Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ರೊಟ್ಟಿ ವಿದೇಶಕ್ಕೆ ರಫ್ತು...

ಕಲಬುರಗಿ ರೊಟ್ಟಿ ವಿದೇಶಕ್ಕೆ ರಫ್ತು ಹೆಮ್ಮೆಯ ವಿಷಯ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ9 May 2026 6:23 PM IST
share
ಕಲಬುರಗಿ ರೊಟ್ಟಿ ವಿದೇಶಕ್ಕೆ ರಫ್ತು ಹೆಮ್ಮೆಯ ವಿಷಯ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಸ್ಥಳೀಯವಾಗಿ ಸ್ವಸಹಾಯ ಸಂಘಗಳ ಮೂಲಕ ತಯಾರಿಸುವ ‘ಕಲಬುರಗಿ ರೊಟ್ಟಿ’ ಇದೀಗ ವಿದೇಶದಲ್ಲಿ ಲಭ್ಯವಾಗುತ್ತಿದೆ. ಒಂದೂವರೆ ವರ್ಷದಲ್ಲೇ ಕಲಬುರಗಿ ರೊಟ್ಟಿ ವಿದೇಶಿ ಮಾರುಕಟ್ಟೆಯಲ್ಲಿ ಸಿಗುವಂತೆ ಕ್ರಮವಹಿಸಲಾಗಿದ್ದು, ಇದು ಹೆಮ್ಮೆಯ ವಿಷಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಶನಿವಾರ ಕಲಬುರಗಿ ನಗರದ ಅರಿವಿನ ಮನೆ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಕೆನಡ ದೇಶಗಳಿಗೆ ರಫ್ತು ಮಾಡಲು ತಯಾರಿಸಿದ ಬಾಕ್ಸ್ ಗಳಿಗೆ ಹಸಿರು ನಿಶಾನೆ ತೋರಿಸಿ, ಅಂಚೆ ಮೂಲಕ ವಿದೇಶಕ್ಕೆ ಅಂಚೆ ಮೂಲಕ ರಫ್ತು ಮಾಡಲು ಅಂಚೆ ಸಿಬ್ಬಂದಿಗೆ ಹಸ್ತಾಂತರ ಮಾಡಿ ಅವರು ಮಾತನಾಡುತ್ತಿದ್ದರು.

ಒಂದೂವರೆ ವರ್ಷದ ಹಿಂದೆ ‘ಕಲಬುರಗಿ ರೊಟ್ಟಿ’ ಹೆಸರಿನಲ್ಲಿ ಬ್ರ್ಯಾಂಡ್ 100 ರೊಟ್ಟಿ ಸ್ವಸಹಾಯ ಸಂಘಗಳ ಮೂಲಕ ಒಟ್ಟು 1ಸಾವಿರ ಮಹಿಳೆಯರು ರೊಟ್ಟಿ ತಯಾರಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕಲಬುರಗಿ ರೊಟ್ಟಿ ಪುಣೆ ಮೂಲದ ರಫ್ತು ಕಂಪೆನಿಯ ಮೂಲಕ ಅಮೆರಿಕಾ, ಕೆನಡಾ ಹಾಗೂ ಆಸ್ಟ್ರೇಲಿಯಾ ದೇಶಗಳಿಗೆ ರಫ್ತು ಮಾಡಲು ಕ್ರಮವಹಿಸಲಾಗಿದೆ. ಇದು ನಮ್ಮ ಕಲಬುರಗಿಯ ಹೆಮ್ಮೆಯ ವಿಷಯವಾಗಿದೆ ಎಂದು ಅವರು ನುಡಿದರು.

ವಿದೇಶಗಳಿಗೆ ರಫ್ತು ಮಾಡಲು ತಯಾರಿಸಿದ ಪ್ಯಾಕ್‍ಗಳನ್ನು ಹಾಗೂ ಭಾರತೀಯ ಅಂಚೆ ಮೂಲಕವೂ ಕಳಿಸಲು ತಯಾರಿಸಿ ಪ್ಯಾಕ್‍ಗಳಿಗೆ ಹಸಿರು ನಿಶಾನೆ ತೋರಿಸಿದ ಪ್ರಿಯಾಂಕ್ ಖರ್ಗೆ, ಪ್ರತಿ ತಿಂಗಳು ಅಮೆರಿಕಾ ಹಾಗೂ ಆಸ್ಟ್ರೇಲಿಯಾಗೆ ತಲಾ 10 ಸಾವಿರ ಹಾಗೂ ಕೆನಡಾ ದೇಶಕ್ಕೆ 5 ಸಾವಿರ ಕಲಬುರಗಿ ಜೋಳದ ರೊಟ್ಟಿ ರಫ್ತು ಮಾಡಲು ಕ್ರಮವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗಲಿದೆ ಎಂದು ಅವರು ತಿಳಿಸಿದರು.

