Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. 371(ಜೆ) ಸಮರ್ಪಕ ಅನುಷ್ಠಾನಕ್ಕೆ ಸರಕಾರ...

371(ಜೆ) ಸಮರ್ಪಕ ಅನುಷ್ಠಾನಕ್ಕೆ ಸರಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿಯಲ್ಲಿ ‘371(ಜೆ) ಕಾಯ್ದೆ ಅನುಷ್ಠಾನ’ ಕುರಿತು ಸರಣಿ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ16 Sept 2026 5:45 PM IST
share
371(ಜೆ) ಸಮರ್ಪಕ ಅನುಷ್ಠಾನಕ್ಕೆ ಸರಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ಭಾಗಕ್ಕೆ ಸಂವಿಧಾನಾತ್ಮಕವಾಗಿ ದೊರೆತಿರುವ 371(ಜೆ) ವಿಶೇಷ ಮೀಸಲಾತಿ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುವುದು. ಕಾಯ್ದೆ ಜಾರಿಯಲ್ಲಿ ಯಾವುದೇ ಲೋಪಗಳಿದ್ದರೂ ಅವುಗಳನ್ನು ಸರಿಪಡಿಸಿ, ಕಲ್ಯಾಣ ಕರ್ನಾಟಕಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಗೃಹ, ಐಟಿ-ಬಿಟಿ, ಇ-ಆಡಳಿತ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 371(ಜೆ) ಸಂಪುಟ ಉಪಸಮಿತಿಯ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಶರಣಬಸವ ವಿಶ್ವವಿದ್ಯಾಲಯದ ಪೂಜ್ಯ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಬುಧವಾರ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆಯೋಜಿಸಿದ್ದ ‘371(ಜೆ) ಕಾಯ್ದೆ ಅನುಷ್ಠಾನ’ ಕುರಿತ ಸರಣಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

2009ರಲ್ಲಿ ಎನ್.ವಿ. ಮೈದಾನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಮೀಸಲಾತಿ ನೀಡುವ ಭರವಸೆ ನೀಡಿದ್ದರು. ಅದರಂತೆ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ-2 ಸರ್ಕಾರದ ಅವಧಿಯಲ್ಲಿ ಅಂದಿನ ಕೇಂದ್ರ ಸಚಿವ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಸರ್ವಪಕ್ಷಗಳ ನಾಯಕರನ್ನು ಮನವೊಲಿಸಿ, ಯಾವುದೇ ವಿರೋಧವಿಲ್ಲದೆ 371(ಜೆ) ಕಾಯ್ದೆ ಸಂವಿಧಾನಾತ್ಮಕವಾಗಿ ಜಾರಿಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

371(ಜೆ) ಕಾಯ್ದೆ ಈ ಭಾಗದ ಯುವಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವಕಾಶ ಕಲ್ಪಿಸುವ ಮಹತ್ವದ ಸಂವಿಧಾನಾತ್ಮಕ ಭದ್ರತೆಯಾಗಿದ್ದು, ಇದರ ಸಂಪೂರ್ಣ ಪ್ರಯೋಜನ ಕಲ್ಯಾಣ ಕರ್ನಾಟಕದ ಜನರಿಗೆ ದೊರೆಯುವಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.

ಕಲ್ಯಾಣ ಕರ್ನಾಟಕದ ಆರ್ಥಿಕ ಪ್ರಗತಿಗೆ ‘ಕಲ್ಯಾಣ ಕರ್ನಾಟಕ ಎಕೊನಾಮಿಕ್ ಮಿಷನ್’ ರೂಪಿಸಲಾಗುತ್ತಿದೆ. ಲೀಪ್ ಯೋಜನೆಯಡಿ ಕಲಬುರಗಿಯಲ್ಲಿ ಪ್ರಯೋಗಾಲಯ ಸ್ಥಾಪನೆ, ಗ್ಲೋಬಲ್ ಕ್ಯಾಪಬಲ್ ಸೆಂಟರ್ ಹಾಗೂ ಐಟಿ ಪಾರ್ಕ್ ಸ್ಥಾಪನೆಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

371(ಜೆ)ಯಿಂದ ವೈದ್ಯಕೀಯ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ :

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಮಾತನಾಡಿ, 371(ಜೆ) ಕಾಯ್ದೆಯಿಂದ ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ದೊರೆತಿವೆ ಎಂದರು.

