Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಐಸಿಎಒ ಜಾಗತಿಕ ಸಭೆ : ಚಿಲಕ ಮಹೇಶ್ ಅವರ...

ಐಸಿಎಒ ಜಾಗತಿಕ ಸಭೆ : ಚಿಲಕ ಮಹೇಶ್ ಅವರ ಸಂಶೋಧನಾ ವರದಿಗೆ ಭಾರಿ ಪ್ರಶಂಸೆ

ವಾರ್ತಾಭಾರತಿವಾರ್ತಾಭಾರತಿ13 July 2025 7:48 PM IST
share
ಐಸಿಎಒ ಜಾಗತಿಕ ಸಭೆ : ಚಿಲಕ ಮಹೇಶ್ ಅವರ ಸಂಶೋಧನಾ ವರದಿಗೆ ಭಾರಿ ಪ್ರಶಂಸೆ

ಕಲಬುರಗಿ: ಭಾರತ ಒಳಗೊಂಡಂತೆ ಜಗತ್ತಿನ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಸುರಕ್ಷಿತ ಹಾಗೂ ಸಮರ್ಪಕ ಕಾರ್ಯಾಚರಣೆಗೆ ಮಹತ್ವ ನೀಡುವ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆಯ (ಐಸಿಎಒ) ವಿಮಾನ ನಿಲ್ದಾಣಗಳ ಕಾರ್ಯಾಚರಣೆ, ಯೋಜನಾ ಉಪಸಮಿತಿಯ ಒಂಬತ್ತನೇ ಜಾಗತಿಕ ಸಭೆ ಇತ್ತೀಚೆಗೆ ಥೈಲ್ಯಾಂಡ್ ದೇಶದ ಬ್ಯಾಂಕಾಕ್ ನಗರದಲ್ಲಿ ನಡೆಯಿತು.

ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಚಿಲಕ ಮಹೇಶ್ ನೇತೃತ್ವದಲ್ಲಿ ಭಾರತೀಯ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ ಇಬ್ಬರು ಅಧಿಕಾರಿಗಳು (ಡಿಜಿಸಿಎ) ಹಾಗೂ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಐವರು ಅಧಿಕಾರಿಗಳನ್ನು ಒಳಗೊಂಡ ಸಮಿತಿ ಸದಸ್ಯರು ಈ ಅಂತರರಾಷ್ಟ್ರೀಯ ಸಭೆಯಲ್ಲಿ ಪಾಲ್ಗೊಂಡಿದ್ದರು.

ಕೋವಿಡ್ ಅವಧಿಯ ನಂತರದ ವಿಮಾನಯಾನ ಕ್ಷೇತ್ರ ಅತ್ಯಂತ ವೇಗವಾಗಿ ಬೆಳವಣಿಗೆ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಗಳ ಮೂಲಸೌಕರ್ಯಗಳ ಮೇಲೆ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಗೆ ಪೂರಕವಾಗಿ ವಿಮಾನ ನಿಲ್ದಾಣಗಳ ಸುಲಲಿತ ಕಾರ್ಯಾಚರಣೆಯಲ್ಲಿ ತಂತ್ರಜ್ಞಾನದ ಸಮರ್ಪಕ ಬಳಕೆಗೆ ಹೆಚ್ಚು ಒತ್ತು ನೀಡಬೇಕೆಂಬುದರ ಕುರಿತು ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ತಮ್ಮ ಸಂಶೋಧನಾ ವರದಿಗಳನ್ನು ಮಂಡಿಸುವ ಮೂಲಕ ಗಮನ ಸೆಳೆದರು.

ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಚಿಲಕ ಮಹೇಶ್ ಅವರು ಮಂಡಿಸಿದ ‘ಡಿಜಿಟಲ್ ಟ್ವಿನ್ (ಅವಳಿ) ತಂತ್ರಜ್ಞಾನ’ ಕುರಿತ ಸಂಶೋಧನಾ ವರದಿ ಸಭೆಯಲ್ಲಿ ಪ್ರಶಂಸೆಗೆ ಪಾತ್ರವಾಯಿತು.

