Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. 15 ಸಾವಿರ ಶಿಕ್ಷಕರ ಆಯ್ಕೆ ಪಟ್ಟಿ...

15 ಸಾವಿರ ಶಿಕ್ಷಕರ ಆಯ್ಕೆ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್ : ಮೂರು ತಿಂಗಳೊಳಗಾಗಿ ಹೊಸ ನೇಮಕಾತಿಗೆ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ20 Sept 2026 7:18 PM IST
share
15 ಸಾವಿರ ಶಿಕ್ಷಕರ ಆಯ್ಕೆ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್ : ಮೂರು ತಿಂಗಳೊಳಗಾಗಿ ಹೊಸ ನೇಮಕಾತಿಗೆ ನಿರ್ದೇಶನ

ಕಲಬುರಗಿ: 6ರಿಂದ 8ನೇ ತರಗತಿವರೆಗಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (ಜಿಪಿಎಸ್‌ಟಿಆರ್) ನೇಮಕಾತಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2023ರ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ಪ್ರಕಟಿಸಿದ್ದ ತಾತ್ಕಾಲಿಕ ಹಾಗೂ ಅಂತಿಮ ಆಯ್ಕೆ ಪಟ್ಟಿಗಳನ್ನು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ರದ್ದುಗೊಳಿಸಿ ಆದೇಶಿಸಿದೆ.

ರಾಜ್ಯ ಸರಕಾರವು 15 ಸಾವಿರ ಜಿಪಿಎಸ್‌ಟಿಆರ್‌ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಆದರೆ, ಸಂವಿಧಾನದ 371(ಜೆ) ಕಲಂನ ಅನ್ವಯ ಕಲ್ಯಾಣ ಕರ್ನಾಟಕ (ಎಚ್‌ಕೆ) ಹಾಗೂ ಕಲ್ಯಾಣ ಕರ್ನಾಟಕೇತರ (ನಾನ್‌ ಎಚ್‌ಕೆ) ವೃಂದದ ಹುದ್ದೆಗಳ ಹಂಚಿಕೆ ಮತ್ತು ಮೀಸಲಾತಿ ನಿಗದಿಯಲ್ಲಿ ಉಂಟಾಗಿದ್ದ ಗೊಂದಲದಿಂದ ನೇಮಕಾತಿ ಪ್ರಕ್ರಿಯೆ ವಿವಾದಕ್ಕೆ ಕಾರಣವಾಗಿತ್ತು.

ಗೊಂದಲ ನಿವಾರಣೆಯಾಗುವವರೆಗೆ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ, ನಿಯಮಾನುಸಾರ ಹೊಸದಾಗಿ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ಕೋರಿ ನರೇಂದ್ರಬಾಬು ಜಿ.ವಿ. ಹಾಗೂ ಇತರರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ನ್ಯಾಯಪೀಠವು, ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದ್ದ ತಾತ್ಕಾಲಿಕ ಮತ್ತು ಅಂತಿಮ ಆಯ್ಕೆ ಪಟ್ಟಿಗಳನ್ನು ರದ್ದುಗೊಳಿಸುವಂತೆ ಆದೇಶಿಸಿದೆ. ನಿಯಮಾನುಸಾರ ಅರ್ಹ ಎಲ್ಲ ಅಭ್ಯರ್ಥಿಗಳನ್ನು ಪರಿಗಣಿಸಿ, ಮೂರು ತಿಂಗಳೊಳಗಾಗಿ ಹೊಸದಾಗಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.

ಸರ್ಕಾರದ ಪರ ಹಾಜರಾಗಿದ್ದ ಹಿರಿಯ ವಕೀಲ ರೂಬೆನ್ ಜಾಕೊಬ್ ಅವರು, ಅಭ್ಯರ್ಥಿಗಳು ನಿರ್ದಿಷ್ಟ ವಿಷಯಗಳಿಗೆ ಸಂಬಂಧಿಸಿದಂತೆ ಮಾತ್ರ ಮೀಸಲಾತಿ ನಿಗದಿಯಲ್ಲಿನ ಗೊಂದಲವನ್ನು ಪ್ರಶ್ನಿಸಿದ್ದಾರೆ. ಹೀಗಾಗಿ, ಇಡೀ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸುವ ಬದಲು ನಿರ್ದಿಷ್ಟ ವಿಷಯಗಳ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಮಾತ್ರ ತೀರ್ಮಾನ ನೀಡಬೇಕು ಎಂದು ವಾದಿಸಿದ್ದರು. ಆದರೆ, ಈ ಮನವಿಯನ್ನು ನ್ಯಾಯಪೀಠ ಪುರಸ್ಕರಿಸಲಿಲ್ಲ.

ಇದೇ ವೇಳೆ, ನೇಮಕಾತಿ ಪ್ರಕ್ರಿಯೆಯಲ್ಲಿ ಗೊಂದಲಕ್ಕೆ ಕಾರಣವಾಗಿದ್ದ 2024ರ ಜನವರಿ 31ರಂದು ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ ನೀಡಿದ್ದ ಆದೇಶ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿದ್ದ ಸಂಬಂಧಿತ ಸುತ್ತೋಲೆಯನ್ನೂ ನ್ಯಾಯಪೀಠ ರದ್ದುಗೊಳಿಸಿದೆ.

Tags

High Courtteachersrecruitment
share
ವಾರ್ತಾಭಾರತಿ
ವಾರ್ತಾಭಾರತಿ
Next Story
X