ಕಲಬುರಗಿ | ಜಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ನಾರಾಯಣ ಗುರು, ನೂಲಿಯ ಚಂದಯ್ಯ ಜಯಂತಿ ಆಚರಣೆ

ಕಲಬುರಗಿ: ನಗರದ ಜಿಮ್ಸ್ ಜಿಲ್ಲಾ ಆಸ್ಪತ್ರೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಹಾಗೂ ದಾಸೋಹಿ, ಜ್ಞಾನಿ, ಕಾಯಕಯೋಗಿ ಶರಣ ನೂಲಿಯ ಚಂದಯ್ಯ ಜಯಂತಿಯನ್ನು ಶುಕ್ರವಾರ ಆಚರಿಸಲಾಯಿತು.
ಜಿಲ್ಲಾ ಶಸ್ತ್ರಜ್ಞರ ಹಾಗೂ ಅಧೀಕ್ಷಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಜ್ಞರು ಹಾಗೂ ಅಧೀಕ್ಷಕರಾದ ಡಾ.ರೂಕೀಯಾ ಆಸ್ನಾ ರಬಾ ಅವರು ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಶರಣ ನೂಲಿಯ ಚಂದಯ್ಯ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಸಮಾಜದಲ್ಲಿ ಸಮಾನತೆ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಬಿತ್ತಿದ ಮಹನೀಯರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಅವರ ತತ್ವ ಹಾಗೂ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಒಳಿತಿಗಾಗಿ ಶ್ರಮಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಡಾ. ಶಾಲಿನಿ ಸಜ್ಜನಶೆಟ್ಟಿ, ಸ್ಥಳೀಯ ವೈದ್ಯಾಧಿಕಾರಿಗಳಾದ ಡಾ. ನಾಗರಾಜ್ ಪಾಟೀಲ, ಡಾ. ಸಂತೋಷ್ ಕಟ್ಟಿಮನಿ, ಡಾ. ಪ್ರತಿಭಾ, ಚೀಫ್ ಮೆಡಿಕಲ್ ಆಫೀಸರ್ ಡಾ. ವಿನೋದ್ ಕುಮಾರ ಹೊಸಳ್ಳಿ, ಕಚೇರಿ ಸಹಾಯಕ ಆಡಳಿತಾಧಿಕಾರಿ ಅಂಬಾರಾಯ ಸಂಕಾ, ಕಚೇರಿ ಅಧೀಕ್ಷಕಿ ಸಂಗೀತಾ, ಎಚ್‌ಎಫ್‌ಡಬ್ಲ್ಯೂ ಸಿಬ್ಬಂದಿ ಇಮ್ತಿಯಾಜ್ ಅಲಿ, ಎಫ್‌ಡಿಎ ಕಾವ್ಯ ಹನಚೇಟಕಿ, ಶಿಬಾರಾಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಜಿಲ್ಲಾ ತಂಬಾಕು ವ್ಯಸನ ಮುಕ್ತ ಕೇಂದ್ರದ ಸೈಕಾಲಜಿಸ್ಟ್ ಕೌನ್ಸಿಲರ್ ಮಂಜುನಾಥ ಕಂಬಾಳಿಮಠ, ಎನ್‌ಎಚ್‌ಎಂ ಲೆಕ್ಕಪರಿಶೋಧಕ ಸಿದ್ದಪ್ಪ ಹಾಲಪ್ಪನೂರ, ಆರೋಗ್ಯ ನಿರೀಕ್ಷಣಾಧಿಕಾರಿ ಚನ್ನಮಲ್ಲಪ್ಪ ಬುಕ್ಕಾ, ಸರ್ಕಾರಿ ನೌಕರರ ಸಂಘದ ಕ್ರೀಡಾ ಕಾರ್ಯದರ್ಶಿ ರಾಚಣ್ಣ ಬಿಸಿಗೊಂಡ, ಅವಿನಾಶ್ ಪಾಟೀಲ, ಶರಣು, ಪೃಥ್ವಿ ಸೇರಿದಂತೆ ಜಿಮ್ಸ್ ಜಿಲ್ಲಾ ಆಸ್ಪತ್ರೆಯ ವಿವಿಧ ವಿಭಾಗಗಳ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.






