Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಜಿಲ್ಲೆ ಬರಗಾಲ ಪೀಡಿತವೆಂದು...

ಕಲಬುರಗಿ ಜಿಲ್ಲೆ ಬರಗಾಲ ಪೀಡಿತವೆಂದು ಘೋಷಿಸಲು ಸರಕಾರಕ್ಕೆ ಒತ್ತಾಯ: ಶಾಸಕ ಅಲ್ಲಂಪ್ರಭು ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ28 Aug 2026 7:54 PM IST
share
ಕಲಬುರಗಿ ಜಿಲ್ಲೆ ಬರಗಾಲ ಪೀಡಿತವೆಂದು ಘೋಷಿಸಲು ಸರಕಾರಕ್ಕೆ ಒತ್ತಾಯ:  ಶಾಸಕ ಅಲ್ಲಂಪ್ರಭು ಪಾಟೀಲ್

ಕಲಬುರಗಿ: ಹವಾಮಾನ ವೈಪರೀತ್ಯ ಹಾಗೂ ಎಲ್‌ನಿನೊ ಪರಿಣಾಮದಿಂದ ಮಳೆ ಕೊರತೆ ಉಂಟಾಗಿ ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿರುವ ಕಲಬುರಗಿ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಸರ್ಕಾರದ ಗಮನ ಸೆಳೆಯುವುದಾಗಿ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಂಪ್ರಭು ಪಾಟೀಲ್ ತಿಳಿಸಿದ್ದಾರೆ.

ಈಗಾಗಲೇ ಬರಗಾಲ ಘೋಷಣೆಗೆ ಸಂಬಂಧಿಸಿದಂತೆ ಸರ್ಕಾರದ ಗಮನಕ್ಕೆ ಹಲವು ವಿಚಾರಗಳನ್ನು ತರಲಾಗಿದೆ. ಆದರೆ ಇತ್ತೀಚೆಗೆ ಪ್ರಕಟಿಸಿರುವ ಮೊದಲ ಹಂತದ ಬರಗಾಲ ಪೀಡಿತ ಜಿಲ್ಲೆಗಳ ಪಟ್ಟಿಯಲ್ಲಿ ಕಲಬುರಗಿ ಜಿಲ್ಲೆ ಸೇರ್ಪಡೆಯಾಗದಿರುವುದು ಗಮನಾರ್ಹವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಗಮನಕ್ಕೆ ವಿಷಯವನ್ನು ತಂದು, ಜಿಲ್ಲೆಯ ವಾಸ್ತವ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ನ್ಯಾಯ ಒದಗಿಸುವಂತೆ ಮನವಿ ಮಾಡುವುದಾಗಿ ಅವರು ಹೇಳಿದ್ದಾರೆ.

ಮುಖ್ಯಮಂತ್ರಿಗಳು ಈಗಾಗಲೇ ಕಲಬುರಗಿಗೆ ಭೇಟಿ ನೀಡಿ ಸಭೆ ನಡೆಸಿದ್ದು, ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದಿದ್ದಾರೆ. ಕೇಂದ್ರ ಸರ್ಕಾರದ ಬರಗಾಲ ಮಾನದಂಡಗಳ ಆಧಾರದ ಮೇಲೆ ಮೊದಲ ಪಟ್ಟಿ ಪ್ರಕಟಿಸಲಾಗಿದೆ. ಮಳೆ ಕೊರತೆ ತೀವ್ರವಾಗಿರುವ ಕಲಬುರಗಿ ಜಿಲ್ಲೆ ಯಾವ ಕಾರಣಕ್ಕೆ ಪಟ್ಟಿಯಿಂದ ಹೊರಗುಳಿದಿದೆ ಎಂಬುದನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಅಲ್ಲಂಪ್ರಭು ಪಾಟೀಲ್ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಭೀಕರ ಬರಗಾಲ ಎದುರಾಗುವ ಮುನ್ಸೂಚನೆ ದೊರೆತ ಹಿನ್ನೆಲೆಯಲ್ಲಿ ಹವಾಮಾನ ವರದಿಯನ್ನು ಗಂಭೀರವಾಗಿ ಪರಿಗಣಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ ಕಲಬುರಗಿಗೆ ಆಗಮಿಸಿದ್ದ ಸಂದರ್ಭದಲ್ಲಿ ಅವರ ಸಮ್ಮುಖದಲ್ಲಿಯೇ ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಸ್ಪಷ್ಟವಾಗಿ ಪ್ರಸ್ತಾಪಿಸಿ, ವಾಸ್ತವ ಸ್ಥಿತಿಯನ್ನು ವಿವರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಕಳೆದ ಮುಂಗಾರು ಅಧಿವೇಶನದಲ್ಲಿ ಬರಗಾಲದ ಕುರಿತು ಚರ್ಚೆಗೆ ಅವಕಾಶ ನೀಡದೆ ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಬಿಜೆಪಿ ಸದಸ್ಯರ ವರ್ತನೆ ಜನರ ಹಿತಕ್ಕೆ ವಿರುದ್ಧವಾಗಿದೆ ಎಂದು ಅಲ್ಲಂಪ್ರಭು ಪಾಟೀಲ್ ಟೀಕಿಸಿದ್ದಾರೆ. ನಾನು ಸದನದಲ್ಲಿ ಬರಗಾಲ ಹಾಗೂ ರೈತರ ಸಂಕಷ್ಟದ ಕುರಿತು ನಿರಂತರವಾಗಿ ಧ್ವನಿ ಎತ್ತಿದ್ದೇನೆ. ಇದೀಗ ಅದೇ ಬಿಜೆಪಿ ಮುಖಂಡರು ಬರಗಾಲ ಘೋಷಣೆಗೆ ಆಗ್ರಹಿಸುತ್ತಿರುವುದು ಹಾಸ್ಯಾಸ್ಪದವಾಗಿದೆ. ಸದನದಲ್ಲಿ ಚರ್ಚೆಗೆ ದೊರೆತ ಅವಕಾಶವನ್ನು ಬಳಸಿಕೊಳ್ಳದೆ ಬಿಜೆಪಿ ರೈತರ ಹಿತಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದ್ದಾರೆ.

“ಕಲಬುರಗಿ ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಸರ್ಕಾರದ ಗಮನ ಸೆಳೆಯುವುದು ನಮ್ಮ ಬದ್ಧತೆ. ಜಿಲ್ಲೆಯ ರೈತರ ಹಿತ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಗುವುದು” ಎಂದು ಶಾಸಕ ಅಲ್ಲಂಪ್ರಭು ಪಾಟೀಲ್ ತಿಳಿಸಿದ್ದಾರೆ.

Tags

GovernmentKalaburgidistrictMLAAllamprabhu Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X