ಕಲಬುರಗಿ ರೊಟ್ಟಿ ವಿವರ :

ಕಲಬುರಗಿ ರೊಟ್ಟಿಯನ್ನು ‘ಕಲಬುರಗಿ ರೊಟ್ಟಿ’ ಬ್ರಾಂಡ್ ಮೂಲಕ ಅಮೇಝಾನ್, ಕಲಬುರಗಿ ರೊಟ್ಟಿ ವೆಬ್‍ಸೈಟ್, ಪ್ರಾಂಚೈಸಿ ಹಾಗೂ ಲೋಕಲ್ ಮಾರ್ಕೆಟ್ ಮೂಲಕ ಮಾರಾಟ ಮಾಡಲಾಗುತ್ತಿದೆ. ಕಲಬುರಗಿ ರೊಟ್ಟಿ ಬ್ರ್ಯಾಂಡ್‍ನಲ್ಲಿ 100ಕ್ಕಿಂತ ಹೆಚ್ಚು ಸ್ವಸಹಾಯ ಸಂಘಗಳು ಹಾಗೂ 1ಸಾವಿರಕ್ಕಿಂತ ಹೆಚ್ಚು ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ.

ಕಲಬುರಗಿ ರೊಟ್ಟಿ ಉತ್ಪಾದನೆ ಮಾಡುವ ಮಹಿಳೆಯರು ಪ್ರತಿ ತಿಂಗಳು 15 ರಿಂದ 20 ಸಾವಿರ ರೂ. ಗಳವರೆಗೆ ಆದಾಯ ಗಳಿಸುತ್ತಿದ್ದು, ಮದುವೆ, ಇತರೆ ಸಮಾರಂಭಗಳಿಂದ ಹೆಚ್ಚು ಆದಾಯಗಳಿಸುತ್ತಿದ್ದಾರೆ. ಕಲಬುರಗಿ ರೊಟ್ಟಿಯನ್ನು ದೇಶದ ಎಲ್ಲ ಕಡೆಗಳಲ್ಲಿ ಮಾರಾಟ ಮಾಡುತ್ತಿದ್ದು, ವಿದೇಶಗಳಿಗೆ ಕಳುಹಿಸುವ ಪ್ರಯತ್ನ ಫಲಕಾರಿಯಾಗಿದೆ.

ಕಲಬುರಗಿ ರೊಟ್ಟಿಯನ್ನು ವಿದೇಶಗಳಿಗೆ (ಆಸ್ಟ್ರೇಲಿಯಾ, ಕೆನಡಾ ಹಾಗೂ ಯುಎಸ್‍ಎ) ರಫ್ತು ಮಾಡಲು ಪುಣೆ ಮೂಲದ ಅಶ್ತಮ್ ಟ್ರೇಡರ್ಸ್ ಅವರೊಂದಿಗೆ ಮಾತುಕತೆ ನಡೆದಿದ್ದು, ಮೊದಲ ಹಂತದಲ್ಲಿ ಒಂದು ವರ್ಷಕ್ಕೆ ಒಂದು ಲಕ್ಷ ರೊಟ್ಟಿಗಳನ್ನು ಆಸ್ಟ್ರೇಲಿಯಾ ಹಾಗೂ ಯುಎಸ್‍ಎಗೆ ರಫ್ತು ಮಾಡಲಾಗುವುದು. ಪ್ರತಿ ತಿಂಗಳು 10 ಸಾವಿರದಿಂದ 25ಸಾವಿರ ರೊಟ್ಟಿಗಳನ್ನು ರಫ್ತು ಮಾಡಲಾಗುವುದು. ಈಗಾಗಲೇ ಜಿಲ್ಲಾಡಳಿತದಿಂದ ಆಶ್ರಮ್ ಟ್ರೇಡರ್ ಜತೆಗೆ ಒಪ್ಪಂದ ಸಿದ್ಧಪಡಿಸಲಾಗಿದೆ.