ಮುಖ್ಯವಾಗಿ ಕೃತಕ ಬುದ್ಧಿಮತ್ತೆ ಮತ್ತು ಬ್ಲಾಕ್ ಚೈನ್ ತಂತ್ರಜ್ಞಾನದ ಸಂಯೋಜನೆಯಾಗಿ ಕಾರ್ಯನಿರ್ವಹಿಸುವ ಈ ತಂತ್ರಜ್ಞಾನದ ಬಳಕೆಯಿಂದಾಗಿ ವಿಮಾನ ನಿಲ್ದಾಣಗಳ ಕಾರ್ಯಾಚರಣೆಯ ಮೇಲೆ ತೀವ್ರ ನಿಗಾ ವಹಿಸುವಿಕೆ ಸಾಧ್ಯವಾಗಲಿದೆ. ಅದರಲ್ಲೂ ಮುಖ್ಯವಾಗಿ, ಸೈಬರ್ ಸುರಕ್ಷತೆ, ಸಿಬ್ಬಂದಿಯ ತರಬೇತಿಗಾಗಿ ತೊಡಕುರಹಿತ ಸಿಮ್ಯುಲೇಶನ್ ಗಳ ಸಮರ್ಪಕ ಬಳಕೆಯ ಮೇಲೆ ಡಿಜಿಟಲ್ ಟ್ವಿನ್ ತಂತ್ರಜ್ಞಾನ ಬೆಳಕು ಚೆಲ್ಲಲಿದೆ ಎಂದು ಚಿಲಕ ಮಹೇಶ್ ತಮ್ಮ ಉಪನ್ಯಾಸದ ಮೂಲಕ ಪ್ರತಿಪಾದಿಸಿದರು.

ಇದರ ಜೊತೆಗೆ, ಸುಧಾರಿತ, ಸುರಕ್ಷಿತ ಹಾಗೂ ಮುಕ್ತ ಮಾಹಿತಿ ಹಂಚಿಕೆಗೆ ಈ ಅವಳಿ ತಂತ್ರಜ್ಞಾನ ಅನುವು ಮಾಡಿಕೊಡಲಿದ್ದು, ಇದರಿಂದ ಪರಿಣಾಮಕಾರಿ ಮತ್ತು ಸ್ಥಿತಿಸ್ಥಾಪಕ ವಿಮಾನ ನಿಲ್ದಾಣಗಳನ್ನು ನಿರ್ಮಿಸಲು ಸಾಧ್ಯವಾಗಲಿದೆ ಎಂದು ನುಡಿದರು.

ನಿಖರ ಮಾಹಿತಿಗೆ ಡಿಜಿಟಲ್ ಟ್ವಿನ್ ಸಹಾಯಕ:

ವಿಮಾನ ನಿಲ್ದಾಣಗಳಲ್ಲಿ ಡಿಜಿಟಲ್ ಟ್ವಿನ್(ಅವಳಿ) ತಂತ್ರಜ್ಞಾನದ ಸಮರ್ಪಕ ಬಳಕೆಯಿಂದಾಗಿ ನಿಖರವಾದ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ವೃದ್ಧಿಯಾಗಲಿದ್ದು, ವಿಮಾನಗಳ ಆಗಮನ-ನಿರ್ಗಮನದ ಸಮಯ ಪಟ್ಟಿ, ಸಾಮರ್ಥ್ಯ ನಿರ್ವಹಣೆ, ಅಪಾಯದ ಅಂದಾಜು ಗ್ರಹಿಸಲು ಹೆಚ್ಚು ಸಹಾಯವಾಗಲಿದೆ. ಜೊತೆಗೆ, ವಿಮಾನ ನಿಲ್ದಾಣಗಳಲ್ಲಿ ಲಗೇಜ್ ನಿರ್ವಹಣೆ, ನಿಲ್ದಾಣದ ಸುತ್ತಲಿನ ಚಟುವಟಿಕೆಗಳ ಮೇಲೆ ಸದಾ ಕಣ್ಗಾವಲಿನ ಭದ್ರತೆ ಸಾಧ್ಯವಾಗಲಿದೆ ಎಂದು ಚಿಲಕ ಮಹೇಶ್ ನುಡಿದರು.

ವಿಮಾನಗಳ ಚಲನವಲನದ ಜೊತೆಗೆ ನಿಲ್ದಾಣಗಳ ಚಟುವಟಿಕೆಗಳ ಸ್ವಯಂಚಾಲಿತ ದಾಖಲು, ನೈಜ ಸಮಯದಲ್ಲಿ ನಿಲ್ದಾಣದ ವಾಹನಗಳ ಹಾಗೂ ವಿಮಾನಗಳ ಚಲನೆಯ ಮೇಲೆ ಕಣ್ಣಿಡುವುದು, ವಿಳಂಬ ಸಾಧ್ಯತೆಗಳ ಕುರಿತು ಎಚ್ಚರಿಕೆ ನೀಡುವುದು ಹೆಚ್ಚು ಸುಲಭವಾಗುತ್ತದೆ ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X