Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯಲ್ಲಿ ಅಕ್ಕ ಕೆಫೆ (ಒಲವಿನ ಊಟ)...

ಕಲಬುರಗಿಯಲ್ಲಿ ಅಕ್ಕ ಕೆಫೆ (ಒಲವಿನ ಊಟ) ಉದ್ಘಾಟನೆ

ಚಹಾ ಸವಿದ ಸಚಿವರು, ಶಾಸಕರು

ವಾರ್ತಾಭಾರತಿವಾರ್ತಾಭಾರತಿ24 Feb 2025 8:43 PM IST
share
ಕಲಬುರಗಿಯಲ್ಲಿ ಅಕ್ಕ ಕೆಫೆ (ಒಲವಿನ ಊಟ) ಉದ್ಘಾಟನೆ

ಕಲಬುರಗಿ : ನಗರದ ಐವಾನ್-ಎ-ಶಾಹಿ ರಸ್ತೆಯಲ್ಲಿರುವ ತಾಲೂಕು ಪಂಚಾಯತ್ ಕಚೇರಿ ಬಳಿ ಸುಮಾರು 15 ಲಕ್ಷ ರೂ. ವೆಚ್ಚ ಮಾಡಿ ಸ್ಥಾಪಿಸಲಾಗಿರುವ ಅಕ್ಕ ಕೆಫೆಯನ್ನು (ಒಲವಿನ ಊಟ) ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಉದ್ಘಾಟಿಸಿದರು.

ಕೆಫೆಯ ಮಾಲಕರಾಗಿರುವ ಕಲಬುರಗಿ ತಾಲೂಕಿನ ಕೆಸರಟಗಿಯ ಆರಾಧ್ಯ ಸಂಜೀವಿನಿ ಮಹಿಳಾ ಸ್ವ-ಸಹಾಯ ಗುಂಪಿನ ಮುಖ್ಯಸ್ಥೆ ಆರತಿ ಪಾಟೀಲ ಅವರೊಂದಿಗೆ ಕೆಫೆ ಕುರಿತು ಸಮಾಲೋಚಣೆ ನಡೆಸಿ ಮಾಹಿತಿ ಪಡೆದ ಸಚಿವರು ಮತ್ತು ಶಾಸಕರು ಕೆಫೆಯಲ್ಲಿನ ಚಹಾ ಸವಿದರು. ಸಚಿವ ಪ್ರಿಯಾಂಕ್ ಖರ್ಗೆ ಎಲ್ಲರಿಗೂ ಚಹಾ ಬಡಿಸುವ ಮೂಲಕ ಗಮನ ಸೆಳೆದರು.

ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌, ಸಂಸದ ರಾಧಾಕೃಷ್ಣ ದೊಡ್ಡಮನಿ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೆಗೌಡ, ಶಾಸಕರಾದ ಅಲ್ಲಮಪ್ರಭು ಪಾಟೀಲ್‌, ಎಂ.ವೈ.ಪಾಟೀಲ್‌, ವಿಧಾನ ಪರಿಷತ್ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಯಲ್ಲಪ್ಪ ನಾಯ್ಕೋಡಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಎಂ.ಸುಂದರೇಶ ಬಾಬು, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನದ ನಿರ್ದೇಶಕಿ ಪಿ.ಐ.ಶ್ರೀವಿದ್ಯಾ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ನಗರ ಪೊಲೀಸ್ ಆಯಕ್ತ ಡಾ.ಎಸ್.ಡಿ.ಶರಣಪ್ಪ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಸಜ್ಜನ್ ಉಪಸ್ಥಿತರಿದ್ದರು.

ಪಂಚಾಯತ್ ರಾಜ್ ಹಾಗೂ ರಾಷ್ಟ್ರೀಯ ಗ್ರಾಮೀಣಾ ಜೀವನೋಪಾಯ ಅಭಿಯಾನ ಕಾರ್ಯಕ್ರಮದ ಒಗ್ಗೂಡಿಸುವಿಕೆ ವೇದಿಕೆಯಡಿ ಮಹಿಳೆಯರು ಆಹಾರ ಉತ್ಪಾದನೆ ಸೇವೆಗಳಡಿ ಸುಸ್ಥಿರ ಜೀವನೋಪಾಯ ಕೈಗೊಳ್ಳಲು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ರಾಜ್ಯದಲ್ಲಿ ಕೌಶಲ್ಯಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಂಜೀವಿನಿ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಪ್ರತಿ ಜಿಲ್ಲೆಯಲ್ಲಿ 2 ಅಕ್ಕ ಕೆಫೆಗಳನ್ನು ಸ್ಥಾಪಿಸಲಾಗುತ್ತಿದ್ದು, ಕಲಬುರಗಿಯಲ್ಲಿ ಇಂದಿಲ್ಲಿ ಮೊದಲನೇ ಕೆಫೆಗೆ ಚಾಲನೆ ನೀಡಲಾಯಿತು.

