Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸಿದ್ಧಾಂತ ಮತ್ತು ಪ್ರಾಯೋಗಿಕ ಜ್ಞಾನ...

ಸಿದ್ಧಾಂತ ಮತ್ತು ಪ್ರಾಯೋಗಿಕ ಜ್ಞಾನ ಸಮನ್ವಯಕ್ಕೆ ನವೀನ ಬೋಧನಾ ವಿಧಾನ ಅಗತ್ಯ: ಪ್ರೊ. ಬಿರಾದಾರ್

ವಾರ್ತಾಭಾರತಿವಾರ್ತಾಭಾರತಿ13 Nov 2026 7:40 PM IST
share
ಸಿದ್ಧಾಂತ ಮತ್ತು ಪ್ರಾಯೋಗಿಕ ಜ್ಞಾನ ಸಮನ್ವಯಕ್ಕೆ ನವೀನ ಬೋಧನಾ ವಿಧಾನ ಅಗತ್ಯ: ಪ್ರೊ. ಬಿರಾದಾರ್

ಕಲಬುರಗಿ: ಪದವೀಧರರ ನಿರುದ್ಯೋಗ ಹಾಗೂ ಯುವಜನರಲ್ಲಿನ ಕೌಶಲ್ಯ ಕೊರತೆಯ ಸವಾಲುಗಳನ್ನು ಎದುರಿಸಲು ಅಧ್ಯಾಪಕರು ಸಾಂಪ್ರದಾಯಿಕ ಬೋಧನಾ ವಿಧಾನಗಳ ಬಗ್ಗೆ ಮರುಚಿಂತನೆ ನಡೆಸಿ, ನವೀನ ಹಾಗೂ ಪರಿಣಾಮಕಾರಿ ಬೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ್ ಹೇಳಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಸಾರ್ವಜನಿಕ ಆಡಳಿತ ವಿಭಾಗವು ಆಂತರಿಕ ಗುಣಮಟ್ಟ ಭರವಸೆ ಕೋಶದ (ಐಕ್ಯೂಎಸಿ) ಸಹಯೋಗದಲ್ಲಿ ಆಯೋಜಿಸಿದ್ದ ‘ತರಗತಿಗಳಲ್ಲಿ ಸಿದ್ಧಾಂತಗಳನ್ನು ಬೋಧಿಸುವ ಬೋಧನಾ ವಿಧಾನಗಳು’ ಕುರಿತ ಒಂದು ದಿನದ ಅಧ್ಯಾಪಕ ಅಭಿವೃದ್ಧಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ತರಗತಿಗಳಲ್ಲಿ ಬೋಧಿಸುವ ಸೈದ್ಧಾಂತಿಕ ಜ್ಞಾನ ಮತ್ತು ಕಾರ್ಯಕ್ಷೇತ್ರದಲ್ಲಿ ಅದರ ಪ್ರಾಯೋಗಿಕ ಅನ್ವಯದ ನಡುವೆ ಅಂತರವಿದೆ. ಇದರಿಂದ ಅನೇಕ ಪದವೀಧರರು ಉದ್ಯೋಗ ಪಡೆಯಲು ಪರದಾಡುವಂತಾಗಿದೆ. ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಹೆಚ್ಚಿಸಲು ಸಿದ್ಧಾಂತದೊಂದಿಗೆ ಪ್ರಾಯೋಗಿಕ ಜ್ಞಾನ, ಸಾಮರ್ಥ್ಯ ಹಾಗೂ ವೃತ್ತಿಪರ ಕೌಶಲಗಳನ್ನು ಬೆಳೆಸುವತ್ತ ಅಧ್ಯಾಪಕರು ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಸಾರ್ವಜನಿಕ ಆಡಳಿತ ವಿಭಾಗದ ಮುಖ್ಯಸ್ಥ ಹಾಗೂ ಕಾರ್ಯಾಗಾರದ ನಿರ್ದೇಶಕ ಪ್ರೊ. ಪ್ರಭಾಕರನ್ ಸೆಲ್ವರಾಜ್ ಮಾತನಾಡಿ, ಕಾರ್ಯಾಗಾರದಲ್ಲಿ ನಡೆದ ಮೂರು ತಾಂತ್ರಿಕ ಅವಧಿಗಳಲ್ಲಿ ವಿವಿಧ ಬೋಧನಾ ವಿಧಾನಗಳು, ಅವುಗಳ ಪ್ರಾಯೋಗಿಕ ಅನ್ವಯ ಹಾಗೂ ಉನ್ನತ ಶಿಕ್ಷಣದಲ್ಲಿ ಬೋಧನೆ ಮತ್ತು ಕಲಿಕಾ ಪ್ರಕ್ರಿಯೆ ಬಲಪಡಿಸುವ ಕುರಿತು ಚರ್ಚಿಸಲಾಯಿತು ಎಂದು ವಿವರಿಸಿದರು.

ಕಾರ್ಯಕ್ರಮದ ಸಂಯೋಜಕ ಡಾ. ಕಿರಣ್ ಎಂ. ಗಾಜನೂರ ಕಾರ್ಯಾಗಾರದ ಪ್ರಮುಖ ಕಲಿಕೆಗಳನ್ನು ಪ್ರಸ್ತಾಪಿಸಿ, ಸಹಕರಿಸಿದ ವಿಶ್ವವಿದ್ಯಾಲಯದ ಆಡಳಿತ, ಸಂಪನ್ಮೂಲ ವ್ಯಕ್ತಿಗಳು ಹಾಗೂ ಭಾಗವಹಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಪ್ರಾಧ್ಯಾಪಕರು ಮತ್ತು ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ಹಂಚಿಕೊಂಡು, ಸೈದ್ಧಾಂತಿಕ ಪರಿಕಲ್ಪನೆಗಳನ್ನು ಪರಿಣಾಮಕಾರಿಯಾಗಿ ಬೋಧಿಸಲು ಸಂವಾದಾತ್ಮಕ ಹಾಗೂ ನವೀನ ವಿಧಾನಗಳ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಪ್ರೊ. ಜಿ.ಆರ್. ಅಂಗಡಿ, ಪ್ರೊ. ವಿಜಯೇಂದ್ರ ಪಾಂಡೆ, ಪ್ರೊ. ಚಂದನ್ ಕುಮಾರ್ ಪಾಂಡಾ, ಮಹೇಂದ್ರ ಎಂ., ಡಾ. ವಾಣಿಶ್ರೀ ಜೆ., ಡಾ. ಮಲ್ಲಿಕಾರ್ಜುನ ಹೂಗಾರ ಹಾಗೂ ಡಾ. ಸಂದೀಪ್ ಇನಾಂಪುಡಿ ಸೇರಿದಂತೆ ಪ್ರಾಧ್ಯಾಪಕರು, ಸಂಪನ್ಮೂಲ ವ್ಯಕ್ತಿಗಳು, ಪ್ರತಿನಿಧಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags

coordinatetheoryProf. Biradar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X