ಚಿತ್ತಾಪುರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ: 51,034 ಹೆಸರುಗಳು ಡಿಲೀಟ್

ಚಿತ್ತಾಪುರ: ಚಿತ್ತಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಸ್‌ಐಆರ್-2026ರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಒಟ್ಟು 2,00,192 ಮತದಾರರ ಹೆಸರುಗಳು ಪಟ್ಟಿಯಲ್ಲಿವೆ ಎಂದು ತಹಶೀಲ್ದಾರ್ ನಾಗಯ್ಯ ಹಿರೇಮಠ ತಿಳಿಸಿದ್ದಾರೆ.
ಅಂತಿಮ ಪಟ್ಟಿಯಲ್ಲಿ 1,00,958 ಪುರುಷರು, 99,221 ಮಹಿಳೆಯರು ಹಾಗೂ 15 ಇತರೆ ಮತದಾರರ ಹೆಸರುಗಳಿವೆ. ಮತದಾರರ ಪಟ್ಟಿಯನ್ನು ಎಲ್ಲ ಮತಗಟ್ಟೆ ಕೇಂದ್ರಗಳು ಹಾಗೂ ತಹಶೀಲ್ದಾರ್ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿಯೂ ಪಟ್ಟಿ ಲಭ್ಯವಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚುನಾವಣಾ ಆಯೋಗ ನಡೆಸಿದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ, ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಹಿಂದೆ ಇದ್ದ ಒಟ್ಟು 2,51,226 ಮತದಾರರ ಪೈಕಿ 51,034 ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ.
Next Story




