Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಗುಲ್ಬರ್ಗಾ ವಿಶ್ವವಿದ್ಯಾಲಯದ...

ಗುಲ್ಬರ್ಗಾ ವಿಶ್ವವಿದ್ಯಾಲಯದ ಕಾರ್ಯಸೌಧಕ್ಕೆ ಹೊರಗುತ್ತಿಗೆ ನೌಕರರಿಂದ ಮುತ್ತಿಗೆ; ಕುಲಪತಿ ಭರವಸೆಯ ಬಳಿಕ ಪ್ರತಿಭಟನೆ ಸಡಿಲ

ವಾರ್ತಾಭಾರತಿವಾರ್ತಾಭಾರತಿ9 Jun 2026 9:54 PM IST
share
ಗುಲ್ಬರ್ಗಾ ವಿಶ್ವವಿದ್ಯಾಲಯದ ಕಾರ್ಯಸೌಧಕ್ಕೆ ಹೊರಗುತ್ತಿಗೆ ನೌಕರರಿಂದ ಮುತ್ತಿಗೆ; ಕುಲಪತಿ ಭರವಸೆಯ ಬಳಿಕ ಪ್ರತಿಭಟನೆ ಸಡಿಲ

ಕಲಬುರಗಿ: ಮರುನೇಮಕಕ್ಕೆ ಆಗ್ರಹಿಸಿ ಕಳೆದ 45 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಗುಲ್ಬರ್ಗಾ ವಿಶ್ವವಿದ್ಯಾಲಯದ ಹೊರಗುತ್ತಿಗೆ ನೌಕರರು ಮಂಗಳವಾರ ಸಂಜೆ ಕಾರ್ಯಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಹೊರಗುತ್ತಿಗೆ ಅವಧಿ ಮುಗಿದ ಹಿನ್ನೆಲೆಯಲ್ಲಿ 281 ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು. ಈ ಕ್ರಮ ಖಂಡಿಸಿ ನೌಕರರು ಕಳೆದ 45 ದಿನಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದು, ಜೂನ್ 9ರ ಸಿಂಡಿಕೇಟ್ ಸಭೆಯಲ್ಲಿ ತಮ್ಮ ಬೇಡಿಕೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಆಡಳಿತ ಭರವಸೆ ನೀಡಿತ್ತು.

ಮಂಗಳವಾರ ಬೆಳಗ್ಗೆಯಿಂದ ನಡೆದ ಸಿಂಡಿಕೇಟ್ ಸಭೆಯ ನಿರ್ಣಯಗಳನ್ನು ಧರಣಿನಿರತ ನೌಕರರಿಗೆ ತಿಳಿಸದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ತಾಳ್ಮೆ ಕಳೆದುಕೊಂಡು ಕಾರ್ಯಸೌಧದ ಮುಖ್ಯ ದ್ವಾರದ ಎದುರು ಧರಣಿ ನಡೆಸಿದರು. ಈ ವೇಳೆ ಕುಲಪತಿ, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೆಲಕಾಲ ತಳ್ಳಾಟ-ನೂಕಾಟವೂ ನಡೆದು ಕ್ಯಾಂಪಸ್‌ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಪ್ರತಿಭಟನಾಕಾರರು ಕುಲಪತಿ ಪ್ರೊ. ಶಶಿಕಾಂತ ಉಡಿಕೇರಿ, ಕುಲಸಚಿವ ಪ್ರೊ. ರಮೇಶ್ ಲಂಡನಕರ್ ಹಾಗೂ ಸಿಂಡಿಕೇಟ್ ಸದಸ್ಯರನ್ನು ಹೊರಗೆ ತೆರಳದಂತೆ ತಡೆದಿದ್ದರು. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಸಿಪಿಐ ಚಂದ್ರಶೇಖರ ತಿಗಡಿ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಯಿತು.

281 ನೌಕರರನ್ನು ಕೈಬಿಡುವುದಿಲ್ಲ: ಕುಲಪತಿ

ಬಳಿಕ ಪ್ರತಿಭಟನಾಕಾರರೊಂದಿಗೆ ಮಾತನಾಡಿದ ಕುಲಪತಿ ಪ್ರೊ. ಶಶಿಕಾಂತ ಉಡಿಕೇರಿ, “ಪ್ರಸ್ತುತ ಸೇವೆಯಲ್ಲಿದ್ದ 281 ನೌಕರರನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ. ಟೆಂಡರ್ ಪ್ರಕ್ರಿಯೆಯಲ್ಲಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಹೊಸ ಗುತ್ತಿಗೆದಾರರ ಆಯ್ಕೆಯೂ ಪೂರ್ಣಗೊಂಡಿದ್ದು, ಉಳಿದ ಪ್ರಕ್ರಿಯೆಗಳನ್ನು ಒಂದು ವಾರದೊಳಗೆ ಮುಗಿಸಿ ಮರುನೇಮಕಾತಿ ಮಾಡಿಕೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಕುಲಪತಿಯ ಭರವಸೆಯ ಬಳಿಕ ಪ್ರತಿಭಟನಾಕಾರರು ಮುತ್ತಿಗೆ ಹಿಂಪಡೆದು ಅಹೋರಾತ್ರಿ ಧರಣಿಯನ್ನು ಮುಂದುವರಿಸಿದರು.

ಇಬ್ಬರು ಮಹಿಳಾ ಸಿಬ್ಬಂದಿ ಅಸ್ವಸ್ಥ:

ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಗೀತಾ ಮತ್ತು ಕಾವ್ಯಾಶ್ರೀ ಎಂಬ ಇಬ್ಬರು ಮಹಿಳಾ ಸಿಬ್ಬಂದಿ ಘೋಷಣೆ ಕೂಗುತ್ತಿದ್ದ ವೇಳೆ ಅಸ್ವಸ್ಥರಾಗಿ ಕುಸಿದು ಬಿದ್ದರು. ಅವರನ್ನು ತಕ್ಷಣ ಇಎಸ್‌ಐಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಈ ಸಂದರ್ಭದಲ್ಲಿ ನೌಕರರ ಸಂಘದ ಅಧ್ಯಕ್ಷ ಶೀಲಪ್ರಕಾಶ ದೊಡ್ಡಮನಿ, ಗೌರವಾಧ್ಯಕ್ಷ ವಿಜಯ ಕೆಂಗಲ್, ಕಾರ್ಯದರ್ಶಿ ಚಂದ್ರಶೇಖರ ಸಾವಳಗಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ನೂರಾರು ನೌಕರರು ಉಪಸ್ಥಿತರಿದ್ದರು.

Tags

GulbargaUniversityprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X