Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. 371ಜೆ ವ್ಯಾಪ್ತಿಗೆ ಯಾವುದೇ ಹಳ್ಳಿ...

371ಜೆ ವ್ಯಾಪ್ತಿಗೆ ಯಾವುದೇ ಹಳ್ಳಿ ಸೇರ್ಪಡೆ ಸಹಿಸಲಾಗದು: ಲಕ್ಷ್ಮಣ ದಸ್ತಿ

ವಿಜಯೇಂದ್ರ ಹೇಳಿಕೆಗೆ ಖಂಡನೆ; ಕ್ಷಮೆ ಯಾಚನೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ3 Nov 2026 4:12 PM IST
share
371ಜೆ ವ್ಯಾಪ್ತಿಗೆ ಯಾವುದೇ ಹಳ್ಳಿ ಸೇರ್ಪಡೆ ಸಹಿಸಲಾಗದು: ಲಕ್ಷ್ಮಣ ದಸ್ತಿ

ಕಲಬುರಗಿ,ನ.3: ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ 371ಜೆ ಕಲಂ ಅಡಿಯಲ್ಲಿ ದೊರೆತಿರುವ ವಿಶೇಷ ಸ್ಥಾನಮಾನವನ್ನು ಬೇರೆ ಜಿಲ್ಲೆಗಳಿಗೆ ವಿಸ್ತರಿಸುವ ಪ್ರಯತ್ನವನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಈ ಸಂಬಂಧ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬೆಂಬಲ ನೀಡಿರುವುದು ಖಂಡನೀಯ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಡಾ.ಲಕ್ಷ್ಮಣ ದಸ್ತಿ ಹೇಳಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಅವರ ಧೋರಣೆಯಿಂದ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಸುಮಾರು 1.30 ಕೋಟಿ ಜನರ ಭಾವನೆಗಳಿಗೆ ಧಕ್ಕೆಯಾಗಿದೆ. ಅವರು ತಕ್ಷಣ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿ, ಸ್ಪಷ್ಟನೆ ನೀಡಬೇಕು. ಇಲ್ಲದಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

371ಜೆ ಕಲಂ ಜಾರಿಗೆ ಕಲ್ಯಾಣ ಕರ್ನಾಟಕದ ಜನರು ದಶಕಗಳ ಕಾಲ ಹೋರಾಟ ನಡೆಸಿದ್ದಾರೆ. ಅನೇಕ ಪೊಲೀಸ್ ಪ್ರಕರಣಗಳನ್ನು ಎದುರಿಸಿ, ತ್ಯಾಗ ಮಾಡಿದ ಫಲವಾಗಿ ಈ ವಿಶೇಷ ಸ್ಥಾನಮಾನ ದೊರೆತಿದೆ. ಇದು ನಮ್ಮ ಭಾಗದ ಪಿತ್ರಾರ್ಜಿತ ಆಸ್ತಿಯಿದ್ದಂತೆ. ಅದನ್ನು ಬೇರೆ ಪ್ರದೇಶಗಳಿಗೆ ಹಂಚಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಬೇರೆ ಭಾಗಗಳ ಹೋರಾಟಕ್ಕೆ ಬೆಂಬಲ;

ರಾಜ್ಯದ ಯಾವುದೇ ಭಾಗದ ಜನರು ತಮ್ಮ ಪ್ರದೇಶದ ಅಭಿವೃದ್ಧಿಗಾಗಿ ಸಂವಿಧಾನಬದ್ಧವಾಗಿ ಹೋರಾಟ ನಡೆಸಲು ನಮ್ಮ ಬೆಂಬಲವಿದೆ. 371ನೇ ಕಲಂಗೆ ತಿದ್ದುಪಡಿ ತಂದು ಪ್ರತ್ಯೇಕ ಪ್ಯಾಕೇಜ್ ಅಥವಾ ವಿಶೇಷ ಸೌಲಭ್ಯಗಳನ್ನು ಪಡೆಯಲು ಅವರು ಹೋರಾಡಬಹುದು. ಆದರೆ, ಈಗಾಗಲೇ ಕಲ್ಯಾಣ ಕರ್ನಾಟಕಕ್ಕೆ ನೀಡಿರುವ 371ಜೆ ವ್ಯಾಪ್ತಿಗೆ ಬೇರೆ ಜಿಲ್ಲೆಗಳನ್ನು ಸೇರಿಸುವುದನ್ನು ಸಹಿಸುವುದಿಲ್ಲ ಎಂದರು.

ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಇಂತಹ ಭರವಸೆಗಳನ್ನು ನೀಡುವ ಮುನ್ನ ಅದರ ಪರಿಣಾಮಗಳ ಬಗ್ಗೆ ಯೋಚಿಸಬೇಕು. ಕಲ್ಯಾಣ ಕರ್ನಾಟಕದ ಜನರ ಭಾವನೆಗಳಿಗೆ ಧಕ್ಕೆ ತರುವ ಧೋರಣೆ ಮುಂದುವರಿಸಿದರೆ, ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಉಗ್ರ ಹೋರಾಟದ ಎಚ್ಚರಿಕೆ: 371ಜೆ ವ್ಯಾಪ್ತಿಗೆ ಬೇರೆ ಜಿಲ್ಲೆ ಅಥವಾ ಹಳ್ಳಿಯನ್ನು ಸೇರಿಸಲು ರಾಜಕೀಯವಾಗಿ ಅಥವಾ ಕಾನೂನುಬಾಹಿರವಾಗಿ ಪ್ರಯತ್ನಿಸಿದರೆ, ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು. ಈ ಹೋರಾಟಕ್ಕೆ ಎಲ್ಲ ಜಿಲ್ಲೆಗಳ ಸಂಘ-ಸಂಸ್ಥೆಗಳು ಹಾಗೂ ಸಂಘಟನೆಗಳು ಸಜ್ಜಾಗಬೇಕು ಎಂದು ಕರೆ ನೀಡಿದರು.

ಸಿಂದಗಿ ಮತ್ತು ವಿಜಯಪುರ ಭಾಗದವರು ತಮ್ಮ ಹಕ್ಕುಗಳಿಗಾಗಿ ಪ್ರತ್ಯೇಕವಾಗಿ ಹೋರಾಟ ನಡೆಸಲಿ. ಆದರೆ, ಕಲ್ಯಾಣ ಕರ್ನಾಟಕದ ಹಕ್ಕುಗಳಿಗೆ ಕೈಹಾಕಬಾರದು. ವಿಜಯೇಂದ್ರ ತಮ್ಮ ಹೇಳಿಕೆಯನ್ನು ಹಿಂಪಡೆದು, ಸ್ಪಷ್ಟನೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ಅವರ ವಿರುದ್ಧ ರಾಜ್ಯವ್ಯಾಪಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಕಲ್ಯಾಣ ಕರ್ನಾಟಕಕ್ಕೆ 371ಜೆ ಕಲಂ ದೊರೆತಿರುವುದು ಪ್ರತ್ಯೇಕ ರಾಜ್ಯದ ಬೇಡಿಕೆಗೆ ಪರ್ಯಾಯವಾಗಿ ಅಲ್ಲ; ಅಖಂಡ ಕರ್ನಾಟಕದ ಭಾಗವಾಗಿಯೇ ಈ ಪ್ರದೇಶದ ಜನರಿಗೆ ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದಾಗಿದೆ. ರಾಜ್ಯದ ಎಲ್ಲ ಕನ್ನಡಿಗರು ಈ ವಿಶೇಷ ಸ್ಥಾನಮಾನದ ಆಶಯವನ್ನು ಅರ್ಥಮಾಡಿಕೊಂಡು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಬಸವರಾಜ ದೇಶಮುಖ, ಪ್ರೊ. ಆರ್.ಕೆ ಹುಡಗಿ, ಡಾಮ ಬಸವರಾಜ ಕಮಕನೂರ್, ಮನೀಷ್ ರಾಜು, ರೌಫ್ ಖಾದ್ರಿ, ಡಾ. ಗಾಂಧಿಜೀ ಮೋಳಕೇರಿ, ಡಾ. ಮಾಜಿದ್ ದಾಗಿ ಉಪಸ್ಥಿತರಿದ್ದರು.

Tags

Article 371(J)Laxman Dastikalburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X