Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಹುಣಸಗಿ | ಬೂತ್ ಮಟ್ಟದಿಂದ ಬಿಜೆಪಿ...

ಹುಣಸಗಿ | ಬೂತ್ ಮಟ್ಟದಿಂದ ಬಿಜೆಪಿ ಸಂಘಟನೆ ಬಲಪಡಿಸಿ: ರಾಜುಗೌಡ

ವಾರ್ತಾಭಾರತಿವಾರ್ತಾಭಾರತಿ6 Oct 2026 9:43 PM IST
share
ಹುಣಸಗಿ | ಬೂತ್ ಮಟ್ಟದಿಂದ ಬಿಜೆಪಿ ಸಂಘಟನೆ ಬಲಪಡಿಸಿ: ರಾಜುಗೌಡ

ಹುಣಸಗಿ: ಪಕ್ಷದ ಸಂಘಟನೆ ಗಟ್ಟಿಯಾಗಿ ಹಾಗೂ ಸದೃಢವಾಗಿದ್ದಾಗ ಮಾತ್ರ ಸಾರ್ವಜನಿಕ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸಲು ಸಾಧ್ಯ. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಬೂತ್ ಮಟ್ಟದಿಂದ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ) ಹೇಳಿದರು.

ತಾಲೂಕಿನ ಮಾಳನೂರ ಗ್ರಾಮದಲ್ಲಿ ಕೋಳಿಹಾಳ ಹಾಗೂ ಮಾಳನೂರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಪಕ್ಷದ ಸಂಘಟನಾತ್ಮಕ ಬೆಳವಣಿಗೆ, ಗ್ರಾಮೀಣ ಭಾಗದಲ್ಲಿ ಪಕ್ಷದ ಬಲವರ್ಧನೆ ಹಾಗೂ ಜನರೊಂದಿಗೆ ನಿರಂತರ ಸಂಪರ್ಕ ಹೊಂದುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು. ಪ್ರತಿಯೊಬ್ಬ ಕಾರ್ಯಕರ್ತರೂ ಪಕ್ಷದ ತತ್ವ, ಸಿದ್ಧಾಂತ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡಬೇಕು ಎಂದರು.

ಕಾರ್ಯಕರ್ತರೇ ಪಕ್ಷದ ನಿಜವಾದ ಶಕ್ತಿ. ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರ ಕಲ್ಪಿಸಲು ಜನರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಬೇಕು ಎಂದು ಕರೆ ನೀಡಿದರು.

ಈ ವೇಳೆ ಮುಂಬರುವ ದಿನಗಳಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಅಗತ್ಯ ರೂಪುರೇಷೆಗಳ ಕುರಿತು ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಹುಣಸಗಿ ಮಂಡಲ ಅಧ್ಯಕ್ಷ ಸಂಗಣ್ಣ ವೈಲಿ ಸಾಹುಕಾರ, ಬಸವರಾಜಸ್ವಾಮಿ ಸ್ಥಾವರಮಠ, ಮೇಲಪ್ಪ ಗುಳಗಿ, ವೀರೇಶ ಚಿಂಚೋಳಿ ಸಾಹುಕಾರ, ಅಮರಣ್ಣ ದೇಶಾಯಿ, ಹಣಮಂತ್ರಾಯ ಗೌಡ ಕುಪ್ಪಿ, ರಾಯನಗೌಡ ಗುಳಬಾಳ, ಸೋಮಣ್ಣ ಮೇಟಿ, ಶರಣಪ್ಪ ಗುಳಬಾಳ, ಬಸನಗೌಡ ಕೋಳಿಹಾಳ, ಪ್ರಭುಗೌಡ ಗದ್ದಿಗೇಪ್ಪಗೋಳ, ಯಶವಂತರಾಯ ದೊಡ್ಡಮನಿ, ಭೀಮಣ್ಣ ಬನ್ನೆಟ್ಟಿ, ನಾನೆಗೌಡ ಚಂಗಳಿ, ಗೌಡಪ್ಪಗೌಡ, ಭೀಮಣ್ಣ ಪೂಜಾರಿ, ಪ್ರಭು ನೀಲಗಾರ್, ರಾಣೋಜಿ ಸಿಂದೆ ಕೋಳಿಹಾಳ, ಬಾಶು ನಾಯಕ, ಲಕ್ಷ್ಮಣ ನಾಯಕ, ಆನಂದ ಮಾರಲಬಾವಿ, ಶಂಕರಗೌಡ ಮಾರಲಬಾವಿ ಸೇರಿದಂತೆ ಮಾಳನೂರ ಹಾಗೂ ಕೋಳಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಯ ಮುಖಂಡರು, ಬಿಜೆಪಿ ಕಾರ್ಯಕರ್ತರು ಹಾಗೂ ಗಣ್ಯರು ಪಾಲ್ಗೊಂಡಿದ್ದರು.

Tags

BJPHunasagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X