Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸ್ಪರ್ಧಾತ್ಮಕ ಪರೀಕ್ಷೆಗೆ ಉತ್ತಮ...

ಸ್ಪರ್ಧಾತ್ಮಕ ಪರೀಕ್ಷೆಗೆ ಉತ್ತಮ ಸ್ಪಂದನೆ| ಯುವಕರು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು: ಎಂ.ವೈ. ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ9 Aug 2026 7:25 PM IST
share
ಸ್ಪರ್ಧಾತ್ಮಕ ಪರೀಕ್ಷೆಗೆ ಉತ್ತಮ ಸ್ಪಂದನೆ| ಯುವಕರು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು: ಎಂ.ವೈ. ಪಾಟೀಲ್‌

ಅಫಜಲಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ವಿಕಾಸ ವೇದಿಕೆ ವತಿಯಿಂದ ರವಿವಾರ ರಾಜ್ಯಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸ್ಪರ್ಧಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಿದರು.

ಶಾಸಕ ಎಂ.ವೈ. ಪಾಟೀಲ ಅವರು ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ ಇಂದಿನ ಯುಗವು ಸ್ಪರ್ಧಾತ್ಮಕ ಯುಗವಾಗಿದ್ದು, ಜೀವನದಲ್ಲಿ ಯಶಸ್ಸು ಸಾಧಿಸಲು ಸ್ಪರ್ಧಾತ್ಮಕ ಮನೋಭಾವ ಹಾಗೂ ನಿರಂತರ ಶ್ರಮ ಅಗತ್ಯ ಎಂದರು.

"ಭಾರತವು ಯುವಕರ ದೇಶವಾಗಿದ್ದು, ದೇಶದ ಶೇ.60ರಷ್ಟು ಜನಸಂಖ್ಯೆ ಯುವಕರದ್ದಾಗಿದೆ. ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂದಿನ ಯುವಕರು ಮೊಬೈಲ್‌ಗೆ ಹೆಚ್ಚು ಒಲವು ತೋರಿಸುತ್ತಿದ್ದು, ಅದರ ಉತ್ತಮ ಹಾಗೂ ದುಷ್ಪರಿಣಾಮಗಳೆರಡನ್ನೂ ಅರಿತು ಬಳಸಬೇಕು. ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಂಡರೆ ಯಾವುದೇ ಕಠಿಣ ಸವಾಲನ್ನು ಎದುರಿಸುವ ಸಾಮರ್ಥ್ಯ ಬೆಳೆಯುತ್ತದೆ. ನಿಮ್ಮ ತಂದೆ-ತಾಯಿ ಹಾಗೂ ಶಿಕ್ಷಣ ನೀಡಿದ ಗುರುಗಳ ಹೆಸರನ್ನು ತರುವಂತಹ ಸಾಧನೆ ಮಾಡಬೇಕು ಎಂದು ಅವರು ಕರೆ ನೀಡಿದರು.

ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಕಷ್ಟು ಅವಕಾಶಗಳನ್ನು ಕಲ್ಪಿಸಿದ್ದು, ಶಾಲೆ-ಕಾಲೇಜುಗಳ ಗ್ರಂಥಾಲಯಗಳಲ್ಲಿರುವ ಉತ್ತಮ ಪುಸ್ತಕಗಳನ್ನು ಓದಿ ಜ್ಞಾನ ವೃದ್ಧಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಜೆ.ಎಂ. ಕೊರಬು ಮಾತನಾಡಿ, ಡಾ. ಬಾಬಾಸಾಹೇಬ ಅಂಬೇಡ್ಕರ್, ಛತ್ರಪತಿ ಸಾಹು ಮಹಾರಾಜ ಹಾಗೂ ಮಹಾತ್ಮ ಜ್ಯೋತಿರಾವ್ ಫುಲೆ ಅವರ ಸಮಾನತೆಯ ವಿಚಾರಧಾರೆಗಳು ಸಂಪೂರ್ಣವಾಗಿ ಜಾರಿಯಾದಾಗ ಮಾತ್ರ ಎಲ್ಲರಿಗೂ ಸಮಾನ ಹಕ್ಕುಗಳು ದೊರೆಯಲಿವೆ ಎಂದರು.

ಈ ಭಾಗದಲ್ಲಿ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಆಯೋಜಿಸಿರುವುದು ಅರ್ಥಪೂರ್ಣ ಕಾರ್ಯವಾಗಿದೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವುದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಹಾಗೂ ಸಿದ್ಧತೆಯ ಬಗ್ಗೆ ಅರಿವು ಮೂಡಿಸುತ್ತವೆ ಎಂದು ತಿಳಿಸಿದರು.

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 51,000, ದ್ವಿತೀಯ ಬಹುಮಾನ 25,000 ಹಾಗೂ ತೃತೀಯ ಬಹುಮಾನ 15,000 ನಿಗದಿಪಡಿಸಲಾಗಿತ್ತು. ಪರೀಕ್ಷೆಯ ಫಲಿತಾಂಶವನ್ನು ಅದೇ ದಿನ ಪ್ರಕಟಿಸಿ ಗಣ್ಯರ ಸಮ್ಮುಖದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಿತೀನ್ ಗುತ್ತೇದಾರ ಮಾತನಾಡಿ ಯುವಕರು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಸಿದ್ದತೆ ಪಡೆಯಬೇಕು ಎಂದರು.

ಬೆಂಗಳೂರಿನ ಇನ್‌ಸೈಟ್ ಐಎಎಸ್ ಸಂಸ್ಥೆಯ ಸಂಸ್ಥಾಪಕ ಜಿ.ಬಿ. ವಿನಯಕುಮಾರ ವಿಶೇಷ ಉಪನ್ಯಾಸ ನೀಡಿದರು.

ಈ ಸಂಧರ್ಭದಲ್ಲಿ ಶಂಕರ ಮ್ಯಾಕೇರಿ, ಜೆಡಿಎಸ್ ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ ಸಿಂಗೆ, ನಾಮದೇವ ಕಡಕೋಳ, ವಕೀಲರ ಸಂಘದ ಅಧ್ಯಕ್ಷ ಅರ್ಜುನ ಕೆರೂರ, ವಕೀಲ ಕೆ.ಜಿ. ಪೂಜಾರಿ, ಭೀಮರಾಯ ಗೌರ, ಡಾ.ಸಂಗಣ್ಣ ಸಿಂಗೆ, ಡಾ.ಸಂತೋಷ ಹುಗ್ಗಿ, ರಾಜಕುಮಾರ ಬಳೂರ್ಗಿ, ಡಾ.ಶಿವಶರಣಪ್ಪ ಮೊತಕಪಳ್ಳಿ, ಗುರು ಪೂಜಾರಿ, ಮಹಾಂತ ಬಳೂಂಡಗಿ ಮುತ್ತು ಕುರಿಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

examM.Y. Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X