Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯ ಎಸ್‌ಬಿ ಕೆರೆ ಸಮಗ್ರ...

ಕಲಬುರಗಿಯ ಎಸ್‌ಬಿ ಕೆರೆ ಸಮಗ್ರ ಅಭಿವೃದ್ಧಿಗೆ ಸರಕಾರದ ಯೋಜನೆ

ಪರಿಸರ ಸ್ನೇಹಿ, ಜನಸ್ನೇಹಿ ಸಾರ್ವಜನಿಕ ತಾಣವಾಗಿ ಎಸ್‌ಬಿ ಕೆರೆ ರೂಪಾಂತರ: ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ9 Sept 2026 6:35 PM IST
share
ಕಲಬುರಗಿಯ ಎಸ್‌ಬಿ ಕೆರೆ ಸಮಗ್ರ ಅಭಿವೃದ್ಧಿಗೆ ಸರಕಾರದ ಯೋಜನೆ

ಕಲಬುರಗಿ: ನಗರದ ಐತಿಹಾಸಿಕ ಎಸ್‌ಬಿ ಕೆರೆಯನ್ನು ಅತ್ಯಾಧುನಿಕ, ಪರಿಸರ ಸ್ನೇಹಿ ಹಾಗೂ ಎಲ್ಲ ವರ್ಗದ ಜನರಿಗೆ ಅನುಕೂಲವಾಗುವ ಸಮಗ್ರ ಸಾರ್ವಜನಿಕ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ನಗರದ ಅಭಿವೃದ್ಧಿಯಲ್ಲಿ ಗುಣಮಟ್ಟದ ಸಾರ್ವಜನಿಕ ಸ್ಥಳಗಳ ನಿರ್ಮಾಣಕ್ಕೆ ಸರ್ಕಾರ ಆದ್ಯತೆ ನೀಡಿದ್ದು, ಎಸ್‌ಬಿ ಕೆರೆಯ ಸುತ್ತಮುತ್ತಲಿನ ಪ್ರದೇಶವನ್ನು ನಾಗರಿಕರು ವಾಯುವಿಹಾರ, ಮನರಂಜನೆ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಬಳಸಿಕೊಳ್ಳುವಂತೆ ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶ ಹೊಂದಲಾಗಿದೆ ಎಂದು ಸಚಿವರು ಹೇಳಿದರು.

ಯೋಜನೆಯಡಿ ಕೆರೆಯ ದಡವನ್ನು ಸುಂದರವಾಗಿ ಮರುರೂಪಿಸುವುದರ ಜೊತೆಗೆ, ಕೆರೆಯ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಹಸಿರು ವಾತಾವರಣದೊಂದಿಗೆ ನಡಿಗೆ ಮಾರ್ಗ, ಆಸನ ವ್ಯವಸ್ಥೆ, ಮಕ್ಕಳ ಆಟದ ವಲಯ, ಮನರಂಜನಾ ಸ್ಥಳಗಳು ಹಾಗೂ ವಿವಿಧ ಸಾರ್ವಜನಿಕ ಚಟುವಟಿಕೆಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.

ನಗರಾಭಿವೃದ್ಧಿ ಎಂದರೆ ಕೇವಲ ರಸ್ತೆ ಮತ್ತು ಕಟ್ಟಡಗಳ ನಿರ್ಮಾಣವಲ್ಲ. ಜನರು ನೆಮ್ಮದಿಯಿಂದ ಸಮಯ ಕಳೆಯಲು, ಕುಟುಂಬದೊಂದಿಗೆ ಬೆರೆಯಲು ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಉತ್ತಮ ಸಾರ್ವಜನಿಕ ತಾಣಗಳ ನಿರ್ಮಾಣವೂ ಅಗತ್ಯವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.

ಎಸ್‌ಬಿ ಕೆರೆ ಅಭಿವೃದ್ಧಿ ಯೋಜನೆಯಲ್ಲಿ ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಬಳಕೆಯ ನಡುವೆ ಸಮತೋಲನ ಕಾಯ್ದುಕೊಳ್ಳಲಾಗುತ್ತದೆ. ಕೆರೆಯ ನೈಸರ್ಗಿಕ ಸ್ವರೂಪಕ್ಕೆ ಧಕ್ಕೆಯಾಗದಂತೆ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಯೋಜನೆ ರೂಪಿಸಲಾಗಿದ್ದು, ಮಕ್ಕಳು, ಯುವಕರು, ಮಹಿಳೆಯರು ಹಾಗೂ ಹಿರಿಯ ನಾಗರಿಕರು ಸೇರಿದಂತೆ ಎಲ್ಲರೂ ಬಳಸಿಕೊಳ್ಳಬಹುದಾದ ಜನಸ್ನೇಹಿ ತಾಣವಾಗಿ ಎಸ್‌ಬಿ ಕೆರೆಯನ್ನು ರೂಪಿಸಲಾಗುವುದು ಎಂದು ಸಚಿವರು ವಿವರಿಸಿದರು.

ಕಲಬುರಗಿ ನಗರಕ್ಕೆ ಅಗತ್ಯವಿರುವ ಆಧುನಿಕ ಸಾರ್ವಜನಿಕ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ. ಎಸ್‌ಬಿ ಕೆರೆ ಅಭಿವೃದ್ಧಿ ಯೋಜನೆಯು ನಗರದ ಸೌಂದರ್ಯೀಕರಣದ ಜೊತೆಗೆ ನಾಗರಿಕರ ಜೀವನಮಟ್ಟವನ್ನು ಸುಧಾರಿಸುವ ಮಹತ್ವದ ಯೋಜನೆಯಾಗಿದ್ದು, ಭವಿಷ್ಯದಲ್ಲಿ ಕಲಬುರಗಿಯ ಹೊಸ ಹೆಗ್ಗುರುತಾಗಿ ಹೊರಹೊಮ್ಮುವಂತೆ ರೂಪಿಸುವುದು ಸರ್ಕಾರದ ಆಶಯವಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Tags

KalaburagiSB Lake
share
ವಾರ್ತಾಭಾರತಿ
ವಾರ್ತಾಭಾರತಿ
Next Story
X