Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯ ಹಲವೆಡೆ ಧಾರಾಕಾರ ಮಳೆ

ಕಲಬುರಗಿಯ ಹಲವೆಡೆ ಧಾರಾಕಾರ ಮಳೆ

ವಾರ್ತಾಭಾರತಿವಾರ್ತಾಭಾರತಿ7 July 2026 6:25 PM IST
share
ಕಲಬುರಗಿಯ ಹಲವೆಡೆ ಧಾರಾಕಾರ ಮಳೆ

ಕಲಬುರಗಿ: ಹಲವು ದಿನಗಳಿಂದ ಉರಿ ಬಿಸಿಲು ಹಾಗೂ ಮಳೆ ಕೊರತೆಯಿಂದ ತತ್ತರಿಸಿದ್ದ ಕಲಬುರಗಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆ ಸುರಿದ ಪರಿಣಾಮ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಮಳೆಯೊಂದಿಗೆ ವಾತಾವರಣ ತಂಪಾಗಿದ್ದು, ನಗರದೆಲ್ಲೆಡೆ ಆಹ್ಲಾದಕರ ವಾತಾವರಣ ನಿರ್ಮಾಣವಾಯಿತು.

ಮಧ್ಯಾಹ್ನದವರೆಗೆ ಬಿಸಿಲಿನ ತಾಪದ ನಡುವೆಯೇ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಸಂಜೆ ಸುಮಾರು 4 ಗಂಟೆ ವೇಳೆಗೆ ಏಕಾಏಕಿ ಮಳೆ ಆರಂಭವಾಯಿತು. ಕೆಲಕಾಲ ಸುರಿದ ಭಾರೀ ಮಳೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ನಿಧಾನಗೊಂಡರೆ, ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಸಂಗ್ರಹವಾಗಿ ಸಾರ್ವಜನಿಕರಿಗೆ ಕೆಲಕಾಲ ತೊಂದರೆ ಉಂಟಾಯಿತು.

ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ತಾಪಮಾನ ಏರಿಕೆಯಿಂದ ಜನರು ತೀವ್ರ ಸೆಕೆಯ ಸಂಕಷ್ಟ ಅನುಭವಿಸುತ್ತಿದ್ದರು. ಮಂಗಳವಾರದ ಮಳೆ ಬಿಸಿಲಿನ ತಾಪವನ್ನು ತಗ್ಗಿಸಿ ತಂಪಾದ ವಾತಾವರಣವನ್ನು ನಿರ್ಮಿಸಿದ್ದು, ಜನರು ಸಂತಸ ವ್ಯಕ್ತಪಡಿಸಿದರು.

ಮಳೆ ಕೊರತೆಯಿಂದ ಕಂಗಾಲಾಗಿದ್ದ ರೈತರಲ್ಲೂ ಈ ಮಳೆ ಹೊಸ ಆಶಾಭಾವನೆ ಮೂಡಿಸಿದೆ. ಮುಂಗಾರು ಹಂಗಾಮಿನ ಬಿತ್ತನೆಗೆ ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಲಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ರೈತರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಕೆಲ ದಿನಗಳಲ್ಲೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಕೃಷಿ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ನಿರೀಕ್ಷೆ ಇದೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X