ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕಿಯಾಗಿ ಮಹಿಳೆ ಆಯ್ಕೆ

ಕಲಬುರಗಿ: ಭಾರತೀಯ ಜನತಾ ಪಕ್ಷದ(ಬಿಜೆಪಿ) ಕಾರ್ಪೊರೇಟರ್ ಆಗಿರುವ ಶೋಭಾ ಗುರುರಾಜ್ ದೇಸಾಯಿ ಅವರನ್ನು ಕಲಬುರಗಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ಈ ಮೂಲಕ ಪಾಲಿಕೆಯಲ್ಲಿ ಮೊದಲ ಬಾರಿಗೆ ಮಹಿಳೆಯರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ನೇಮಿಸಿ ಇತಿಹಾಸ ನಿರ್ಮಿಸಿದ್ದಂತಾಗಿದೆ.
ಈ ಆಯ್ಕೆಯೊಂದಿಗೆ ವಾರ್ಡ್ ನಂ.52 ರ ಕಾರ್ಪೊರೇಟರ್ ಆಗಿರುವ ಶುಭಾ ದೇಸಾಯಿ ಅವರು ನಗರ ಪಾಲಿಕೆಯ ಇತಿಹಾಸದಲ್ಲಿ ಈ ಪ್ರತಿಷ್ಠಿತ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆಯಾಗಿದ್ದಾರೆ. ಅವರ ಆಯ್ಕೆಯು ನಗರ ಸ್ಥಳೀಯ ಸಂಸ್ಥೆಗಳ ನಾಯಕತ್ವ ಮತ್ತು ನಿರ್ಧಾರ ತೆಗೆದುಕೊಳ್ಳುವಲ್ಲಿ ಮಹಿಳೆಯರ ಹೆಚ್ಚಿನ ಪ್ರಾತಿನಿಧ್ಯದತ್ತ ಮಹತ್ವದ ಹೆಜ್ಜೆಯಾಗಿದೆ.
Next Story





