Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಹುಸಿ...

ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ವಾರ್ತಾಭಾರತಿವಾರ್ತಾಭಾರತಿ6 July 2026 6:35 PM IST
share
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಕಲಬುರಗಿ : ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಸೋಮವಾರ ಮಧ್ಯಾಹ್ನ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ದೊರೆಯುತ್ತಿದ್ದಂತೆಯೇ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ತುರ್ತು ಕಾರ್ಯಾಚರಣೆ ನಡೆಸಿ ನ್ಯಾಯಾಲಯದ ಸಂಪೂರ್ಣ ಆವರಣವನ್ನು ತಪಾಸಣೆಗೊಳಪಡಿಸಿದರು.

ಮಧ್ಯಾಹ್ನ ಸುಮಾರು 12.15ರ ವೇಳೆಗೆ ಜಿಲ್ಲಾ ನ್ಯಾಯಾಲಯದ ಅಧಿಕೃತ ಇ-ಮೇಲ್ ವಿಳಾಸಕ್ಕೆ ಬಂದ ಸಂದೇಶದಲ್ಲಿ ನ್ಯಾಯಾಲಯದ ಸಂಕೀರ್ಣದಲ್ಲಿ ನಾಲ್ಕು ಆರ್‌ಡಿಎಕ್ಸ್ ಐಇಡಿ (RDX IED) ಬಾಂಬ್‌ಗಳನ್ನು ಇರಿಸಲಾಗಿದ್ದು, ಮಧ್ಯಾಹ್ನ 2 ಗಂಟೆಗೆ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿತ್ತು. ಜೊತೆಗೆ, ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ಬಿಡುಗಡೆ ಮಾಡಬೇಕು ಎಂಬ ಬೇಡಿಕೆಯನ್ನೂ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು.

ಮಾಹಿತಿ ತಿಳಿಯುತ್ತಿದ್ದಂತೆಯೇ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಡಿಸಿಪಿಗಳಾದ ಶಾಲೂ ಹಾಗೂ ಪ್ರವೀಣ್ ನಾಯ್ಕ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಾಂಬ್ ಪತ್ತೆ ದಳ ಮತ್ತು ಶ್ವಾನದಳದ ಸಹಾಯದಿಂದ ನ್ಯಾಯಾಲಯದ ಮುಖ್ಯ ಕಟ್ಟಡ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಸೇರಿದಂತೆ ಸಂಪೂರ್ಣ ಸಂಕೀರ್ಣವನ್ನು ಒಂದು ಗಂಟೆಗೂ ಹೆಚ್ಚು ಕಾಲ ಸೂಕ್ಷ್ಮವಾಗಿ ಪರಿಶೀಲಿಸಲಾಯಿತು.

ತಪಾಸಣೆಯ ವೇಳೆ ಯಾವುದೇ ಅನುಮಾನಾಸ್ಪದ ವಸ್ತು ಅಥವಾ ಸ್ಫೋಟಕ ಪತ್ತೆಯಾಗದ ಹಿನ್ನೆಲೆಯಲ್ಲಿ ಬೆದರಿಕೆ ಸಂದೇಶ ಸುಳ್ಳು ಎಂಬುದು ದೃಢಪಟ್ಟಿದೆ.

ಮುಖ್ಯಮಂತ್ರಿಯವರ ಕಾರ್ಯಕ್ರಮ ಮಂಗಳವಾರ ಕಲಬುರಗಿಯಲ್ಲಿ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಈ ಬೆದರಿಕೆ ಸಂದೇಶವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಇ-ಮೇಲ್ ಕಳುಹಿಸಿದ ವ್ಯಕ್ತಿಯ ಪತ್ತೆ ಹಾಗೂ ಬೆದರಿಕೆಯ ಮೂಲವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.

ಇ-ಮೇಲ್ ಮೂಲಕ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದ ತಕ್ಷಣವೇ ಸಂಪೂರ್ಣ ಪರಿಶೀಲನೆ ನಡೆಸಲಾಗಿದೆ. ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಹೀಗಾಗಿ ಇದು ಸುಳ್ಳು ಬೆದರಿಕೆ ಎಂಬುದು ದೃಢಪಟ್ಟಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

– ಡಾ.ಶರಣಪ್ಪ ಎಸ್.ಡಿ., ನಗರ ಪೊಲೀಸ್ ಆಯುಕ್ತ

Tags

CourtKalaburagihoax bomb threat
share
ವಾರ್ತಾಭಾರತಿ
ವಾರ್ತಾಭಾರತಿ
Next Story
X