ಇದರಿಂದಾಗಿ ಕಲಬುರಗಿ ರೊಟ್ಟಿ ಉತ್ಪಾದಕರಿಗೆ ಹೆಚ್ಚಿನ ಆದಾಯ ಸಿಗಲಿದೆ. ಸದ್ಯ ಮಾರುಕಟ್ಟೆಯಲ್ಲಿ ಒಂದು ರೊಟ್ಟಿಗೆ 10 ರೂ. ನಿಂದ 12 ರೂ. ಬೆಲೆ ಇದ್ದು, ಈ ರಫ್ತಿನಿಂದಾಗಿ ವಿದೇಶದಲ್ಲಿ ಒಂದು ರೊಟ್ಟಿಗೆ 25 ರೂ. ನಿಂದ 30ರೂ. ಬೆಲೆ ಸಿಗಲಿದ್ದು, ಶೇ.0ರಿಂದ ಶೇ.100ರಷ್ಟು ಹೆಚ್ಚಿನ ಆದಾಯ ಕಲಬುರಗಿ ರೊಟ್ಟಿ ಉತ್ಪಾದಕರಿಗೆ (ಮಹಿಳೆಯರಿಗೆ) ದೊರಕಲಿದೆ.

ಕಲಬುರಗಿ ರೊಟ್ಟಿ ಉತ್ಪಾದನೆಯ ಜೊತೆಗೆ ಗಾಳಿಯೊಂದಿಗೆ ಬಿಗಿಯಾದ ಪ್ಯಾಕ್ ಮಾಡುವ ಯಂತ್ರವನ್ನು ಖರೀದಿಸಲು ಎಚ್‍ಡಿಎಫ್‍ಸಿ ಬ್ಯಾಂಕ್‍ನ ಸಿಎಸ್‍ಆರ್ ಅನುದಾನದಲ್ಲಿ 55 ಲಕ್ಷ ರೂ. ಒದಗಿಸಿದ್ದು, ಅದಕ್ಕೆ ಬೇಕಾಗುವ ಮೂಲಭೂತ ಸೌಲಭ್ಯವನ್ನು ಡಿಎಂಎಫ್ ಯೋಜನೆಯಡಿ 32ಲಕ್ಷ ರೂ.ವೆಚ್ಚದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಕೊಟನೂರ, ಕಲಬುರಗಿ ಇಲ್ಲಿ ಸಿದ್ಧವಾಗುತ್ತಿದೆ. ಸದರಿ ಘಟಕ ಸಿದ್ಧವಾದನಂತರ ಕಲಬುರಗಿ ರೊಟ್ಟಿ ರಫ್ತು ಮಾಡಲು ಹೆಚ್ಚು ಪ್ರೋತ್ಸಾಹ ದೊರಕಲಿದೆ. ಅಲ್ಲದೆ, ಕಲಬುರಗಿ ರೊಟ್ಟಿಯ ಗುಣಮಟ್ಟ ಹೆಚ್ಚಾಗಲಿದೆ. ಕೆಲವೇ ದಿವಸಗಳಲ್ಲಿ ಪ್ಯಾಕ್ ಮಾಡುವ ಫಟಕವನ್ನು ಉದ್ಘಾಟಿಸಲಾಗುವುದು ಎಂದು ತಿಳಿಸಲಾಗಿದೆ.

ಕಾರ್ಯಕ್ರಮದಲ್ಲಿ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಿಕಾ ಪರಮೇಶ್ವರ, ಭೀಮರಾಯನಗುಡಿ ಕಾಡಾ ಅಧ್ಯಕ್ಷ ಬಾಬು ಹೊನ್ನನಾಯಕ್, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಡಿ.ಸಿ.ಎಫ್ ಸುಮಿತ್ ಪಾಟೀಲ, ಅಸ್ತಮ್ ಟ್ರೇರ‍್ಸ್ ಮಾಲೀಕ ರಮೇಶ ಕಡಗಂಚಿ ಇದ್ದರು.

Tags

Priyank KhargeKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X