Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದದಲ್ಲಿ ಉಚಿತ ಸೇನಾ ತರಬೇತಿ ಸಮಾರೋಪ

ಆಳಂದದಲ್ಲಿ ಉಚಿತ ಸೇನಾ ತರಬೇತಿ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ12 May 2025 5:59 PM IST
share
ಆಳಂದದಲ್ಲಿ ಉಚಿತ ಸೇನಾ ತರಬೇತಿ ಸಮಾರೋಪ

ಕಲಬುರಗಿ : ಆಳಂದ ಪಟ್ಟಣದಲ್ಲಿ ಆಳಂದ ನಿವೃತ್ತ ಸೈನಿಕರ ಅಭಿವೃದ್ಧಿ ಸಂಘ ಹಾಗೂ ಸಮತಾಲೋಕ ಶಿಕ್ಷಣ ಸಮಿತಿಯ ಆಶ್ರಯದಲ್ಲಿ 2ನೇ ಬಾರಿಗೆ ಆಯೋಜಿಸಲಾದ ಉಚಿತ ಸೇನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ ರವಿವಾರ ನಡೆಯಿತು.

ಈ ಕಾರ್ಯಕ್ರಮದಲ್ಲಿ ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷರೂ ಆದ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ಬಿ.ಆರ್.ಪಾಟೀಲ್ ಪಾಲ್ಗೊಂಡು ಯುವಕರಿಗೆ ಸ್ಫೂರ್ತಿದಾಯಕ ಮಾತುಗಳನ್ನಾಡಿ ಯುವಕರು ದೇಶದ ಬೆನ್ನೆಲುಬು. ಸೇನಾ ತರಬೇತಿಯಂತಹ ಕಾರ್ಯಕ್ರಮಗಳು ಯುವಕರಲ್ಲಿ ಶಿಸ್ತು, ಧೈರ್ಯ ಮತ್ತು ರಾಷ್ಟ್ರಭಕ್ತಿಯನ್ನು ಮೂಡಿಸುತ್ತವೆ. ಇಂತಹ ಶಿಬಿರಗಳು ಯುವಕರಿಗೆ ಸೇನೆಯಲ್ಲಿ ವೃತ್ತಿಜೀವನ ಕಟ್ಟಿಕೊಳ್ಳಲು ದಾರಿದೀಪವಾಗಿವೆ. ಯುವಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದೇಶ ಸೇವೆಯಲ್ಲಿ ತೊಡಗಿಕೊಳ್ಳಬೇಕೆಂದು ಅವರು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ಮಾತನಾಡಿ, "ಸೇನಾ ತರಬೇತಿ ಶಿಬಿರವು ಯುವಕರಿಗೆ ಕೇವಲ ದೈಹಿಕ ತರಬೇತಿಯನ್ನಷ್ಟೇ ಅಲ್ಲ, ಮಾನಸಿಕ ಸಾಮರ್ಥ್ಯವನ್ನೂ ಹೆಚ್ಚಿಸುತ್ತದೆ. ಆಳಂದದ ಯುವಕರು ಈ ಶಿಬಿರದ ಮೂಲಕ ತಮ್ಮ ಕನಸುಗಳಿಗೆ ಬಲವಾದ ತಳಹದಿಯನ್ನು ಕಟ್ಟಿಕೊಡುತ್ತದೆ. ಜಿಲ್ಲಾಡಳಿತವು ಇಂತಹ ಉಪಕ್ರಮಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಅವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ವಿಜಯಲಕ್ಷ್ಮಿ ಹೋಳ್ಕರ್, ಡಿವೈಎಸ್ಪಿ ಗೋಪಿ ಬಿ.ಆರ್., ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಸಿದ್ದಲಿಂಗ ಮಲಶೆಟ್ಟಿ, ಚಿನ್ಮಯ ಗಿರಿ ಶ್ರೀಗಳು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಶಿಬಿರಾರ್ಥಿಗಳಿಗೆ ತರಬೇತಿ ಪೂರ್ಣಗೊಳಿಸಿದ್ದಕ್ಕಾಗಿ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ತರಬೇತಿಯ ಪ್ರದರ್ಶನವೂ ನಡೆಯಿತು, ಇದು ಗಣ್ಯರಿಂದ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮವು ಯುವಕರಲ್ಲಿ ಉತ್ಸಾಹ ಮತ್ತು ದೇಶಭಕ್ತಿಯನ್ನು ಮೂಡಿಸುವಲ್ಲಿ ಯಶಸ್ವಿಯಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X