ನ.14ರಂದು ಕಲಬುರಗಿಯಲ್ಲಿ ಕೃಷಿಕಲ್ಪ ಸೆಂಟರ್ ಆಫ್ ಎಕ್ಸ್ಲೆನ್ಸ್ ನೂತನ ಕಚೇರಿ ಉದ್ಘಾಟನೆ

ಕಲಬುರಗಿ : ಇಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಇನ್ನೋವೇಶನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿ (KITS)ಯ LEAP ಯೋಜನೆಯಡಿ ಆರ್ಥಿಕ ಸಹಕಾರದೊಂದಿಗೆ ಕೃಷಿಕಲ್ಪ ಫೌಂಡೇಶನ್ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ‘ಸೆಂಟರ್ ಆಫ್ ಎಕ್ಸ್ಲೆನ್ಸ್ ಇನ್ಕ್ಯುಬೇಷನ್ ಸೆಂಟರ್’ನ ಕಲಬುರಗಿ ನೂತನ ಕಚೇರಿಯ ಉದ್ಘಾಟನಾ ಸಮಾರಂಭ ನವೆಂಬರ್ 14ರಂದು ಶನಿವಾರ ಬೆಳಿಗ್ಗೆ 9.30ಕ್ಕೆ ನಗರದ ಗಾಜಿಪುರ ಚಕ್ಕರ್ ಕಟ್ಟಾದಲ್ಲಿರುವ (ಸಿಟಿ ಸೆಂಟರ್ ಮಾಲ್ ಸಮೀಪ, ಬ್ಯಾಂಕ್ ಆಫ್ ಮಹಾರಾಷ್ಟ್ರ ಮುಂಭಾಗ) ಕೃಷಿಕಲ್ಪ ಸೆಂಟರ್ ಆಫ್ ಎಕ್ಸ್ಲೆನ್ಸ್ ಕಚೇರಿಯಲ್ಲಿ ನಡೆಯಲಿದೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಸಮಾರಂಭದಲ್ಲಿ ಗೌರವ ಉಪಸ್ಥಿತಿ ವಹಿಸಲಿದ್ದಾರೆ. ರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಇಲಾಖೆಯ ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯಸಿಂಗ್, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ಅಧ್ಯಕ್ಷೆ ಹಾಗೂ ಉತ್ತರ ಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ ಮತ್ತು ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದರ್ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರಾದ ಎಂ.ವೈ. ಪಾಟೀಲ, ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ, ವಿಧಾನ ಪರಿಷತ್ ಸದಸ್ಯರಾದ ಡಾ. ಬಿ.ಜಿ. ಪಾಟೀಲ, ತಿಮ್ಮಣ್ಣಪ್ಪ ಕಮಕನೂರ, ಶಶೀಲ ಜಿ. ನಮೋಶಿ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಜಗದೇವ ಗುತ್ತೇದಾರ್, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯ್ಯದ್ ಮಹೆಮೂದ್ ಚಿಸ್ತಿ ಸಾಹೇಬ್, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ರಶೀದ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್ ಹಾಗೂ ಮಹಾನಗರ ಪಾಲಿಕೆ ಮಹಾಪೌರ ಅಜ್ಮಲ್ ಅಹ್ಮದ್ ಗೋಲಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್, ಕೆಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಡಾ. ಬಿ. ಸುಶೀಲಾ, ಕಲಬುರಗಿ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರ್, ಕೃಷಿಕಲ್ಪ ಎಸೆಲ್ ಅಧ್ಯಕ್ಷ ಹಾಗೂ ಸಂಸ್ಥಾಪಕ ಪಾಲುದಾರ ಡಾ. ಪ್ರಶಾಂತ ಪ್ರಕಾಶ ಮತ್ತು ಕೃಷಿಕಲ್ಪದ ಸಿಒಒ ಸಿ.ಎಂ. ಪಾಟೀಲ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.






