Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆ ವರ್ಷದೊಳಗೆ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ದರಾಮಯ್ಯ ಗಡುವು

ವಾರ್ತಾಭಾರತಿವಾರ್ತಾಭಾರತಿ13 July 2026 7:07 PM IST
share
ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆ ವರ್ಷದೊಳಗೆ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ದರಾಮಯ್ಯ ಗಡುವು
ಕೆ.ಯು.ಐ.ಡಿ.ಎಫ್.ಸಿ ಪ್ರಗತಿ ಪರಿಶೀಲನೆ ಸಭೆ

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ ಕಾಮಗಾರಿ ಚುರುಕುಗೊಳಿಸಿ ಜೂನ್ 2027 ರೊಳಗೆ ಕಾಮಗಾರಿ ಮುಗಿಸುವಂತೆ ಎಲ್ & ಟಿ ಕಂಪನಿಗೆ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಗಡುವು ನೀಡಿದರು.

ಸೋಮವಾರ ಇಲ್ಲಿನ ಜಲ ಭವನದಲ್ಲಿ ನಡೆದ ಕಲಬುರಗಿ ಮಹಾನಗರ ಪಾಲಿಕೆ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ, ಕೆ.ಯು.ಐ.ಡಿ.ಎಫ್.ಸಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಉದ್ದೇಶಿತ ಯೋಜನೆ ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ‌ ಸಚಿವರು, ನಾಲ್ಕು ಬಾರಿ ಯೋಜನೆ ಪೂರ್ಣಕ್ಕೆ ಕಾಲಮಿತಿ ವಿಸ್ತರಣೆ ಮಾಡಿದ್ದರು, ಇನ್ನು‌ ಮುಗಿದಿಲ್ಲ ಎಂದರೆ ನಾವು ಜನರಿಗೆ ನೀಡಿದ‌ ವಾಗ್ದಾನ ಪೂರೈಸುವುದೆ ಹೇಗೆ ಎಂದು ಪ್ರಶ್ನಿಸಿದಲ್ಲದೆ ಈ ಬಾರಿ ಮತ್ತೆ ವಿಸ್ತರಣೆ ಮಾಡಲ್ಲ. ಕಾಲಮಿತಿಯಲ್ಲಿ ಮುಗಿಸಬೇಕು ಇಲ್ಲದಿದ್ದರೆ ಕಂಪನಿ ಮತ್ತು ಮೇಲುಸ್ತುವಾರಿ ವಹಿಸಬೇಕಾದ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

24x7 ನಿರಂತರ ಕುಡಿಯುವ ನೀರು ಯೋಜನೆ ಕಾಮಗಾರಿಯಲ್ಲಿ ನಗರದ 55 ವಾರ್ಡುಗಳಲ್ಲಿ 62,767 ಪೈಕಿ 30,907 ಮನೆಗೆ ಮಾತ್ರ ನಲ್ಲಿ ಸಂಪರ್ಕ‌ ಕಲ್ಪಿಸಿದ್ದು, 31,860 ಬಾಕಿ ಇವೆ. ಉಳಿದ ಮನೆಗಳಿಗೂ ಬೇಗ ಸಂಪರ್ಕ ಕಲ್ಪಿಸಬೇಕಿದೆ. ಇನ್ನು ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಳಪೆ ಕಾಮಗಾರಿಗೆ ಇಲ್ಲಿ ಅವಕಾಶ ಇಲ್ಲ ಎಂದರು.

