Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಳಗಿ-ಚಿಂಚೋಳಿಯಲ್ಲಿ 50 ಬಸವೇಶ್ವರ...

ಕಾಳಗಿ-ಚಿಂಚೋಳಿಯಲ್ಲಿ 50 ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ಒತ್ತು

ವಾರ್ತಾಭಾರತಿವಾರ್ತಾಭಾರತಿ17 May 2026 10:26 PM IST
share
ಕಾಳಗಿ-ಚಿಂಚೋಳಿಯಲ್ಲಿ 50 ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ಒತ್ತು
ಹಲಚೇರಾ ಗ್ರಾಮದಲ್ಲಿ ಬಸವೇಶ್ವರ ಮೂರ್ತಿ ಲೋಕಾರ್ಪಣೆ

ಕಾಳಗಿ: ಕಾಳಗಿ-ಚಿಂಚೋಳಿ ತಾಲೂಕಿನಾದ್ಯಂತ 50 ಗ್ರಾಮಗಳಲ್ಲಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪಿಸಿ ಲೋಕಾರ್ಪಣೆ ಮಾಡುವ ಮುಖ್ಯ ಉದ್ದೇಶ ಹೊಂದಿದ್ದೇವೆ ಎಂದು ಚಿಂಚೋಳಿ ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶರಣು ಪಾಟೀಲ ಮೋತಕಪಳ್ಳಿ ಹೇಳಿದರು.

ತಾಲೂಕಿನ ಹಲಚೇರಾ ಗ್ರಾಮದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವೇಶ್ವರ ಮೂರ್ತಿ ಲೋಕಾರ್ಪಣೆ ಹಾಗೂ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಪ್ರತಿ ಗ್ರಾಮದ ಜನರು ತಮ್ಮ ಗ್ರಾಮದಲ್ಲಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆಗೆ ಮುಂದಾದರೆ ಮಹಾಸಭೆಯ ವತಿಯಿಂದ ತನು-ಮನ-ಧನದಿಂದ ಸೇವೆ ಸಲ್ಲಿಸುತ್ತೇನೆ” ಎಂದು ಹೇಳಿದರು.

ಭರತನೂರಿನ ಪೂಜ್ಯ ಚಿಕ್ಕಗುರುನಂಜೇಶ್ವರ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಬಸವಣ್ಣನವರು ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅವರ ಆದರ್ಶ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಅವರು ತೋರಿದ ಮಾರ್ಗದಲ್ಲಿ ನಡೆಯಬೇಕಿದೆ ಎಂದು ತಿಳಿಸಿದರು.

ರಾಜ್ಯ ಕೆಪಿಸಿಸಿ ಉಪಾಧ್ಯಕ್ಷ ಸುಭಾಷ್ ರಾಠೋಡ ಮಾತನಾಡಿ, ಬಸವಣ್ಣನವರು ತಮ್ಮ ವಚನಗಳ ಮೂಲಕ ಸಮಾನತೆ ಮತ್ತು ಸ್ವಸ್ಥ ಜೀವನದ ಬುನಾದಿ ಹಾಕಿಕೊಟ್ಟವರು. ಬಸವೇಶ್ವರರು ವೀರಶೈವ ಧರ್ಮಕ್ಕಷ್ಟೇ ಅಲ್ಲದೆ ಜಗತ್ತಿನ ಪ್ರತಿಯೊಂದು ಜೀವಿಗೂ ಕಾಯಕದ ಮಹತ್ವವನ್ನು ತಿಳಿಸಿಕೊಟ್ಟಿದ್ದಾರೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ ಬಸವೇಶ್ವರ ಮೂರ್ತಿ ಲೋಕಾರ್ಪಣೆ ಮಾಡಿದರು. ಬೆಂಗಳೂರು ಬಾಲಭವನದ ಉಪಾಧ್ಯಕ್ಷ ಅನೀಲಕುಮಾರ ಜಮಾದಾರ, ಪ್ರಾಂಶುಪಾಲ ಮಲ್ಲಿಕಾರ್ಜುನ ಪಾಲಮನೋರ, ಪತ್ರಕರ್ತ ಜಗನ್ನಾಥ ಸೇರಿಕಾರ ಮಾತನಾಡಿದರು.

ಇದೇ ಸಂದರ್ಭದಲ್ಲಿ ಹಲಚೇರಾ‌ ಗ್ರಾಮದಲ್ಲಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆಗೆ ಕಾರಣಿಕರ್ತರಾದ ಬೆಂಗಳೂರು ಬಾಲ ಭವನದ ಉಪಾಧ್ಯಕ್ಷ ಅನೀಲ ಜಮಾದಾರ ಅವರಿಗೆ ಗ್ರಾಮಸ್ಥರು ಸತ್ಕರಿಸಿ ಗೌರವಿಸಿದರು.

ಹೋಸಳ್ಳಿ ಹಿರೇಮಠದ ಸಿದ್ದಲಿಂಗ ಶಿವಾಚಾರ್ಯ‌ ಸಾನಿದ್ಯ ವಹಿಸಿದ್ದರು, ರಟಕಲ್ ವಿಎಸ್‌ಎಸ್‌ಎನ್ ಅಧ್ಯಕ್ಷ ರೇವಣಸಿದ್ದ ಬಡಾ, ಮಲ್ಲಿನಾಥ ಕೊಲಕುಂದಿ, ಮಲ್ಲಿನಾಥ ಪಾಟೀಲ ಕಾಳಗಿ, ಜಗನ್ನಾಥ ಈದಲಾಯಿ, ಸಂತೋಷ ಕುಮಾರ ಚಿಂಚೋಳಿ, ಗುರುನಾಥ ವಿಂಬ್ರಶೆಟ್ಟಿ, ಸೋಮಶೇಖರ್ ಚಿಂಚೋಳಿ, ಶ್ರೀಮಂತ ಸೇರಿ, ವಿಜಯಕುಮಾರ ಮಾನಕಾರ, ಮಲ್ಲಿಕಾರ್ಜುನ ಪೋಲಿಸ್ ಪಾಟೀಲ, ವಿರೇಶ ಎಂಪಳ್ಳಿ, ಶಿವಯ್ಯ ಸ್ವಾಮಿ ಮಡಪತ್ತಿ, ನಂದಕುಮಾರ ಪಾಟೀಲ, ಶಿವಕುಮಾರ ಸಜ್ಜನ ಸುಲೇಪೆಟ, ಸಿದ್ದು ಕಲಬುರಗಿ, ಎಎಸ್‌ಐ ಪ್ರಭಾಕಾ ಸೇರಿದಂತೆ ಅನೇಕರು ಇದ್ದರು.

ರಾಘವೇಂದ್ರ ಬೆಳಗುಂಪಿ ಸ್ವಾಗತಿಸಿದರು, ಸಂಗೀತ ಶಿಕ್ಷಕ ರೇವಣಸಿದ್ದಯ್ಯ ಸ್ವಾಮಿ ಪ್ರಾರ್ಥಿಸಿದರು, ಗುರುನಾಥ ವಿಂಬ್ರಶೆಟ್ಟಿ ನಿರೂಪಿಸಿ ವಂದಿಸಿದರು.

Tags

ChincholiKalgi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X