Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆರೋಪಗಳಿದ್ದರೆ ದಾಖಲೆಗಳೊಂದಿಗೆ ತನಿಖಾ...

ಆರೋಪಗಳಿದ್ದರೆ ದಾಖಲೆಗಳೊಂದಿಗೆ ತನಿಖಾ ಸಂಸ್ಥೆಗಳಿಗೆ ನೀಡಲಿ : ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

"ಹಿಂದೆ ಆರೆಸ್ಸೆಸ್‌ ಕುರಿತು ಟೀಕೆ ಮಾಡುತ್ತಿದ್ದವರು ಈಗ ಅದೇ ಆರೆಸ್ಸೆಸ್‌ ಚಡ್ಡಿ ಹಾಕಿಕೊಂಡು ಆತ್ಮವಂಚನೆಯಿಂದ ತಿರುಗಾಡುತ್ತಿದ್ದಾರೆ"

ವಾರ್ತಾಭಾರತಿವಾರ್ತಾಭಾರತಿ17 Oct 2026 7:31 PM IST
share
ಆರೋಪಗಳಿದ್ದರೆ ದಾಖಲೆಗಳೊಂದಿಗೆ ತನಿಖಾ ಸಂಸ್ಥೆಗಳಿಗೆ ನೀಡಲಿ : ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕಲಬುರಗಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಗಾಳಿಯಲ್ಲಿ ಗುಂಡು ಹಾರಿಸುವ ಬದಲು ತಮ್ಮ ಬಳಿ ಇರುವ ದಾಖಲೆಗಳು ಮತ್ತು ಮಾಹಿತಿಯನ್ನು ತನಿಖಾ ಸಂಸ್ಥೆಗಳಿಗೆ ಸಲ್ಲಿಸಲಿ. ತನಿಖೆಯಲ್ಲಿ ಲಭ್ಯವಾಗುವ ಸುಳಿವುಗಳ ಆಧಾರದ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ, ಐಟಿ-ಬಿಟಿ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತನಿಖೆ ನಡೆಯುತ್ತಿರುವಾಗ ಅದರ ಪ್ರಕ್ರಿಯೆ ಮತ್ತು ಕ್ರಮಗಳ ಬಗ್ಗೆ ಹೊರಗಿನಿಂದಲೇ ನಿರ್ಧಾರಕ್ಕೆ ಬರುವುದು ಸರಿಯಲ್ಲ. ಕುಮಾರಸ್ವಾಮಿ ಅವರ ಬಳಿ ನಿರ್ದಿಷ್ಟ ಮಾಹಿತಿ ಇದ್ದರೆ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ತೆರಳಿ ದಾಖಲೆಗಳನ್ನು ಸಲ್ಲಿಸಲಿ. ನಮ್ಮ ಮೇಲೆ ನಂಬಿಕೆ ಇಲ್ಲದಿದ್ದರೆ ನ್ಯಾಯಾಲಯದ ಮುಂದೆ ದಾಖಲೆಗಳನ್ನು ಸಲ್ಲಿಸಿ ಸತ್ಯಾಂಶವನ್ನು ಸಾಬೀತುಪಡಿಸಲಿ ಎಂದು ಹೇಳಿದರು.

ರಾಜಕೀಯದಲ್ಲಿ ಘನತೆ ಯಾರಿಂದ ಕಡಿಮೆಯಾಗುತ್ತಿದೆ ಎಂಬುದನ್ನು ಜನರೇ ನಿರ್ಧರಿಸುತ್ತಾರೆ. ದಲಿತ ಸಮುದಾಯದ ಕುರಿತು ವ್ಯಂಗ್ಯವಾಗಿ ಮಾತನಾಡುವುದರಿಂದ ತಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಆದರೆ, ಇಂತಹ ಹೇಳಿಕೆಗಳು ಮಾತನಾಡುವವರ ಭಾಷೆ ಮತ್ತು ನುಡಿಯ ಮೂಲಕ ಅವರ ಮನೋಭಾವವನ್ನು ತೋರಿಸುತ್ತವೆ ಎಂದು ಟೀಕಿಸಿದರು.

“ನಾವು ನಿಮ್ಮಂತೆ ರಾಜಕೀಯ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ” ಎಂದು ಹೇಳಿದ ಪ್ರಿಯಾಂಕ್ ಖರ್ಗೆ, ತಮ್ಮ ವಿರುದ್ಧ ಆರೋಪ ಮಾಡುವವರು ಆಧಾರಸಹಿತವಾಗಿ ಮಾತನಾಡಬೇಕು ಎಂದರು. ಆರೆಸ್ಸೆಸ್‌ ಕುರಿತು ಹಿಂದೆ ಟೀಕಾತ್ಮಕವಾಗಿ ಬರೆದವರು ಈಗ ಅದೇ ಆರೆಸ್ಸೆಸ್‌ ನ ಚಡ್ಡಿ ಹಾಕಿಕೊಂಡು ಆತ್ಮವಂಚನೆಯಿಂದ ತಿರುಗಾಡುತ್ತಿದ್ದಾರೆ. ಅವರು ತಮ್ಮ ಕುಟುಂಬಕ್ಕೆ ನಿಜಾಂಶ ಹೇಳಿಲ್ಲ; ಇನ್ನು ಸಾರ್ವಜನಿಕವಾಗಿ ಏನು ಸತ್ಯ ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು.

ಸ್ಟಿಂಗ್ ಆಪರೇಷನ್‌ನಲ್ಲಿ ಸಚಿವರ ಕೈವಾಡವಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದ ಕುರಿತು ಸಮರ್ಪಕ ತನಿಖೆ ನಡೆಯುತ್ತಿದ್ದು, ಸತ್ಯಾಂಶ ಹೊರಬರಲಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರೇ ಇದರ ಹಿಂದೆ ಯಾಕೆ ಇರಬಾರದು ಎಂದು ಪ್ರಶ್ನಿಸಿದರು.