ಮೇಯರ್ ವರ್ಷಾ ರಾಜೀವ ಜಾನೆ ಮಾತನಾಡಿ ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಿ ಕಾಮಗಾರಿಗೆ ವೇಗ ನೀಡಬೇಕಾದ ಎಲ್ & ಟಿ ಕಂಪನಿ ಇತ್ತೀಚೆಗೆ ಏಕಾಏಕಿ 50 ಜನ ಸಿಬ್ಬಂದಿ ತೆಗೆದು ಹಾಕಿದೆ ಎಂದು ಸಚಿವರ ಗಮನ‌ ಸೆಳೆದರು. ಕಾರ್ಮಿಕರ ಕೊರತೆಯಿಂದಲೆ ಕಾಮಗಾರಿ ವಿಳಂಬವಾಗಿರುವಾದ ಇರುವವರನ್ನು ತೆಗೆದರೆ ಹೇಗೆ? ಏಕಾಏಕಾ ಅವರನ್ನು ತೆಗೆದರೆ ಹೇಗೆ ಎಂದು ಕೂಡಲೆ‌ ಅವರೆಲ್ಲರನ್ನು ಕೆಲಸಕ್ಕೆ ತೆಗೆದುಕೊಳ್ಳಿ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಕಂಪನಿ ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ ಮಾತನಾಡಿ, ಈ ಯೋಜನೆಯಡಿ 'ಎ' ಮತ್ತು 'ಬಿ' ಸ್ಕೀಮ್ ಎಂದು ವಿಂಗಡಿಸಿದ್ದು, ಈ ಅಂಕಿ ಸಂಖ್ಯೆ ಕೇವಲ 'ಎ' ಸ್ಕೀಮಿಗೆ ಸಂಬಂಧಿಸಿದೆ. 'ಬಿ' ಸ್ಕೀಮ್ ನಲ್ಲಿ ರಿಂಗ್ ರಸ್ತೆ ಹೊರಗಡೆ ಪ್ರದೇಶದ ಸುಮಾರು 35,000 ಮನೆಗಳಿವೆ. ಇವೆಲ್ಲ ಮನೆಗಳಿಗೆ ನಿರಂತರ ಪೂರೈಸಬೇಕಾದರೆ ಭೀಮಾ, ಬೆಣ್ಣೆತೋರಾ ಜಲಮೂಲದಿಂದ ಸಾಧ್ಯವಿಲ್ಲ. ನಗರಕ್ಕೆ ಭೀಮಾ ನದಿ ಮೂಲಕ ಪೂರೈಸುವ ನೀರು ಕಲುಷಿತವಾಗಿದೆ. ಕುಡಿಯಕ್ಕೆ ಯೋಗ್ಯವಿಲ್ಲ. ಹೀಗಾಗಿ ನಾರಾಯಣಪುರ ಜಲಾಶಯದಿಂದ ನೀರು ಹರಿಸುವ 1,850 ಕೋಟಿ ರೂ. ಮೊತ್ತದ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮತ್ತು ನಗರದ ಎಲ್ಲಾ ವಾರ್ಡ್ ಗಳಿಗೆ ನಿರಂತರ‌ ನೀರು ಸರಬರಾಜು ಮಾಡಲು ಸಾಧ್ಯವಾಗಲಿದೆ ಎಂದರು.

ಇನ್ನು ನಗರದಲ್ಲಿ 40 ವರ್ಷದ ಹಳೇ ಚರಂಡಿ ವ್ಯವಸ್ಥೆ ಇರುವುದರಿಂದ ಎಲ್ಲೆಂದರಲ್ಲಿ ಸೋರಿಕೆ ಕಂಡು ದಿನದಿಂದ‌ ದಿನಕ್ಕೆ ನೈರ್ಮಲ್ಯ ಹದಗೆಡುತ್ತಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ನಗರದಲ್ಲಿ 700 ಕಿ.ಮೀ ಉದ್ದದ ಹೊಸದಾಗಿ ಒಳಚರಂಡಿ ನಿರ್ಮಾಣ ಕಾಮಗಾರಿ ಕೈಗೊಳ್ಳುವ ಅವಶ್ಯಕತೆ ಇದೆ ಎಂದು ಸಚಿವರ‌ ಗಮನಕ್ಕೆ ತಂದರು. ಇದಕ್ಕೆ‌ ಸ್ಪಂದಿಸಿದ ಸಚಿವರು ಯಾವೆಲ್ಲ ಮೂಲಗಳಿಂದ ಅರ್ಥಿಕ ಸಂಪನ್ಮೂಲ ಕ್ರೂಢಿಕರಿಸಿ ಒಳಚರಂಡಿ ಯೋಜನೆ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕೂಲಂಕುಷವಾಗಿ ಪ್ರಸ್ತಾವನೆ ತಯಾರಿಸುವಂತೆ ಪಾಲಿಕೆ ಆಯುಕ್ತರಿಗೆ ನಗರಾಭಿವೃದ್ಧಿ ಸಚಿವರು ಸೂಚಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ‌ ಮಾತನಾಡಿ, ಎಲ್‌& ಟಿ‌ ಕಂಪನಿ ನಿ‌ಧಾನಗತಿ ಕಾರ್ಯ ಹಿನ್ನೆಲೆಯಲ್ಲಿ ಇದುವರೆಗೆ ಕಂಪನಿಗೆ 54 ಕೋಟಿ ರೂ. ದಂಡ‌ ವಿಧಿಸಿದೆ‌. ಪ್ರಸ್ತುತ ಬರ ಪರಿಸ್ಥಿತಿ ಕಾರಣ 35 ಟ್ಯಾಂಕರ್ ಮೂಲಕ ಪ್ರತಿ ದಿನ 150 ಟ್ರಿಪ್ ಮೂಲಕ ಬೇಡಿಕೆ‌ ಇದ್ದ ಬಡಾವಣೆಗಳಿಗೆ ನೀರು ಪೂರೈಸಲಾಗುತ್ತಿದೆ ಎಂದಾಗ, ಸಭೆಯಲ್ಲಿದ್ದ ಶಾಸಕರು ಮತ್ತು ಪಾಲಿಕೆ ಮೇಯರ್ ಈ ಸಂಖ್ಯೆ ಸಾಲುತ್ತಿಲ್ಲ, ಟ್ರಿಪ್ ಸಂಖ್ಯೆ ಹೆಚ್ಚಿಸಬೇಕೆಂದು ಒತ್ತಾಯಿಸಿದ್ದಾಗ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಂದಿಸಿ, ಕೂಡಲೆ 5-10 ಹೆಚ್ಚುವರಿ ಟ್ಯಾಂಕರ್ ಪಡೆದು ಟ್ರಿಪ್ ಹೆಚ್ಚಿಸಬೇಕೆಂದು ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ‌ ನಗರ ವಿಕಾಸ ಯೋಜನೆ ಹಂತ 2ರಲ್ಲಿ 127.50 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳುತ್ತಿರುವ 54 ಕಾಮಗಾರಿಗಳು ಮತ್ತು ಅಮೃತ್ 2.0 ನಲ್ಲಿ 9.40 ಕೋಟಿ ರೂ. ವೆಚ್ಚದಲ್ಲಿ ಐದು ಉದ್ಯಾನವನ ಸೇರಿದಂತೆ 8 ಕಾಮಗಾರಿಗಳಿಗೆ ವೇಗ ನೀಡಿ ಕಾಲಮಿತಿಯಲ್ಲಿ ಪುರ್ಣಗೊಳಿಸುವಂತೆಯೂ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಶುದ್ಧ ಕುಡಿಯುವ ನೀರು ಪೂರೈಸಿ:

