Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ...

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಶಿವ ಅಷ್ಟಗಿ

ವಾರ್ತಾಭಾರತಿವಾರ್ತಾಭಾರತಿ6 Jun 2026 7:33 PM IST
share
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಶಿವ ಅಷ್ಟಗಿ

ಕಲಬುರಗಿ: ಜೀವ ಸಂಕುಲದ ಉಳಿವಿಗೆ ಪರಿಸರವೇ ಮೂಲಾಧಾರವಾಗಿದ್ದು, ಗಿಡ-ಮರಗಳು ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು ಎಂದು ಬಿಜೆಪಿ ಯುವ ಮೋರ್ಚಾ ಮುಖಂಡ ಹಾಗೂ ಪರಿಸರವಾದಿ ಶಿವ ಅಷ್ಟಗಿ ಹೇಳಿದರು.

ನಗರದ ಕುಸನೂರು ರಸ್ತೆಯ ಉಜ್ವಲ ಹೌಸಿಂಗ್ ಸೊಸೈಟಿ ಬಡಾವಣೆಯ ಲುಂಬಿನಿ ಉದ್ಯಾನವನದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪರಿಸರ ದಿನಾಚರಣೆ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೆ, ಪರಿಸರ ಸಂರಕ್ಷಣೆಯ ಕುರಿತು ನಿರಂತರ ಜಾಗೃತಿ ಮೂಡಿಸುವ ಚಳವಳಿಯಾಗಬೇಕು ಎಂದು ಅವರು ಹೇಳಿದರು. ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆ, ಅರಣ್ಯನಾಶ ಮತ್ತು ಮಾಲಿನ್ಯದಂತಹ ಗಂಭೀರ ಸವಾಲುಗಳನ್ನು ಎದುರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು ಅವುಗಳನ್ನು ಸಂರಕ್ಷಿಸುವ ಅಗತ್ಯವಿದೆ. ಸಸಿ ನೆಡುವುದಷ್ಟೇ ಅಲ್ಲ, ಅವುಗಳನ್ನು ಮರಗಳಾಗಿ ಬೆಳೆಸುವ ಸಂಕಲ್ಪವನ್ನು ಪ್ರತಿಯೊಬ್ಬರೂ ಕೈಗೊಳ್ಳಬೇಕು ಎಂದು ಕರೆ ನೀಡಿದರು.

ಬಡಾವಣೆಗಳು ಹಾಗೂ ನಗರ ಪ್ರದೇಶಗಳಲ್ಲಿ ಸಸಿ ನೆಡುವ ಜೊತೆಗೆ ಅವುಗಳಿಗೆ ನಿರಂತರವಾಗಿ ನೀರುಣಿಸಿ ಪೋಷಿಸುವ ಕಾರ್ಯವನ್ನು ನಾಗರಿಕರು ತಮ್ಮ ನಿತ್ಯದ ಜವಾಬ್ದಾರಿಯೆಂದು ಪರಿಗಣಿಸಬೇಕು ಎಂದು ಹೇಳಿದರು. ಪದ್ಮಭೂಷಣ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರ ಪರಿಸರ ಪ್ರೇಮ ಮತ್ತು ಸೇವಾ ಮನೋಭಾವವನ್ನು ಎಲ್ಲರೂ ಆದರ್ಶವಾಗಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸೇವಾ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಮಾತನಾಡಿ, ಪರಿಸರ ಹಿತವೇ ಮಾನವ ಹಿತವಾಗಿದ್ದು, ಶಿಕ್ಷಣದಷ್ಟೇ ಪರಿಸರ ಸಂರಕ್ಷಣೆಯೂ ಮಹತ್ವದ್ದಾಗಿದೆ ಎಂದರು. ನಗರೀಕರಣದ ವೇಗದ ನಡುವೆ ಪರಿಸರ ಸಂಪತ್ತು ಕ್ಷೀಣಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ರಸ್ತೆ ಬದಿಗಳಲ್ಲಿ ನೆಡುವ ಸಸಿಗಳನ್ನು ದನಕರುಗಳ ಹಾನಿಯಿಂದ ರಕ್ಷಿಸಲು ಸೂಕ್ತ ತಂತಿ ಬೇಲಿ ನಿರ್ಮಿಸಿ ಅವುಗಳ ಸಂರಕ್ಷಣೆಗೆ ನಾಗರಿಕರು ಮುಂದಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಸಹಾಯಕ ಆಯುಕ್ತ ಹಾಗೂ ವೈದ್ಯಾಧಿಕಾರಿ ಡಾ.ರಾಜೇಂದ್ರ ಭಾಲ್ಕೆ, ಡಾ. ನಾಗೇಂದ್ರ ನಂದಾ, ಪರಿಸರವಾದಿ ಸತೀಶ, ಡಾ. ಕೆ.ಎಂ. ಕುಮಾರಸ್ವಾಮಿ, ಶಿವಕುಮಾರ ಮೋತಿ ಸೇರಿದಂತೆ ಹಲವು ಗಣ್ಯರು, ಪರಿಸರ ಪ್ರೇಮಿಗಳು ಮತ್ತು ಬಡಾವಣೆಯ ನಿವಾಸಿಗಳು ಭಾಗವಹಿಸಿದ್ದರು.


Tags

EnvironmentalShiva Ashtagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X