Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಕೇಂದ್ರ ಕಾರಾಗೃಹದ ಕೈದಿಗಳಿಗೆ...

ಕಲಬುರಗಿ ಕೇಂದ್ರ ಕಾರಾಗೃಹದ ಕೈದಿಗಳಿಗೆ ಉಚಿತ ಕಾನೂನಿನ ಅರಿವು, ನೆರವು ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ23 Feb 2025 12:06 AM IST
share
Photo of Program

ಕಲಬುರಗಿ : ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಶಿಕ್ಷಾ ಮತ್ತು ವಿಚಾರಣಾ ಕೈದಿಗಳಿಗೆ ವಿಶ್ವ ಸಾಮಾಜಿಕ ನ್ಯಾಯ ದಿನದ ಪ್ರಯುಕ್ತ, ಕಾನೂನಿನ ಅರಿವು ಮತ್ತು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಉದ್ಘಾಟಕರಾಗಿ ಆಗಮಿಸಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಶ್ರೀನಿವಾಸ ನವಲೆ ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು 70ರ ದಶಕದಲ್ಲಿ ಭೂ ಸುಧಾರಣೆ ಕಾಯ್ದೆ ಅಡಿಯಲ್ಲಿ ಉಳ್ಳುವನೆ ಭೂ ಒಡೆಯ ಸುಮಾರು ವರ್ಷಗಳಿಂದ ಬೇರೆಯವರ ಹೊಲದಲ್ಲಿ ಬೇಸಾಯ ಮಾಡುವರಿಗೆ ಆ ಹೊಲದ ಮಾಲಿಕತ್ವವನ್ನ ನೀಡಲಾಗಿತ್ತು.

ಅದರ ಸದುಪಯೋಗವನ್ನು ಕೆಲವು ಜನ ತಗೆದುಕೋಂಡ ಶ್ರೀಮಂತರಾದರು ಉಳಿದ ಕೆಲ ಜನ ದೂರಪಯೋಗ ಪಡಿಸಿಕೊಂಡರು ಬರಬರುತ್ತಾ ಸಾಮಾಜಿಕ ನ್ಯಾಯದಲ್ಲಿ ಬದಲಾವಣೆ ತರುತ್ತಾ ಪ್ರತಿ ಒಬ್ಬರಿಗೂ ಸಾಮಾಜಿಕವಾಗಿ ಆರ್ಥಿಕವಾಗಿ ಸಾಮಾನವಾದ ಅವಕಾಶವದ ಪರಿಕಲ್ಪನೆಯನ್ನು ನೀಡಿದ್ದು, ಹೆಣ್ಣು ಮಕ್ಕಳಿಗೂ ಕೂಡ ಸಾಮಾಜಿಕವಾಗಿ ನ್ಯಾಯ ದೊರಕಿಸಿ ಕೊಡಲಾಗುತ್ತಿದೆ ಎಂದರು.

ಪ್ರತಿಯೊಬ್ಬ ಬಂದಿಗಳೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಉಚಿತವಾಗಿ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು, ಯಾವ ಬಂದಿಗೆ ವಕೀಲರನ್ನು ನೇಮಿಸುವ ಆರ್ಥಿಕವಾಗಿ ಶಕ್ತಿ ಇಲ್ಲವೋ ಅಂತಹ ಬಂದಿಗಳಿಗೆ ನಾವುಗಳು ಉಚಿತ ವಕೀಲರನ್ನು ಒದಗಿಸಿಕೊಡುತ್ತೇವೆ. ಆರ್ಥಿಕವಾಗಿ ಶಕ್ತಿ ಇಲ್ಲದಿರುವ ಕಾರಾಗೃಹದಲ್ಲಿರುವ ಬಂದಿಗಳಿಗೆ ಜಾಮೀನು ದೊರೆತ ಅಪರಾಧ ಪ್ರಕರಣಗಳಲ್ಲಿ ಜಾಮೀನುದಾರರನ್ನು ಒದಗಿಸಲು ಸಾದ್ಯವಾಗದ ಹಿನ್ನೆಲೆಯಲ್ಲಿ ಯುಟಿಆರ್‍ಸಿ ಕಮೀಟಿ ವತಿಯಿಂದ ನ್ಯಾಯಾಲಯಗಳು ವಿಧಿಸಿರುವ ಷರತ್ತು ಮತ್ತು ನಿಬಂಧನೆಗಳನ್ನು ಸಡಿಲಗೊಳಿಸಲು ಪ್ರಯತ್ನಿಸುತ್ತೇವೆ. ಕೆಲವೊಂದು ಪ್ರಕರಣಗಳಲ್ಲಿ ಸ್ವಯಂ ಮುಚ್ಚಳಿಕೆ ಪತ್ರದ ಮುಖಾಂತರ ಬಿಡುಗಡೆ ಮಾಡಲು ಶಿಫಾರಸ್ಸು ಮಾಡುತ್ತೇವೆ ಎಂದು ತಿಳಿಸಿದರು.

