖಂಡ ಫರಾಜ್ ಉಲ್ ಇಸ್ಲಾಂ ಅವರು ಮುಸ್ಲಿಂ ಬಾಂಧವರಿಗೆ ಶುಭಾಶಯಗಳನ್ನು ತಿಳಿಸಿದರು. ಬಳಿಕ ಶಿರ್ ಕುರ್ಮಾ, ಖಾದ್ಯಗಳು, ಸಿಹಿ ತಿನಿಸುಗಳು, ನಾನಾ ರೀತಿಯ ವಿಶೇಷ ಮಾಂಸಾಹಾರ ಪದಾರ್ಥಗಳು ಸವಿದು ಸಂಭ್ರಮದಿಂದ ಹಬ್ಬ ಆಚರಿಸಿದರು.

ಕಲಬುರಗಿ ನಗರದಲ್ಲಿ ಆಳಂದ ಚೆಕ್ ಪೋಸ್ಟ್ ಸಮೀಪದ ಈದ್ಗಾ, ರಾಜಾಪುರ ಈದ್ಗಾ ಮೈದಾನ, ದರ್ಗಾ ಮೈದಾನ, ವಿವಿಧ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕುಡಾ ಅಧ್ಯಕ್ಷ ಮಝಹರ್ ಖಾನ್ ಆಲಂ, ವೈದ್ಯ ಡಾ.ಫಾರುಕ್ ಮಣೂರ, ಡಾ. ಅಜಗರ್ ಚುಲಬುಲ್, ಶಕೀಲ್ ಸರಡಗಿ, ಮೌಲಾನಾ ವಿಖಾರ್ ಆಸರ್ಫಿ, ಸೇರಿದಂತೆ ಹಲವು ಮುಖಂಡರು ಇದ್ದರು.

Tags

Eid-ul-FitrKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X