Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯಲ್ಲಿ ತಂಪೆರೆದ ಮಳೆ; ರೈತರ...

ಕಲಬುರಗಿಯಲ್ಲಿ ತಂಪೆರೆದ ಮಳೆ; ರೈತರ ಮೊಗದಲ್ಲಿ ಮಂದಹಾಸ

ವಾರ್ತಾಭಾರತಿವಾರ್ತಾಭಾರತಿ27 Jun 2026 8:45 PM IST
share
ಕಲಬುರಗಿಯಲ್ಲಿ ತಂಪೆರೆದ ಮಳೆ; ರೈತರ ಮೊಗದಲ್ಲಿ ಮಂದಹಾಸ

ಕಲಬುರಗಿ: ಹಲವು ದಿನಗಳಿಂದ ಉರಿಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಕಲಬುರಗಿ ನಗರ ಹಾಗೂ ಜಿಲ್ಲಾದ್ಯಂತ ಶನಿವಾರ ಮಧ್ಯಾಹ್ನ ಸುರಿದ ಉತ್ತಮ ಮಳೆಯಿಂದ ಜನರಿಗೆ ನೆಮ್ಮದಿ ತಂದಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಮಧ್ಯಾಹ್ನದ ವೇಳೆಗೆ ದಟ್ಟ ಮೋಡಗಳು ಆವರಿಸಿಕೊಂಡು ಬಳಿಕ ಉತ್ತಮ ಮಳೆಯಾಗಿದ್ದರಿಂದ ನಗರದ ಪ್ರಮುಖ ರಸ್ತೆಗಳು, ಬಡಾವಣೆಗಳು ಹಾಗೂ ಹೊರವಲಯಗಳು ತಂಪಿನಿಂದ ಕಂಗೊಳಿಸಿದವು. ಮಳೆಯ ಪರಿಣಾಮ ತಾಪಮಾನದಲ್ಲಿ ಗಮನಾರ್ಹ ಇಳಿಕೆಯಾಗಿದ್ದು, ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ನಾಗರಿಕರು ನಿರಾಳರಾಗಿದ್ದಾರೆ.

ಕೆಲವು ತಗ್ಗು ಪ್ರದೇಶಗಳಲ್ಲಿ ಹಾಗೂ ಪ್ರಮುಖ ರಸ್ತೆಗಳಲ್ಲಿ ಮಳೆ ನೀರು ಸಂಗ್ರಹವಾಗಿದ್ದರಿಂದ ವಾಹನ ಸವಾರರು ಕೆಲಕಾಲ ಸಂಚಾರದಲ್ಲಿ ತೊಂದರೆ ಅನುಭವಿಸಿದರು. ಆದಾಗ್ಯೂ, ಉತ್ತಮ ಮಳೆಯಿಂದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದು, ವಿಶೇಷವಾಗಿ ರೈತರು ಕೃಷಿ ಚಟುವಟಿಕೆಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ನಗರದ ವಿವಿಧ ಬಡಾವಣೆಗಳಲ್ಲಿ ಮಕ್ಕಳು ಮಳೆಯಲ್ಲೇ ಆಟವಾಡಿ ಸಂಭ್ರಮಿಸಿದರು. ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಸಹ ಮಳೆ ಇದೇ ರೀತಿ ಮುಂದುವರಿದರೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುವುದರ ಜೊತೆಗೆ ಕೃಷಿ ಚಟುವಟಿಕೆಗಳಿಗೂ ಹೆಚ್ಚಿನ ಉತ್ತೇಜನ ದೊರೆಯಲಿದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.

ಜಿಲ್ಲೆಯ ಹಲವೆಡೆ ಮಳೆ ಸುರಿದಿರುವುದರಿಂದ ಬಿತ್ತನೆ ಕಾರ್ಯಗಳಿಗೆ ವೇಗ ಸಿಗುವ ನಿರೀಕ್ಷೆಯಿದ್ದು, ರೈತರು ಮುಂಗಾರು ಕೃಷಿ ಕಾರ್ಯಗಳಲ್ಲಿ ತೊಡಗಲು ಸಿದ್ಧತೆ ಆರಂಭಿಸಿದ್ದಾರೆ.

ಮುಂದಿನ ಕೆಲ ದಿನಗಳ ಕಾಲ ಕಲಬುರಗಿ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Tags

rainKalaburagifarmers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X