Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಂತಿಮ ಮತದಾರರ ಪಟ್ಟಿ ಪ್ರಕಟ | ಕಲಬುರಗಿ...

ಅಂತಿಮ ಮತದಾರರ ಪಟ್ಟಿ ಪ್ರಕಟ | ಕಲಬುರಗಿ ಜಿಲ್ಲೆಯಲ್ಲಿ 18,94,144 ಮತದಾರರು :ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ

ವಾರ್ತಾಭಾರತಿವಾರ್ತಾಭಾರತಿ27 Oct 2026 10:10 PM IST
share
ಅಂತಿಮ ಮತದಾರರ ಪಟ್ಟಿ ಪ್ರಕಟ | ಕಲಬುರಗಿ ಜಿಲ್ಲೆಯಲ್ಲಿ 18,94,144 ಮತದಾರರು :ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ

ಕಲಬುರಗಿ: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಒಂಬತ್ತು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಈ ಪಟ್ಟಿಯ ಪ್ರಕಾರ, ಜಿಲ್ಲೆಯಲ್ಲಿ ಒಟ್ಟು 18,94,144 ಮತದಾರರಿದ್ದಾರೆ. ಇವರಲ್ಲಿ 9,61,210 ಪುರುಷರು, 9,32,722 ಮಹಿಳೆಯರು ಹಾಗೂ 212 ಇತರ ಲಿಂಗದ ಮತದಾರರು ಸೇರಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ತಿಳಿಸಿದರು.

ಮಂಗಳವಾರ ನಗರದ ಗುಲ್ಬರ್ಗಾ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಮೀಡಿಯಾ ಸೆಂಟರ್‌ನಲ್ಲಿ ಎಸ್‌ಐಆರ್ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ವಿವರಗಳನ್ನು ನೀಡಿದರು.

ಮನೆಮನೆ ಸಮೀಕ್ಷೆ, ಎನ್ಯುಮರೇಷನ್ ಹಾಗೂ ಮ್ಯಾಪಿಂಗ್ ಕಾರ್ಯಗಳು ಪೂರ್ಣಗೊಂಡ ಬಳಿಕ ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಕರಡು ಪಟ್ಟಿಯಲ್ಲಿ 18,49,575 ಮತದಾರರಿದ್ದರು. ನಂತರ ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ, ಒಟ್ಟು 44,559 ಹೊಸ ಮತದಾರರನ್ನು ಅಂತಿಮ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ ಎಂದು ಹೇಳಿದರು.

