Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಭಿವೃದ್ಧಿಗೆ ಹಣಕಾಸಿನ ಕೊರತೆ: ಕಾಳಗಿ...

ಅಭಿವೃದ್ಧಿಗೆ ಹಣಕಾಸಿನ ಕೊರತೆ: ಕಾಳಗಿ ಪಟ್ಟಣ ಪಂಚಾಯತ್‌ ಸಭೆಯಲ್ಲಿ ಸದಸ್ಯರ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ16 Nov 2026 9:45 PM IST
share
ಅಭಿವೃದ್ಧಿಗೆ ಹಣಕಾಸಿನ ಕೊರತೆ: ಕಾಳಗಿ ಪಟ್ಟಣ ಪಂಚಾಯತ್‌ ಸಭೆಯಲ್ಲಿ ಸದಸ್ಯರ ಅಸಮಾಧಾನ

ಕಾಳಗಿ : ನೂತನ ಆಡಳಿತ ಮಂಡಳಿಯ ಮೊದಲ ಸಾಮಾನ್ಯ ಸಭೆಯಲ್ಲೇ ಪಟ್ಟಣದ ಅಭಿವೃದ್ಧಿ ಕಾಮಗಾರಿಗಳಿಗೆ ಹಣಕಾಸಿನ ಕೊರತೆಯ ಬಿಸಿ ತಟ್ಟಿದೆ. ಪಟ್ಟಣ ಪಂಚಾಯಿತಿಯ ಬೊಕ್ಕಸ ಖಾಲಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಕುರಿತು ನಿರ್ಧಾರ ಕೈಗೊಳ್ಳಲು ಸಾಧ್ಯವಾಗದೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

ಸೋಮವಾರ ಪಟ್ಟಣ ಪಂಚಾಯತ್‌ ಅಧ್ಯಕ್ಷೆ ಸಾಲಿಯಾ ಬೇಗಂ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಡಿಯುವ ನೀರು, ಸ್ವಚ್ಛತೆ, ಬೀದಿದೀಪ, ಚರಂಡಿ ವ್ಯವಸ್ಥೆ ಹಾಗೂ ರಸ್ತೆ ಅಭಿವೃದ್ಧಿ ಸೇರಿದಂತೆ ಪಟ್ಟಣದ ಮೂಲಸೌಕರ್ಯ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ವಿವಿಧ ವಾರ್ಡ್‌ಗಳಲ್ಲಿ ಬಾಕಿ ಉಳಿದಿರುವ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಬೇಕು. ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಎಲ್ಲ ವಾರ್ಡ್‌ಗಳಿಗೂ ಸಮಾನ ಆದ್ಯತೆ ನೀಡಬೇಕು ಎಂದು ಸದಸ್ಯರು ಒತ್ತಾಯಿಸಿದರು.

ಖಾಲಿ ಬೊಕ್ಕಸಕ್ಕೆ ಸದಸ್ಯರ ಆಕ್ರೋಶ :

ಪಟ್ಟಣ ಪಂಚಾಯತ್‌ಯಲ್ಲಿ ಅನುದಾನದ ಕೊರತೆಯಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿರುವುದಕ್ಕೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ವಿವಿಧ ಇಲಾಖೆಗಳ ಕಾರ್ಯವೈಖರಿ ಕುರಿತು ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಕುಡಿಯುವ ನೀರಿಗೆ ಮುನ್ನೆಚ್ಚರಿಕೆ :

ಬರದ ಹಿನ್ನೆಲೆಯಲ್ಲಿ ರೌದ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಬೇಸಿಗೆಯಲ್ಲಿ ಪಟ್ಟಣಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು. ನೀರಿನ ಸಮಸ್ಯೆ ಉಲ್ಬಣಿಸುವ ಮುನ್ನ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಮುಖ್ಯಾಧಿಕಾರಿಗಳಿಗೆ ಸದಸ್ಯರು ತಾಕೀತು ಮಾಡಿದರು.

ಶೌಚಾಲಯಕ್ಕಾಗಿ ಮಹಿಳೆಯರ ಆಗ್ರಹ :

ಪಟ್ಟಣದ 2, 5 ಮತ್ತು 6ನೇ ವಾರ್ಡ್‌ಗಳ ಮಹಿಳೆಯರು ಸಾರ್ವಜನಿಕ ಶೌಚಾಲಯದ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಸಭೆ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದರು. ಅಧ್ಯಕ್ಷೆ, ಉಪಾಧ್ಯಕ್ಷ ಹಾಗೂ ಸದಸ್ಯರನ್ನು ಭೇಟಿಯಾಗಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.

ಸಭೆಯಲ್ಲಿ ಉಪಾಧ್ಯಕ್ಷ ಶರಣಪ್ಪ ಬೆಲೂರ, ಮುಖ್ಯಾಧಿಕಾರಿ ಸಿದ್ರಾಮೇಶ್ವರ ಶಾಖಾಪೂರ, ಸದಸ್ಯರಾದ ರಮೇಶ ಕಿಟ್ಟದ, ಗುರುರಾಜ ಮದ್ದೂರ, ಬಸವರಾಜ ಮಡಿವಾಳ, ಲಲಿತಾಬಾಯಿ ಕಮಲಾಪೂರ, ಅಂಬವ್ವ ರಾಜಾಪೂರ, ಉಶಾರಾಣಿ ಗುತ್ತೇದಾರ, ಚಂದ್ರಕಲಾ ಚವ್ಹಾಣ, ಜತೇಂದ್ರ ರಾಠೋಡ, ಪಾರ್ವತಿ ರಾಠೋಡ, ಕೆ.ಯು.ಡಬ್ಲ್ಯೂ.ಎಸ್. ಮತ್ತು ಡಿಬಿ ಎಇಇ ಎಚ್.ಎನ್. ಸ್ವಾಮಿ, ಎಇ ನರೇಶಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




Tags

town panchayatKalagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X