Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಬುದ್ಧನ ಶಾಂತಿ, ಕರುಣೆಯ ಸಂದೇಶವನ್ನು...

ಬುದ್ಧನ ಶಾಂತಿ, ಕರುಣೆಯ ಸಂದೇಶವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ : ಡಾ.ಶಾಕು ಬೋಧಿಧಮ್ಮ

ಸೇಡಂ ನಗರಕ್ಕೆ ಆಗಮಿಸಿದ ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ

ವಾರ್ತಾಭಾರತಿವಾರ್ತಾಭಾರತಿ6 Oct 2026 3:47 PM IST
share
ಬುದ್ಧನ ಶಾಂತಿ, ಕರುಣೆಯ ಸಂದೇಶವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ : ಡಾ.ಶಾಕು ಬೋಧಿಧಮ್ಮ

ಸೇಡಂ: ಬುದ್ಧನ ಶಾಂತಿ, ಕರುಣೆ, ಸಮಾನತೆ ಹಾಗೂ ಸಹೋದರತ್ವದ ಸಂದೇಶವನ್ನು ಜನರಲ್ಲಿ ಜಾಗೃತಿಗೊಳಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ಸೇಡಂ ನಗರಕ್ಕೆ ಆಗಮಿಸಿತು.

ಅಂತರಾಷ್ಟ್ರೀಯ ಬೌದ್ಧ ಯುವ ಸಂಘಟನೆ ಭಾರತ, ಗ್ಲೋಬಲ್ ಡಾ. ಅಂಬೇಡ್ಕರ್ ಬೌದ್ಧ ಮಿಷನ್, ಯುಎಸ್‌ಎ, ಅಖಿಲ ಭಾರತ ಡಾ. ಅಂಬೇಡ್ಕರ್ ಭಿಕ್ಕು ಸಂಘ ಹಾಗೂ ಬೌದ್ಧ ಮಹಾಸ್ತೂಪ ಅಭಿವೃದ್ಧಿ ಮತ್ತು ಸಂರಕ್ಷಣಾ ಸಂಸ್ಥೆ, ಸನ್ನತಿ–ಕನಗನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಧಮ್ಮ ಜನಜಾಗೃತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಈ ಪ್ರಯುಕ್ತ ಸೇಡಂ ನಗರದಲ್ಲಿ ಆಯೋಜಿಸಿದ್ದ ಧಮ್ಮ ಪ್ರವಚನ ಕಾರ್ಯಕ್ರಮವನ್ನು ಡಾ.ಶಾಕು ಬೋಧಿಧಮ್ಮ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಮಾನತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಬುದ್ಧನ ಶಾಂತಿ ಮತ್ತು ಕರುಣೆಯ ಸಂದೇಶವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಡಾ. ಬಿ.ಆರ್. ಅಂಬೇಡ್ಕರ್ ಅವರು 1956ರ ಅಕ್ಟೋಬರ್ 14ರಂದು ನಾಗಪುರದಲ್ಲಿ ಲಕ್ಷಾಂತರ ಅನುಯಾಯಿಗಳೊಂದಿಗೆ ಬೌದ್ಧ ಧಮ್ಮವನ್ನು ಸ್ವೀಕರಿಸಿ, ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವದ ಆಧಾರದ ಮೇಲೆ ಸಮಸಮಾಜ ನಿರ್ಮಾಣದ ಮಹತ್ವವನ್ನು ಸಾರಿದರು. ಬಾಬಾಸಾಹೇಬರ ಆಶಯದಂತೆ ಸಮಸಮಾಜ ನಿರ್ಮಾಣ ಮಾಡುವುದರ ಜೊತೆಗೆ ಬುದ್ಧನ ಧಮ್ಮದ ಮಾನವೀಯ ಮೌಲ್ಯಗಳನ್ನು ಸಮಾಜದ ಪ್ರತಿಯೊಬ್ಬರಿಗೂ ತಲುಪಿಸುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.

ದೇಶದಲ್ಲಿ ಯಾವುದೇ ರೀತಿಯ ಅಶಾಂತಿ, ದ್ವೇಷ ಮತ್ತು ಅಸಮಾನತೆ ಹೆಚ್ಚಾಗದಂತೆ ಎಲ್ಲರೂ ಸಂವಿಧಾನದ ಆಶಯಗಳನ್ನು ಗೌರವಿಸಬೇಕು. ಬಾಬಾಸಾಹೇಬ ಡಾ. ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಚೌಕಟ್ಟಿನಲ್ಲಿಯೇ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯವನ್ನು ಮತ್ತಷ್ಟು ಬಲಪಡಿಸಬೇಕಾಗಿದೆ ಎಂದು ತಿಳಿಸಿದರು.

ಬುದ್ಧನ ಶಾಂತಿ, ಕರುಣೆ, ಸಮಾನತೆ ಹಾಗೂ ಸಹೋದರತ್ವದ ಸಂದೇಶವನ್ನು ಜನರಲ್ಲಿ ಬಿತ್ತುವ ನಿಟ್ಟಿನಲ್ಲಿ ಧಮ್ಮ ಜನಜಾಗೃತಿ ಯಾತ್ರೆ ಮಹತ್ವದ ಪಾತ್ರ ವಹಿಸಲಿದೆ ಎಂದು ಡಾ. ಶಾಕು ಬೋಧಿಧಮ್ಮ ಹೇಳಿದರು.

ನಂತರ ಮಾತನಾಡಿದ ಜೈಭೀಮ ಊಡಗಿ, ಬಾಬಾಸಾಹೇಬ ಡಾ. ಅಂಬೇಡ್ಕರ್ ಅವರ ವಿಚಾರಧಾರೆ ಹಾಗೂ ಬುದ್ಧನ ಧಮ್ಮದ ಸಂದೇಶವನ್ನು ಸಮಾಜದ ಪ್ರತಿಯೊಬ್ಬರಿಗೂ ತಲುಪಿಸುವ ಅಗತ್ಯವಿದೆ. ಧಮ್ಮದ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಬಲಪಡಿಸಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಜಯಕುಮಾರ್ ಶರ್ಮಾ, ರವಿ ಜಡೇಕರ್, ವಿಲಾಸ್ ಗೌತಂ ನಿಡುಗುಂದ, ಸಂದೀಪ್ ಕಟ್ಟಿವಾಡಿ, ಬಸವರಾಜ ಸಾಗರ, ಪ್ರಶಾಂತ ಸೇಡಮಕರ್, ಸಿದ್ದು ಡೋಣ್ಣೂರು, ಅರುಣಕುಮಾರ ಮೂಡಬೂಳಕರ್, ಶ್ರೀಕಾಂತ ಜಾಪನೂರ, ಶ್ರೀನಿವಾಸ ಸಂಗಾವಿ, ಅಂಬರೀಶ ಎಂ. ಗುಡಿ, ಗೌತಮ ಹಳ್ಳಿ, ಈಶ್ವರ ಮಾಧವಾರ, ವಿಶ್ವ ಸಂಗಾವಿ, ಮಹಾದೇವ ಊಡಗಿ ಸೇರಿದಂತೆ ಹಲವು ಗಣ್ಯರು ಹಾಗೂ ಬೌದ್ಧ ಧಮ್ಮದ ಅನುಯಾಯಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ನಾಗರಾಜ ಊಡಗಿ ನೆರವೇರಿಸಿದರು.

Tags

peaceBuddha
share
ವಾರ್ತಾಭಾರತಿ
ವಾರ್ತಾಭಾರತಿ
Next Story
X