Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಈಡಿಸ್ ಸೊಳ್ಳೆಗಳ ಉತ್ಪತ್ತಿ...

ಕಲಬುರಗಿ| ಈಡಿಸ್ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡಿ: ಬಿ.ಫೌಝಿಯಾ ತರನ್ನುಮ್

ವಾರ್ತಾಭಾರತಿವಾರ್ತಾಭಾರತಿ22 May 2025 8:38 PM IST
share
ಕಲಬುರಗಿ|  ಈಡಿಸ್ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡಿ: ಬಿ.ಫೌಝಿಯಾ ತರನ್ನುಮ್

ಕಲಬುರಗಿ: ಸಾಂಕ್ರಾಮಿಕ ರೋಗ ಡೆಂಗ್ಯೂ ಹರಡಲು ಕಾರಣವಾಗುವ ಈಡಿಸ್ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡಬೇಕು ಮತ್ತು ಲಾರ್ವಾ ಸಮೀಕ್ಷೆ ತೀವ್ರಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡೆಂಗ್ಯೂ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ನಡೆದ ಜಿಲ್ಲಾ ಸಮನ್ವಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿ.ಫೌಝಿಯಾ ತರನ್ನಮ್, ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ನಗರಸಭೆ, ಮಹಾನಗರ ಪಾಲಿಕೆಯ ಚುನಾಯಿತ ಸದಸ್ಯರ ಮತ್ತು ವಿವಿಧ ಇಲಾಖೆಯ ಸಹಕಾರ ಪಡೆಯಬೇಕು ಎಂದರು.

ಡೆಂಗ್ಯೂ ಜ್ವರವು ಈಡಿಸ್ ಎಂಬ ಜಾತಿಯ ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದೆ. ಈ ಸೊಳ್ಳೆಗಳನ್ನು ತಿನ್ನುವ ಗಪ್ಪೆ ಮೀನುಗಳನ್ನು ವಿಶೇಷವಾಗಿ ಚಿತ್ತಾಪುರ, ಶಹಾಬಾದ, ಸೇಡಂ ತಾಲೂಕಿನ ಕಲ್ಲು ಗಣಿ ಪ್ರದೇಶದಲ್ಲಿ ನಿಂತ ನೀರಿನಲ್ಲಿ ಬಿಡಬೇಕು. ಇದಲ್ಲದೆ ಬಾವಿ, ನೀರು ನಿಲ್ಲುವ ತೆಗ್ಗ ಪ್ರದೇಶದಲ್ಲಿ, ವಾಟರ್ ಟ್ಯಾಂಕ್‌ನಲ್ಲಿ ಬಿಡಬಹುದಾಗಿದೆ. ಇದನ್ನು ಅಭಿಯಾನದ ರೂಪದಲ್ಲಿ ಮಾಡಬೇಕು ಎಂದ ಹೇಳಿದರು.

ಈಡಿಸ್ ಸೊಳ್ಳೆಗಳು ನೀರು ಶೇಖರಣೆಯ ತೊಟ್ಟಿಗಳು, ಬ್ಯಾರಲ್‌ಗಳು, ಡ್ರಮ್‌ಗಳು, ಹೂವಿನ ಕುಂಡ ಮುಂತಾದವುಗಳಲ್ಲದೇ ಮನೆ ಸುತ್ತ ಮುತ್ತ ಬಯಲಲ್ಲಿ ಬಿಸಾಡಿದ ಪಿಂಗಾಣಿ ವಸ್ತುಗಳು, ಪ್ಲಾಸ್ಟಿಕ್ ಕಪ್ಪುಗಳು, ಟೈರ್‌ಗಳು, ತೆಂಗುವಿನ ಚಿಪ್ಪು ಮತ್ತು ಇತರೆ ವಸ್ತುಗಳಲ್ಲಿ ನೀರು ಸಂಗ್ರಹವಾದಾಗ ಉತ್ಪತ್ತಿಯಾಗುತ್ತವೆ. ಹೀಗಾಗಿ ನೀರು ನಿಲ್ಲದಂತೆ ಸಾರ್ವಜನಿಕರಿಗೆ ಮನೆ-ಮನೆ ಹೋಗಿ ಅರಿವು ಮೂಡಿಸಬೇಕು. ಸಾರಿಗೆ ಸಂಸ್ಥೆಯ ಕಾರ್ಯಾಗಾರ, ಡಿಪೋಗಳಲ್ಲಿನ ಸಿಬ್ಬಂದಿಗಳಿಗೂ ಜಾಗೃತಿ ಮೂಡಿಸಬೇಕು ಮತ್ತು ಬಸ್‌ಗಳಲ್ಲಿ ಪೋಸ್ಟರ್ ಅಂಟಿಸುವ ಮೂಲಕ ವ್ಯಾಪಕ ಪ್ರಚಾರ ಕಾರ್ಯ ಹಮ್ಮಿಕೊಳ್ಳಬೇಕು ಎಂದರು.