ಅಕ್ಕ-ಕೆಫೆ "ಒಲವಿನ ಊಟ" ಶೀರ್ಷಿಕೆಯಡಿ ರಾಜ್ಯಾದಾದ್ಯಂತ ಒಂದೇ ಮಾದರಿಯಲ್ಲಿ ಈ ಕೆಫೆಗಳನ್ನು ಸ್ಥಾಪಿಸಲಾಗುತ್ತಿದ್ದು, ಆರಾಧ್ಯ ಸ್ವ-ಸಹಾಯ ಗುಂಪು ಹಾಗೂ ಕಲಬುರಗಿ ತಾಲೂಕು ಪಂಚಾಯತ್‌ ನಡುವೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, 4 ಸ್ವ-ಸಹಾಯ ಗುಂಪಿನ ಮಹಿಳೆಯರು ಇಲ್ಲಿ ಗುಂಪು ಚಟುವಟಿಕೆಯಾಗಿ ಈ ಕೆಫೆ ನಡೆಸಿಕೊಂಡು ಹೋಗಲಿದ್ದಾರೆ.

ಆರಾಧ್ಯ ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಅಕ್ಕ-ಕೆಫೆ ಉದ್ಯಮ ನಡೆಸಲು ಕುಡುಂಬಶ್ರೀ ಸಂಸ್ಥೆಯಿಂದ ತಾಂತ್ರಿಕ ನೆರವು ಸಿಕ್ಕಿದ್ದು, ಕೆ.ಆರ್.ಐ.ಡಿ.ಎಲ್ ಸಂಸ್ಥೆ ಸಿವಿಲ್ ಕಾಮಗಾರಿಗಳನ್ನು ಕೈಗೊಂಡಿದೆ. ಕೆಫೆಗೆ ಬೇಕಾದ ಪೂರಕ ಪೀಠೋಪಕರಣಗಳನ್ನು, ಮೇಜು, ರಶೀದಿ ಯಂತ್ರಗಳು ಪೂರೈಸಲಾಗಿದೆ.

ಅಕ್ಕ-ಕೆಫೆ ನಿರ್ವಹಣೆ ಮಾಡಲು ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ ಹೋಟೆಲ್ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್‌ನಲ್ಲಿ ಮತ್ತು ಕುಡುಂಬಶ್ರೀ ಸಂಸ್ಥೆ ಮೂಲಕ ಕೆಫೆ ನಿರ್ವಹಣೆ ಸೇರಿದಂತೆ ಪಾಕ ತಯಾರಿಕಾ ವಿಧಾನಗಳು, ಗ್ರಾಹಕ ಸೇವೆ, ಹಣಕಾಸು ನಿರ್ವಹಣೆ, ಶುಚಿತ್ವ, ಆಹಾರ ಸಾಮಾಗ್ರಿಗಳ ಶೇಖರಣೆ ಮತ್ತು ಸುರಕ್ಷಿತ ಸಮವಸ್ತ್ರ ಬಳಕೆಯ ಕುರಿತು ವೃತ್ತಿಪರ ತರಬೇತಿ ನೀಡಲಾಗಿದ್ದು, ಒಟ್ಟಾರೆಯಾಗಿ ಇಲ್ಲಿ ಆರೋಗ್ಯ ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡ ಪ್ರಾಧಿಕಾರ (ಎಫ್.ಎಸ್.ಎಸ್.ಎ.ಐ) ಪ್ರಮಾಣ ಪತ್ರದ ಜೊತೆ ಉದ್ಯಮ ಪರವಾನಿಗೆ, ಜಿ.ಎಸ್.ಟಿ. ನೊಂದಣಿ, ಪ್ಯಾನ್ ಕಾರ್ಡ್ ಹೊಂದಿರುವ ಅಕ್ಕ ಕೆಫೆ ವಿವಿಧ ರೀತಿಯ ಊಟ, ಉಪಹಾರ, ಸಿಹಿ ಭಕ್ಷಗಳ ತಯಾರಿಕೆಯಲ್ಲಿ ಅನುಭವ ಹೊಂದಿದೆ. ಸಭೆ-ಸಮಾರಂಭಗಳಿಗೆ ಕಚೇರಿಗಳು ಇಲ್ಲಿಂದ ಸೇವೆ ಪಡೆಯಬಹುದಾಗಿದೆ. ಸಾಮಾನ್ಯ ಹೋಟೆಲ್‌ ಗಿಂತ ಇಲ್ಲಿ ದರಗಳು ಕಡಿಮೆ ಇರಲಿದ್ದು, ಶುಚಿ-ರುಚಿಯಾದ ಬಿಸಿ-ಬಿಸಿ ಊಟ, ಉಪಹಾರ ಇಲ್ಲಿ ಸಿಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X