ಕಾಯ್ದೆ ಜಾರಿಗೆ ಮುನ್ನ ಪ್ರತಿವರ್ಷ ಸುಮಾರು 100 ಮಂದಿ ವೈದ್ಯಕೀಯ ಸೀಟು ಪಡೆಯುತ್ತಿದ್ದರು. ಈಗ ಪ್ರತಿವರ್ಷ 11 ಸಾವಿರಕ್ಕೂ ಅಧಿಕ ವೈದ್ಯಕೀಯ ಸೀಟುಗಳು ಮೀಸಲಾತಿ ವ್ಯಾಪ್ತಿಯಲ್ಲಿ ಲಭ್ಯವಾಗುತ್ತಿವೆ ಎಂದು ತಿಳಿಸಿದರು.

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕ್ಷೇತ್ರಗಳಲ್ಲಿಯೂ ಸಾವಿರಾರು ಸೀಟುಗಳು ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆ ಲಭ್ಯವಾಗಿವೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಆರೋಗ್ಯ, ಶಿಕ್ಷಣ ಮತ್ತು ಮೂಲಸೌಕರ್ಯ ಕ್ಷೇತ್ರಗಳಿಗೆ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಲಾಗಿದ್ದು, ಭಾಗದಲ್ಲಿ ಗಮನಾರ್ಹ ಅಭಿವೃದ್ಧಿ ನಡೆದಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕದ ಹಿಂದುಳಿದಿರುವಿಕೆಗೆ ಐತಿಹಾಸಿಕ ಕಾರಣಗಳಿದ್ದು, ನಿಜಾಮರ ಆಳ್ವಿಕೆಯಿಂದ 1948ರಲ್ಲಿ ಮುಕ್ತಗೊಂಡ ಈ ಭಾಗದ ಅಭಿವೃದ್ಧಿಗಾಗಿ ನಡೆದ ಹೋರಾಟದ ಫಲವಾಗಿ ಸಂವಿಧಾನದ 371ನೇ ವಿಧಿಗೆ ತಿದ್ದುಪಡಿ ತಂದು 371(ಜೆ) ವಿಶೇಷ ಸ್ಥಾನಮಾನ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಮಾತನಾಡಿ, ದಶಕಗಳ ಹೋರಾಟದ ಫಲವಾಗಿ 371(ಜೆ) ಕಾಯ್ದೆ ಜಾರಿಯಾಗಿದ್ದು, ಇದು ಈ ಭಾಗದ ಯುವಕರು ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಹತ್ವದ ಅವಕಾಶಗಳನ್ನು ಒದಗಿಸಿದೆ ಎಂದರು.

ಕಾಯ್ದೆಯ ಸೌಲಭ್ಯಗಳು ಹಾಗೂ ಅನುಷ್ಠಾನದ ಕುರಿತು ಯುವಜನರು ಮತ್ತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸರಣಿ ವಿಚಾರ ಸಂಕಿರಣಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೈನಿ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಶೇಖ್ ಅಜ್ಮಲ್ ಗೋಲಾ, ಕೆ.ಯು.ಡಿ.ಎ ಅಧ್ಯಕ್ಷ ಮಜರ್ ಆಲಂ ಖಾನ್, ಗುಲ್ಬರ್ಗಾ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಶಶಿಕಾಂತ ಎಸ್. ಉಡಿಕೇರಿ, ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಅನಿಲಕುಮಾರ ಬಿಡವೆ, ಕೆಬಿಎನ್ ವಿಶ್ವವಿದ್ಯಾಲಯದ ಪ್ರೊ-ಚಾನ್ಸಲರ್ ಡಾ. ಸೈಯದ್ ಶಾ ಮುಸ್ತಫಾ ಹುಸೇನಿ, ಎಚ್‌ಕೆಸಿಸಿಐ ಅಧ್ಯಕ್ಷ ಶರಣು ಪಪ್ಪಾ, ಪ್ರೊ. ಆರ್.ಕೆ. ಹುಡಗಿ, ಮಾಜಿ ಸಚಿವ ರೇವೂನಾಯಕ ಬೆಳಮಗಿ, ನೀಲಾ ಕೆ. ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳು ಹಾಗೂ ಸುಮಾರು 30 ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಸಮಿತಿಯ ಗೌರವಾಧ್ಯಕ್ಷ ಬಸವರಾಜ ದೇಶಮುಖ ಸ್ವಾಗತಿಸಿದರು.




Tags

Priyank Kharge371(j)
share
ವಾರ್ತಾಭಾರತಿ
ವಾರ್ತಾಭಾರತಿ
Next Story
X