ಎಸ್‌ಐಆರ್ ಅವಧಿಯಲ್ಲಿ ಕಂಡುಬಂದ ಅಸಂಗತತೆಗಳು (ಅನಾಮಲಿ) ಹಾಗೂ ಮ್ಯಾಪಿಂಗ್ ಆಗದ ಪ್ರಕರಣಗಳಿಗೆ ಸಂಬಂಧಿಸಿದಂತೆ 1,05,511 ನೋಟಿಸ್‌ಗಳನ್ನು ಜಾರಿಗೊಳಿಸಿ ಪರಿಶೀಲನೆ ನಡೆಸಲಾಗಿತ್ತು. ಸೂಕ್ತ ದಾಖಲೆಗಳಿಲ್ಲದ, ಮೃತಪಟ್ಟ ಹಾಗೂ ಬೇರೆಡೆಗೆ ಸ್ಥಳಾಂತರಗೊಂಡ ಅಥವಾ ನಕಲಿ ನೋಂದಣಿಗೆ ಸಂಬಂಧಿಸಿದಂತೆ 1,905 ಮತದಾರರ ಹೆಸರುಗಳನ್ನು ಮಾತ್ರ ಅಂತಿಮ ಪಟ್ಟಿಯಿಂದ ಕೈಬಿಡಲಾಗಿದೆ. ಅರ್ಹ ಮತದಾರರಿಗೆ ಸಂಪೂರ್ಣ ಅವಕಾಶ ಕಲ್ಪಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಪ್ರಸ್ತುತ ಅಂತಿಮ ಪಟ್ಟಿಯಲ್ಲಿ 18ರಿಂದ 19 ವರ್ಷದೊಳಗಿನ 28,966 ಯುವ ಮತದಾರರಿದ್ದಾರೆ. ಇದರೊಂದಿಗೆ 25,501 ಅಂಗವಿಕಲ (ಪಿಡಬ್ಲ್ಯುಡಿ) ಮತದಾರರು, 85 ವರ್ಷಕ್ಕಿಂತ ಮೇಲ್ಪಟ್ಟ 14,897 ಹಿರಿಯ ಮತದಾರರು ಹಾಗೂ 896 ಸೇವಾನಿರತ ಯೋಧರು ಇದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮತಗಟ್ಟೆಗಳ ಸಂಖ್ಯೆಯನ್ನೂ ತರ್ಕಬದ್ಧಗೊಳಿಸಲಾಗಿದೆ. 1,200ಕ್ಕಿಂತ ಹೆಚ್ಚು ಮತದಾರರಿರುವ ಪ್ರದೇಶಗಳಲ್ಲಿ ಹೊಸ ಮತಗಟ್ಟೆಗಳನ್ನು ಸೃಷ್ಟಿಸಲಾಗಿದೆ. ಇದರಿಂದ ಎಸ್‌ಐಆರ್‌ಗೂ ಮುನ್ನ ಇದ್ದ 2,400 ಮತಗಟ್ಟೆಗಳಿಗೆ ಹೆಚ್ಚುವರಿಯಾಗಿ 61 ಮತಗಟ್ಟೆಗಳು ಸೇರ್ಪಡೆಯಾಗಿದ್ದು, ಒಟ್ಟು ಸಂಖ್ಯೆ 2,461ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಇಪಿ ರೇಶಿಯೋ ಶೇ. 65.44ರಷ್ಟಿದ್ದು, ಲಿಂಗಾನುಪಾತವು ಪ್ರತಿ ಸಾವಿರ ಪುರುಷರಿಗೆ 971 ಮಹಿಳೆಯರಷ್ಟಿದೆ ಎಂದು ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಸಿಂಧೆ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅಧಿಕಾರಿಗಳು ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಿದ್ದಾರೆ. ಗೈರುಹಾಜರಾದವರು, ಸ್ಥಳಾಂತರಗೊಂಡವರು, ಮೃತಪಟ್ಟವರು ಹಾಗೂ ಈಗಾಗಲೇ ನೋಂದಾಯಿಸಿಕೊಂಡವರು ಎಂಬ ನಾಲ್ಕು ವಿಭಾಗಗಳ ಅಡಿಯಲ್ಲಿ ಹೆಸರುಗಳನ್ನು ಕೈಬಿಡಲಾಗಿದೆ. ಕೆಲವು ಕಡೆ ಹೆಸರುಗಳನ್ನು ತೆಗೆದುಹಾಕಿರುವ ಬಗ್ಗೆ ದೂರುಗಳು ಬಂದಿದ್ದರೂ, ನಿಯಮಾನುಸಾರ ಕರಡು ಪಟ್ಟಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ 324 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಒಟ್ಟಾರೆಯಾಗಿ ಪರಿಷ್ಕರಣೆ ವೇಳೆ 48,513 ಮತದಾರರನ್ನು ಸೇರ್ಪಡೆಗೊಳಿಸಲಾಗಿದ್ದು, 3,954 ಹೆಸರುಗಳನ್ನು ಕೈಬಿಡಲಾಗಿದೆ ಹಾಗೂ 42,108 ತಿದ್ದುಪಡಿಗಳನ್ನು ಮಾಡಲಾಗಿದೆ. ಯಾವುದೇ ಗೊಂದಲಗಳಿಗೆ ಅವಕಾಶ ನೀಡದೆ, ನಿಖರ ದಾಖಲೆಗಳ ಆಧಾರದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.

Tags

KalaburagiVotersFinal Electoral Roll Published
share
ವಾರ್ತಾಭಾರತಿ
ವಾರ್ತಾಭಾರತಿ
Next Story
X