ಕಲಬುರಗಿ ಮಹಾನಗರದಲ್ಲಿ ಕಳೆದ ಕೆಲವು ವರ್ಷಗಳಿಂದ ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಇದಕ್ಕೆ ಮೂಲ ಕಾರಣ ಅನೈರ್ಮಲ್ಯ. ಹೀಗಾಗಿ ಮಹಾನಗರ ಪಾಲಿಕೆಯಿಂದ ಸ್ವಚ್ಛತೆ ಅಭಿಯಾನ ಮಾಡುವುದರ ಜೊತೆಗೆ ಕಸ ಹಾಕುವವರ ಮೇಲೆ ದಂಡ ಹಾಕಬೇಕು ಮತ್ತು ರಸ್ತೆ, ನಿವೇಶನದ ಮೇಲಿರುವ ಅನುಪಯುಕ್ತ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಬೇಕೆಂದು ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರಿಗೆ ಡಿ.ಸಿ. ಸೂಚಿಸಿದಲ್ಲದೆ, ವಸತಿ ನಿಲಯ, ಶಾಲೆ-ಕಾಲೇಜು ಮತ್ತು ಗ್ರಾಮ ಪಂಚಾಯತಿ, ತಾಲೂಕ ಪಂಚಾಯತಿ, ಪೌರ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ಆಯೋಜಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಕೀಟಶಾಸ್ತ್ರಜ್ಞ ಚಾಮರಾಜ ದೊಡ್ಡಮನಿ ಅವರು ಡೆಂಗ್ಯೂ ರೋಗ ಲಕ್ಷಣ, ರೋಗ ಹರಡುವಿಕೆ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗೂ ವಿವಿಧ ಇಲಾಖೆಯ ಸಹಭಾಗಿತ್ವದ ಬಗ್ಗೆ ವಿವರ ನೀಡಿದರು. ಡೆಂಗ್ಯೂ ರೋಗ ಪತ್ತೆಯಾದಲ್ಲಿ ಕೂಡಲೆ ಚಿಕಿತ್ಸೆ ಒದಗಿಸಲು ಜಿಮ್ಸ್ ಆಸ್ಪತ್ರೆಯಲ್ಲಿ 20, ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ತಲಾ 10 ಹಾಗೂ ಉದಾಯ ಆರೋಗ್ಯ ಕೇಂದ್ರಗಳಲ್ಲಿ ತಲಾ 5 ಹಾಸಿಗೆಗಳು ಡೆಂಗ್ಯೂ ಪೀಡಿತ ರೋಗಿಗಳಿಗೆ ಮೀಸಲಿರಿಸಿದೆ ಎಂದು ತಿಳಿಸಿದರು.

ವಿಶ್ವ ಆರೋಗ್ಯ ಸಂಸ್ಥೆಯ ಪೊಲಿಯೋ ಸರ್ವೆಲೆನ್ಸ್ ಅಧಿಕಾರಿ ಡಾ.ಅನೀಲ ತಾಳಿಕೋಟಿ ಅವರು ಡೆಂಗ್ಯೂ ರೋಗ, ರುಬೆಲ್ಲಾ, ಮೀಸಲ್ಸ್ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸಿದ್ದಪಡಿಸಿರುವ ಪೋಸ್ಟರ್‌ಗಳನ್ನು ಡಿ.ಸಿ. ಬಿ.ಫೌಝಿಯಾ ತರನ್ನುಮ್ ಬಿಡುಗಡೆ ಮಾಡಿದರು.

ಸಭೆಯಲ್ಲಿ ಜಿಲ್ಲಾ ಸರ್ಜನ್ ಡಾ. ರುಕಿಯಾ ಅಸ್ನಾ ರಬ್ಹಾ, ಆರ್.ಸಿ.ಎಚ್.ಓ ಡಾ.ಸಿದ್ರಾಮ ಪಾಟೀಲ, ಜಿಲ್ಲಾ ಪಂಚಾಯತ್ ಸಿ.ಪಿ.ಓ ಎಸ್.ಎಸ್.ಮಠಪತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಭು ದೊರೆ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು ಭಾಗವಹಿಸಿದ್ದರು.

ಡಿ.ಎಚ್.ಓ ಡಾ.ಶರಣಬಸಪ್ಪ ಕ್ಯಾತನಾಳ ಸಭೆಯಲ್ಲಿ ಚರ್ಚಿಸಬೇಕಾದ ವಿಷಯಗಳನ್ನು ಮಂಡಿಸಿದರು. ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಚಂದ್ರಕಾಂತ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X