ಕಲಬುರಗಿ ನಗರಕ್ಕೆ ಶೇ.100ರಷ್ಟು ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು ಪಾಲಿಕೆ, ಕೆ.ಯು.ಐ.ಡಿ.ಎಫ್.ಸಿ ಸಂಸ್ಥೆಯ ಆದ್ಯತೆಯಾಗಿರಬೇಕು. ನಗರಕ್ಕೆ ನೀರು ಪೂರೈಕೆ ಮಾಡುವ 102 ಎಂ.ಎಲ್.ಡಿ. ನೀರು ಸಂಪೂರ್ಣ ಸಂಸ್ಕರಿಸಿದ ಬಳಿಕವೆ ಪೂರೈಸಬೇಕು. ಭೀಮಾ ನದಿಗೆ ಚರಂಡಿ ನೀರು ಸೇರದಂತೆ ಎಚ್ಚರ ವಹಿಸಿಬೇಕು ಎಂದರು.

ಪ್ರಸ್ತುತ ಬರದ ಛಾಯೆ ಕಾರಣ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಬಾರದು. ಬೇಡಿಕೆ ಇದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಅಗತ್ಯವಿದ್ದೆಡೆ ಕೊಳವೆ ಬಾವಿ ಕೊರೆಯಬೇಕು. ಬಾವಿ, ಬಾಡಿಗೆ ಕೊಳವೆ ಬಾವಿ ಮೂಲಕ ನೀರು ಪಡೆದು ಸಾರ್ವಜನಿಕರಿಗೆ ನೀರು ಪೂರೈಸಿಬೇಕು ಎಂದರು.

ಕಲಬುರಗಿ ಮಹಾನಗರ ಪಾಲಿಕೆಯು ಮನೆ ಮನೆಗೆ ಹೋಗಿ ಕಸ‌ ಸಂಗ್ರಹಣೆ ಮಾಡಬೇಕು. ಶೇ.100ರಷ್ಟು ಕಸ‌ ವಿಂಗಡಣೆ ಮಾಡಿಯೆ ಮನೆಗಳಿಂದ ಪಡೆಯಬೇಕು. ವಿಂಗಡಿಸಿ ಕಸ‌ ನೀಡದವರಿಗೆ ದಂಡ ಹಾಕಬೇಕು. ದಾವಣಗೆರೆಯಲ್ಲಿ ಶೇ.100ರಷ್ಟು ಕಸ ವಿಂಗಡಣೆ ಮಾಡಿಯೆ ಸಂಗ್ರಹಿಸಲಾಗುತ್ತದೆ. ವೈಜ್ಞಾನಿಕವಾಗಿ ಘನತ್ಯಾಜ್ಯ ವಿಲೇವಾರಿ ಮಾಡಬೇಕು. ಬೀದಿ ಬದಿ ನಾಯಿಗಳಿಗೆ ಶೆಲ್ಟರ್ ಸ್ಥಾಪಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.

