Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಹರ್ಷಾನಂದ ಗುತ್ತೇದಾರ ಪಾದಯಾತ್ರೆ ರಾಜಕೀಯ...

ಹರ್ಷಾನಂದ ಗುತ್ತೇದಾರ ಪಾದಯಾತ್ರೆ ರಾಜಕೀಯ ನಾಟಕ: ಶಾಸಕ ಬಿ.ಆರ್‌. ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ30 Aug 2026 11:46 AM IST
share
ಹರ್ಷಾನಂದ ಗುತ್ತೇದಾರ ಪಾದಯಾತ್ರೆ ರಾಜಕೀಯ ನಾಟಕ: ಶಾಸಕ ಬಿ.ಆರ್‌. ಪಾಟೀಲ್‌

ಕಲಬುರಗಿ : ಆಳಂದ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಬೇಕು ಹಾಗೂ ಬೆಳೆ ವಿಮೆ ಪರಿಹಾರ ನೀಡುವಂತೆ ಆಗ್ರಹಿಸಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾನಂದ ಗುತ್ತೇದಾರ ಹಮ್ಮಿಕೊಂಡಿರುವ ಪಾದಯಾತ್ರೆ ರಾಜಕೀಯ ಲಾಭಕ್ಕಾಗಿ ನಡೆಸುತ್ತಿರುವ ಡೋಂಗಿ ನಾಟಕ ಎಂದು ಆಳಂದ ಶಾಸಕ ಬಿ.ಆರ್‌. ಪಾಟೀಲ್‌ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯವೇ ಬರ ಘೋಷಣೆ ಪ್ರಕ್ರಿಯೆ ನಡೆಯುತ್ತದೆ. ಈ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರವಾಗಲಿ, ಸ್ಥಳೀಯ ಶಾಸಕರಾಗಲಿ ನೇರ ಪಾತ್ರ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರದ ನಿಯಮಗಳು ಹಾಗೂ ವೈಫಲ್ಯದಿಂದಲೇ ಆಳಂದ ತಾಲ್ಲೂಕು ಬರ ಪಟ್ಟಿಯಿಂದ ಹೊರಗುಳಿದಿದೆ ಎಂದು ಆರೋಪಿಸಿದ ಅವರು, ರಾಜ್ಯ ಸರ್ಕಾರ ಮಾತ್ರ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ ಎಂದರು.

ಕೇಂದ್ರದ ವಿರುದ್ಧವೂ ಪಾಟೀಲ್‌ ವಾಗ್ದಾಳಿ

ರಾಜ್ಯಕ್ಕೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು ಬರ ಪರಿಸ್ಥಿತಿ ಎದುರಾಗಿ ಎಂಟು ತಿಂಗಳು ಕಳೆದರೂ ಕೇಂದ್ರದ ಅಧ್ಯಯನ ತಂಡವನ್ನು ಕಳುಹಿಸಿಲ್ಲ ಎಂದು ಟೀಕಿಸಿದರು.

ಇತ್ತೀಚೆಗೆ ನಡೆದ ಸಂಸತ್‌ ಅಧಿವೇಶನದಲ್ಲಿಯೂ ಸ್ಥಳೀಯ ಬಿಜೆಪಿ ಸಂಸದರು ಈ ಕುರಿತು ಧ್ವನಿ ಎತ್ತಿಲ್ಲ. ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿಯೂ ವಿಪಕ್ಷಗಳು ವಿಷಯ ಚರ್ಚೆಗೆ ಅವಕಾಶ ನೀಡದೆ ಕಾಲಹರಣ ಮಾಡಿವೆ ಎಂದು ಆರೋಪಿಸಿದರು.

ಹೀಗಾಗಿ ಬಿಜೆಪಿ ನಾಯಕರು ಇದೀಗ ನಡೆಸುತ್ತಿರುವ ಪಾದಯಾತ್ರೆ ವಾಸ್ತವವಾಗಿ ಅವರದೇ ಕೇಂದ್ರ ಸರ್ಕಾರದ ವೈಫಲ್ಯದ ವಿರುದ್ಧ ನಡೆಸುತ್ತಿರುವ ಹೋರಾಟವಾಗಿದೆ ಎಂದು ವ್ಯಂಗ್ಯವಾಡಿದರು.

ಆಳಂದ ಕ್ಷೇತ್ರದಲ್ಲಿ ಬೆಳೆ ವಿಮೆ ಪರಿಹಾರ ನೀಡುವ ವಿಚಾರದಲ್ಲಿ ಮಾಜಿ ಶಾಸಕ ಸುಭಾಷ್‌ ಗುತ್ತೇದಾರ ಅವರೊಂದಿಗೆ ಬಹಿರಂಗ ಚರ್ಚೆಗೆ ಅಹ್ವಾನಿಸಿದ ಅವರು ಬಿಜೆಪಿ ನಾಯಕರ ಆಡಳಿತಾವಧಿಯಲ್ಲಿ ನಡೆದಿರುವ ವೈಫಲ್ಯಗಳನ್ನು ಅಂಕಿ-ಅಂಶಗಳ ಸಮೇತ ಮುಂದಿನ ದಿನಗಳಲ್ಲಿ ಬಹಿರಂಗಪಡಿಸುವುದಾಗಿ ಎಚ್ಚರಿಸಿದರು.

ಪ್ರಸಕ್ತ 2025-26ನೇ ಸಾಲಿನಲ್ಲಿ ಕಲಬುರಗಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಬೆಳೆ ವಿಮೆ ಪರಿಹಾರ ಆಳಂದ ಕ್ಷೇತ್ರಕ್ಕೆ ಮಂಜೂರಾಗಿದೆ. 77,979 ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಕೊಂಡಿದ್ದು, 74,461 ಫಲಾನುಭವಿ ರೈತರಿಗೆ ಒಟ್ಟು 182.60 ಕೋಟಿ ಪರಿಹಾರ ಬಿಡುಗಡೆಯಾಗಿದೆ ಎಂದು ಅಂಕಿ-ಅಂಶ ನೀಡಿದರು.

ಜಿಲ್ಲೆಯ ಇತರ ಯಾವುದೇ ತಾಲ್ಲೂಕಿಗೆ ದೊರೆಯದಷ್ಟು ಬೆಳೆ ವಿಮೆ ಪರಿಹಾರವನ್ನು ಆಳಂದ ತಾಲ್ಲೂಕಿಗೆ ತರಲಾಗಿದೆ ಎಂದು ಅವರು ಹೇಳಿದರು. ಬೆಳೆ ವಿಮೆ ಪರಿಹಾರದಲ್ಲಿ ಸಣ್ಣಪುಟ್ಟ ಲೋಪದೋಷಗಳಿದ್ದಲ್ಲಿ ಸಂಬಂಧಿಸಿದ ರೈತರು ಗ್ರಾಹಕರ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಸಲಹೆ ನೀಡಿದರು.

ರಾಜಕೀಯ ಕಾರಣಕ್ಕಾಗಿ ರೈತರ ಸಮಸ್ಯೆಗಳನ್ನು ಬಳಸಿಕೊಳ್ಳುವ ಬದಲು ವಾಸ್ತವಾಂಶಗಳ ಆಧಾರದ ಮೇಲೆ ಚರ್ಚೆ ನಡೆಸಬೇಕು ಎಂದು ಹೇಳಿದರು.

Tags

Harshanand Guttedarpolitical dramaB.R. Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X