ಸ್ಟಿಂಗ್ ಆಪರೇಷನ್‌ನಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ನಾಯಕ ಸಿ.ಟಿ. ರವಿ ಅವರು ಮೊದಲು ತಮ್ಮ ಧ್ವನಿ ಮಾದರಿಯನ್ನು ನೀಡಲಿ. ಈ ಕಾರ್ಯಾಚರಣೆಯ ನಿರ್ದೇಶಕರು ಯಾರು, ಚಿತ್ರೀಕರಣ ನಡೆಸಿದವರು ಯಾರು ಎಂಬುದೂ ತನಿಖೆಯಿಂದ ಬಹಿರಂಗವಾಗಲಿ ಎಂದು ಹೇಳಿದರು.

ಪ್ರಕರಣದ ತನಿಖೆಯನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕೆಂದು ಹೇಳುವುದು ಕಾರ್ಯಸಾಧ್ಯವಲ್ಲ. ತನಿಖೆಯಲ್ಲಿ ಎಲ್ಲ ಅಂಶಗಳನ್ನು ಪರಿಶೀಲಿಸಬೇಕಾಗುತ್ತದೆ. ಬಳಿಕ ಎಲ್ಲವೂ ಹೊರಬರಲಿದೆ ಎಂದು ತಿಳಿಸಿದರು.

ಕೆಪಿಎಸ್‌ಸಿ ಪ್ರಕರಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಕುರಿತು ಸುಳ್ಳು ಮಾಹಿತಿ ನೀಡಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ವಾಸ್ತವಾಂಶಗಳಿವೆ. ಅದನ್ನು ಪರಿಶೀಲಿಸಿದರೆ ಸರ್ಕಾರದ ನಿಲುವು ಸ್ಪಷ್ಟವಾಗುತ್ತದೆ. ಆರೋಪ ಮಾಡಿದವರು ಅದನ್ನು ನೋಡಿದ್ದಾರೆಯೇ ಎಂದು ಪ್ರಶ್ನಿಸಿದರು.

ವಿಜಯದಶಮಿ ಅಂಗವಾಗಿ ಆರೆಸ್ಸೆಸ್‌ ಪಥಸಂಚಲನ ನಡೆಸುವ ವಿಚಾರವಾಗಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಆಯೋಜಕರು ಯಾವ ಮಾರ್ಗದಲ್ಲಿ ಪಥಸಂಚಲನ ನಡೆಸಲಿದ್ದಾರೆ ಎಂಬುದೂ ಸೇರಿದಂತೆ ಅಗತ್ಯ ವಿವರಗಳನ್ನು ಅರ್ಜಿಯಲ್ಲಿ ಸಲ್ಲಿಸಬೇಕು. ಅರ್ಜಿಯನ್ನು ಪರಿಶೀಲಿಸಿದ ಬಳಿಕ ಕಾನೂನು ಪ್ರಕಾರ ಅನುಮತಿ ನೀಡುವ ಕುರಿತು ನಿರ್ಧರಿಸಲಾಗುವುದು ಎಂದರು.

ರಾಜ್ಯದಲ್ಲಿ ಸುಮಾರು 82 ಸಾವಿರ ಸ್ಥಳಗಳಲ್ಲಿ ಗಣೇಶ ವಿಸರ್ಜನೆಗೆ ಅನುಮತಿ ನೀಡಲಾಗಿದೆ. ಅದೇ ರೀತಿ ಆರೆಸ್ಸೆಸ್‌ ನವರು ಕೂಡ ನಿಯಮಾನುಸಾರ ಅರ್ಜಿ ಸಲ್ಲಿಸಿದರೆ, ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಕಬ್ಬಿನ ಎಫ್‌ಆರ್‌ಪಿ ನಿಗದಿಪಡಿಸುವುದು ಕೇಂದ್ರದ ಜವಾಬ್ದಾರಿ :

ಕಬ್ಬಿನ ನ್ಯಾಯಸಮ್ಮತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ನಿಗದಿಪಡಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದರು. ಕಬ್ಬಿನ ಬೆಲೆ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದ್ದು, ರೈತರ ಎಲ್ಲ ಸಮಸ್ಯೆಗಳಿಗೆ ರಾಜ್ಯ ಸರ್ಕಾರವೇ ಪರಿಹಾರ ಒದಗಿಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ತನ್ನ ಹೊಣೆಗಾರಿಕೆಯನ್ನು ನಿರ್ವಹಿಸಬೇಕು ಎಂದು ಆಗ್ರಹಿಸಿದರು.

ರೈತರ ಸಮಸ್ಯೆಗಳನ್ನು ಆಲಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಖುದ್ದಾಗಿ ಹುಬ್ಬಳ್ಳಿಗೆ ಬರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಥಳೀಯ ಸಂಸದ ಪ್ರಹ್ಲಾದ್ ಜೋಶಿ ಎಲ್ಲಿದ್ದಾರೆ ಎಂಬ ಪ್ರಶ್ನೆಯೂ ಮುಖ್ಯವಾಗಿದೆ. ಅವರ ನಡವಳಿಕೆಯೇ ರೈತರ ಪರ ಇರುವ ಕಾಳಜಿಯನ್ನು ತೋರಿಸುತ್ತದೆ ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ಜಗದೇವ ಗುತ್ತೇದಾರ್, ತಿಪ್ಪಣ್ಣಪ್ಪ ಕಮಕನೂರ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿರಣ್ ದೇಶಮುಖ ಉಪಸ್ಥಿತರಿದ್ದರು.

Tags

KumaraswamyPriyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X