Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸೆ.7 ರಂದು ಅಫಜಲಪುರದಲ್ಲಿ ಕಬ್ಬು...

ಸೆ.7 ರಂದು ಅಫಜಲಪುರದಲ್ಲಿ ಕಬ್ಬು ಬೆಳೆಗಾರರ ಪ್ರಥಮ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ4 Sept 2026 5:43 PM IST
share
ಸೆ.7 ರಂದು ಅಫಜಲಪುರದಲ್ಲಿ ಕಬ್ಬು ಬೆಳೆಗಾರರ ಪ್ರಥಮ ಸಮ್ಮೇಳನ

ಅಫಜಲಪುರ: ಟನ್ ಕಬ್ಬಿಗೆ 5,000 ರೂ. ಬೆಲೆ ನಿಗದಿಪಡಿಸುವುದು, ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿ ಹಾಗೂ ಕರ್ನಾಟಕ ಕಬ್ಬು ಬೆಳೆಗಾರರ ಸಂಘ, ಅಫಜಲಪುರ ತಾಲೂಕು ಘಟಕದ ವತಿಯಿಂದ ಸೆಪ್ಟೆಂಬರ್ 7ರಂದು (ಸೋಮವಾರ) ಅಫಜಲಪುರದ ಶೆಟ್ಟಿ ಫಂಕ್ಷನ್ ಹಾಲ್‌ನಲ್ಲಿ ಕಬ್ಬು ಬೆಳೆಗಾರರ ಪ್ರಥಮ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡರಾದ ಶ್ರೀಮಂತ ಬಿರಾದಾರ, ರಮೇಶ ಪಾಟೀಲ ಹೇಳಿದರು.

ಪಟ್ಟಣದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮ್ಮೇಳನದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಚರ್ಚಿಸಿ ಮುಂದಿನ ಹೋರಾಟದ ರೂಪುರೇಷೆ ರೂಪಿಸಲಾಗುವುದು ಎಂದು ತಿಳಿಸಿದರು.

ರೈತ ಮುಖಂಡ ಗುರು ಚಾಂದಕವಟೆ ಹಾಗೂ ಭೀಮರಾಯ ಗೌರ ಮಾತನಾಡಿ, 8.5% ಸಕ್ಕರೆ ಇಳುವರಿ ಆಧಾರದಲ್ಲಿ ಪ್ರತಿ ಟನ್ ಕಬ್ಬಿಗೆ 5,000 ರೂ. ಬೆಲೆ ನಿಗದಿಪಡಿಸುವುದು, ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೊಳಿಸುವುದು, ಕಟಾವು ಹಾಗೂ ಸಾಗಾಣಿಕೆ ವೆಚ್ಚಕ್ಕೆ ಸಂಬಂಧಿಸಿದಂತೆ ಕಾರ್ಖಾನೆ ಮತ್ತು ರೈತರ ನಡುವೆ ದ್ವಿಪಕ್ಷೀಯ ಒಪ್ಪಂದಕ್ಕೆ ಸಮಿತಿ ರಚಿಸುವುದು, ಸಕ್ಕರೆ ಇಳುವರಿ ಘೋಷಣೆ ಮತ್ತು ತೂಕದಲ್ಲಿ ನಡೆಯುತ್ತಿರುವ ಅಕ್ರಮ ತಡೆಗಟ್ಟಲು ರೈತರನ್ನೊಳಗೊಂಡ ತಾಂತ್ರಿಕ ಸಮಿತಿ ರಚಿಸುವುದು ಎಂದು ಹೇಳಿದರು.

ತಾಲೂಕಿನಲ್ಲಿ ಕೆರೆ ತುಂಬುವ ಯೋಜನೆ ಅವೈಜ್ಞಾನಿಕವಾಗಿದೆ, ಅದನ್ನು ಮರು ಪರಿಶೀಲನೆ ಮಾಡಿ ಹೂಳೆತ್ತಿ ಕೆರೆ ತುಂಬ ಬೇಕು, ಕಾಲುವೆಗಳಿಗೆ ಕಾಡಾ ಗೇಟ ಹಾಕಿ ಕೊನೆ ಹಳ್ಳಿಗಳಿಗೆ ನೀರು ತಲುಪಿಸಬೇಕು ಹಾಗೂ ಉಜನಿ ಜಲಾಶಯದ ನೀರು ತರವುದಕ್ಕೆ ಸರಕಾರದ ಮೇಲೆ ಸಮ್ಮೇಳನದಲ್ಲಿ ಹಕ್ಕು ಒತ್ತಾಯಕ್ಕೆ ಆಗ್ರಹಿಸಲಾಗುವುದು ಎಂದರು.

ಮುಖಂಡ ನಾಮದೇವ ಕಡಕೋಳ ಮಾತನಾಡಿ, ಅಫಜಲಪುರ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಪಿಆರ್, ರೇಣುಕಾ ಹಾಗೂ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಗಳು ರಾಜ್ಯ ಸರ್ಕಾರದ ಆದೇಶದಂತೆ ಕಳೆದ ಸಾಲಿನ ಬಾಕಿ ಹಣವನ್ನು ತಕ್ಷಣ ಪಾವತಿಸುವುದು, ಹಾಗೂ ಕಬ್ಬು ಸಾಗಾಣಿಕೆ ವಾಹನಗಳ ತೂಕವನ್ನು ಮುಖ್ಯ ದ್ವಾರದಲ್ಲೇ ಮಾಡುವಂತೆ ತೂಕದ ಯಂತ್ರ ಅಳವಡಿಸುವುದು ಮತ್ತು ಒಂದು ಟನ್ ಕಬ್ಬು ಬೆಳೆಯಲು ರಸಗೊಬ್ಬರ, ಕ್ರಿಮಿನಾಶಕ, ಕೂಲಿ, ನೀರಾವರಿ, ಜಮೀನು ಬಾಡಿಗೆ, ಕಟಾವು ಮತ್ತು ಸಾಗಾಣಿಕೆ ಸೇರಿದಂತೆ ಸುಮಾರು ₹3,500ಕ್ಕೂ ಹೆಚ್ಚು ವೆಚ್ಚವಾಗುತ್ತಿದೆ ಎಂದು ಕೃಷಿ ಆಯೋಗ ಹೇಳಿದ ಎಂದ ಅವರು ಆದರೆ ಕೇಂದ್ರ ಸರ್ಕಾರ ಘೋಷಿಸಿರುವ ಎಫ್‌ಆರ್‌ಪಿ (FRP) ರೈತರಿಗೆ ನ್ಯಾಯ ಒದಗಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುರುಗೇಂದ್ರ ಮಸಳಿ, ಅಣ್ಣರಾಯಗೌಡ ಪಾಟೀಲ ಮಾತನಾಡಿದರು.

Tags

Afzalpursugarcane growers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X