ನಗರದ‌ ನಿವಾಸಿಗಳಿಗೆ ಇ-ಖಾತಾ ಸೇರಿದಂತೆ ಸಾರ್ವಜನಿಕ ಸೇವೆಗಳಲ್ಲಿ ವ್ಯತ್ಯಯವಾಗಬಾರದು. ಅನಗತ್ಯ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸಬಾರದು. ನಿವಾಸಿಗಳು ಮೂಲಸೌಕರ್ಯ ಕೊರತೆ, ಸೇವೆಯಲ್ಲಿ ವ್ಯತ್ಯಯಕ್ಕೆ ಸಂಬಂಧಿಸಿದಂತೆ ಅವರ ಕುಮದುಕೊರತೆ, ದೂರು ಆಲಿಸಲು ವ್ಯವಸ್ಥೆ ಮಾಡಬೇಕು. ಯಾವ ಸಮಸ್ಯೆಗಳಿಗೆ ಯಾರನ್ನು ಸಂಪರ್ಕಿಸಬೇಕು ಎಂಬುದನ್ನು ಸಾರ್ವಜನಿಕವಾಗಿ ತಿಳಿಸಿದಲ್ಲೆ ಸರ್ಕಾರ ಇನ್ನು ಉತ್ತಮ ಸೇವೆ ನೀಡಲು ಸಾಧ್ಯ ಎಂದರು.

ಪ್ರಾಧಿಕಾರ‌ ಸಭೆ ಮಾಸಿಕ‌ ಕರೆಯಿರಿ:

ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶಿಲಿಸಿದ ಸಚಿವರಿ, ಪ್ರಾಧಿಕಾರದ ಸಭೆ ಮಾಸಿಕವಾಗಿ ಕರೆದು ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಪ್ರಸ್ತುತ ಚಾಲ್ತಿಯಲ್ಲಿರುವ ಹಾಗರಗಾ, ಕುಸನೂರು, ಅಟಲ್‌ ಬಿಹಾರಿ ವಾಜಪೇಯಿ ಬಡಾವಣೆ ವಸತಿ ಯೋಜನೆಗಳು ಸೇರಿದಂತೆ ಬಾಕಿ ಇರುವ ಸಿ.ಎ, ಮೂಲೆ‌ ನಿವೇಶನ ಹರಾಜು ಮಾಡಬೇಕು‌ ಎಂದರು. ಇದಕ್ಕು ಪ್ರಾಧಿಕಾರದ ಆಯುಕ್ತ ಶೈಲೆಂದ್ರ‌ಸಿಂಗ್ ಮಾತನಾಡಿ ಪ್ರಾಧಿಕಾರಕ್ಕೆ ಮಂಜೂರಾದ 41 ಹುದ್ದೆಗಳ ಪೈಕಿ‌ ಪ್ರಸ್ತುತ 11 ಹುದ್ದೆ ಮಾತ್ರ ತುಂಬಿದ್ದರಿಂದ ದೈನಂದಿನ ಆಡಳಿತ ಮತ್ತು ಟೆಂಡರ್ ಪ್ರಕ್ರಿಯೆ ನಡೆಸಲು ಕಷ್ಟವಾಗುತ್ತಿದೆ. ಹುದ್ದೆ ಭರ್ತಿಗೆ ಕ್ರಮ ವಹಿಸಬೇಕು. 25 ಲಕ್ಷ ಮೇಲ್ಪಟ್ಟ ಯೋಜನೆಗೆ ಸರ್ಕಾರದ ಹಂತದಲ್ಲಿ ತ್ವರಿತಗತಿಯಲ್ಲಿ ಅನುನೋದನೆ ಸಿಕ್ಕಲ್ಲ ಅನುಕೂಲವಾಗಲಿದೆ ಎಂದರು.

ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಜಗದೇವ ಗುತ್ತೇದಾರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕಲಬುರಗಿ‌ ಮಹಾನಗರ ಪಾಲಿಕೆ ಮೇಯರ್ ವರ್ಷಾ ರಾಜೀವ ಜಾನೆ, ಉಪ ಮೇಯರ್ ತೃಪ್ತಿ ಲಾಖೆ, ಸಾರ್ವಜನಿಕ‌ ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷೆ ಅನುಪಮಾ ಕಮಕನೂರ, ಅರೋಗ್ಯ ಸ್ಥಾಯಿ‌ ಸಮಿತಿ ಅಧ್ಯಕ್ಷ ಅಯಾಜ್ ಖಾನ್, ಪಾಲಿಕೆ‌ ಸದಸ್ಯೆ ರೇಣುಕಾ, ಕೆ.ಯು.ಐ.ಡಿ.ಎಫ್.ಸಿ ಅಧೀಕ್ಷಕ ಅಭಿಯಂತ ಆರ್.ಪಿ.ಜಾಧವ ಸೇರಿದಂತೆ ಪಾಲಿಕೆ ಮತ್ತು ಪ್ರಾಧಿಕಾರದ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

Tags

KalaburagiWater SupplyYatindra Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X