ಕಾರಾಗೃಹ ಇಲಾಖೆಯು ಬಂದಿಗಳ ಸುಧಾರಣೆಗೆ 1987ರ ಸೇವಾ ಕಾಯ್ದೆ ಅಡಿಯಲ್ಲಿ ಎನ್.ಎಲ್.ಎಸ್.ಎ , ಕೆ.ಎಸ್.ಎಲ್.ಎಸ್.ಎ, ಡಿ.ಎಲ್ ಎಸ್.ಎ ಅಡಿಯಲ್ಲಿ ಸೇವೆಯನ್ನು ಒದಗಿಸಲಾಗುತ್ತಿದೆ. ಅದರ ಸದುಪಯೋಗವನ್ನು ಪಡೆಯಲು ಹೇಳಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಮುಖ್ಯ ಅಧೀಕ್ಷಕರಾದ ಡಾ.ಅನಿತಾ ಆರ್. ಮಾತನಾಡಿ ವಿಶ್ವ ಸಾಮಾಜಿಕ ನ್ಯಾಯ ದಿನದ ಅಡಿಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧೀಕಾರದ ವತಿಯಿಂದ ಸಿಗುವ ಸೌಲಭ್ಯಗಳನ್ನು ನಿಮಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು, ಅಲ್ಲದೆ ತಾವುಗಳು ಒಳ್ಳೆಯ ನಡತೆಯೊಂದಿಗೆ ಉತ್ತಮ ಸಹಕಾರ ನೀಡಿದ್ದಲ್ಲಿ ಕಾನೂನಾತ್ಮಕವಾಗಿ ತಮಗೆ ದೊರೆಯುವ ಸೌಲಭ್ಯಗಳನು ನೀಡಲಾಗುವುದು. ಅವುಗಳ ಲಾಭ ಪಡೆದು ಆದಷ್ಟು ಬೇಗ ಇಲ್ಲಿಂದ ಬಿಡುಗಡೆ ಹೊಂದಿ ಸಮಾಜದಲ್ಲಿ ಒಳ್ಳೆಯ ಸಮಾಜಮುಖಿಯಾಗಿ ಕೆಲಸವನ್ನು ನಿರ್ವಹಿಸುತ್ತಾ ಕುಟುಂಬದವರೊಡನೆ ಉತ್ತಮ ಬಾಳ್ವೆಯನ್ನು ನಡೆಸುವಂತೆ ವಿಶ್ವಾಸ ಮೂಡಿಸಿದರು.

ಈ ಸಂಸ್ಥೆಯ ಪ್ರಭಾರಿ ಅಧೀಕ್ಷಕರಾದ ಬಿ.ಸುರೇಶ್ ಸ್ವಾಗತಿಸಿದರು. ಸಹಾಯಕ ಅಧೀಕ್ಷಕ ಚನ್ನಪ್ಪ, ಜೈಲರ್ ಗಳಾದ ಸುನಂದಾ ವಿ.ಆರ್., ಶ್ರೀಮಂತಗೌಡ್ ಪಾಟೀಲ್, ಸಿಬ್ಬಂದಿಗಳು ಹಾಗೂ ಬಂದಿಗಳು ಭಾಗವಹಿಸಿದ್ದರು. ಈ ಸಂಸ್ಥೆಯ ಶಿಕ್ಷಕರಾದ ನಾಗರಾಜ ಮೂಲಗೆ ನಿರೂಪಣೆ ಮತ್ತು ವಂದನಾರ್ಪಣೆ ಮಾಡಿದರು. ಶಿಕ್ಷಾಬಂದಿಯಿಂದ ವಿರೇಶ ಪ್ರಾರ್ಥನಾ ಗೀತೆಯನ್ನು ಹಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X